ಶಿವಮೊಗ್ಗ: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಿ.ಎಸ್.ನಾಗಭೂಷಣ್ (70) ಬುಧವಾರ ರಾತ್ರಿ ನಿಧನರಾಗಿದ್ದಾರೆ.
ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ತಿಮ್ಮಸಂದ್ರದವರಾದ ನಾಗಭೂಷಣ್ ಅವರು ಸದ್ಯ ಶಿವಮೊಗ್ಗ ವಿನೋಬನಗರದ ಕಲ್ಲಹಳ್ಳಿಯಲ್ಲಿ ನೆಲೆಸಿದ್ದು, ಪತ್ನಿ ಸವಿತಾ ಹಾಗೂ ಅಪಾರ ಸಾಹಿತ್ಯಾಭಿಮಾನಿಗಳನ್ನು ಅಗಲಿದ್ದಾರೆ.
1952ರಲ್ಲಿ ಜನಿಸಿದ ನಾಗಭೂಷಣ ಅವರು ಗಣಿತಶಾಸ್ತ್ರದಲ್ಲಿ ಸ್ನಾತಕೋತ್ತರ ಪದಿ ಪಡೆದಿದ್ದಾರೆ. 1975ರಿಂದ 2005ರವರೆಗೆ ಆಕಾಶವಾಣಿಯ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.
ಇದನ್ನೂ ಓದಿ:ಮುಂದುವರಿದ ಭಾರೀ ಮಳೆ: ಮೈಸೂರು, ದಕ್ಷಿಣ ಕನ್ನಡ, ಶಿವಮೊಗ್ಗದ ಶಾಲೆಗಳಿಗೆ ರಜೆ ಘೋಷಣೆ
Related Articles
ನಾಗಭೂಷಣ ಅವರು ‘ಗಮನ’, ‘ಅನೇಕ’, ‘ಈ ಭೂಮಿಯಿಂದ ಆ ಆಕಾಶದವರೆಗೆ’, ‘ಕುವೆಂಪು ಸಾಹಿತ್ಯ ದರ್ಶನ’, ‘ಬೇರು ಬಿಳಲು’ ಸೇರಿದಂತೆ ಅನೇಕ ಕೃತಿಗಳನ್ನು ರಚಿಸಿದ್ದಾರೆ.
ಸಂಜೆ 4 ಗಂಟೆಗೆ ಶಿವಮೊಗ್ಗದ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನಡೆಯುವುದು. ಅಲ್ಲಿಯವರೆಗೂ ಕಲ್ಲಹಳ್ಳಿ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶವಿದೆ.