Advertisement

ತರಗತಿಗೆ ಹಾಜರಾಗದೆ ಪರೀಕ್ಷೆ ಬರೆದ ಬಿ.ಇಡಿ ವಿದ್ಯಾರ್ಥಿಗಳು; ದೂರು

08:14 AM Oct 04, 2022 | Team Udayavani |

ಸಾಗರ: ಇಲ್ಲಿನ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಅಂಗ ಸಂಸ್ಥೆಯಾದ ಡಾ. ಜಿ.ಎ. ನಾರಿಬೋಲಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಿಇಡಿಯ ಪ್ರಥಮ ಸೆಮಿಸ್ಟರ್‌ನಲ್ಲಿ 37, ಎರಡನೇ ವರ್ಷದಲ್ಲಿ 27 ವಿದ್ಯಾರ್ಥಿಗಳು ತರಗತಿಗೆ ಹಾಜರಾಗದೆ ಪರೀಕ್ಷೆ ಬರೆದಿದ್ದು, ಈ ಸಂಬಂಧ ತನಿಖೆ ನಡೆಸುವಂತೆ ಪ್ರತಿಷ್ಠಾನದ ಕೋಶಾಧ್ಯಕ್ಷ ಕವಲಕೋಡು ವೆಂಕಟೇಶ್ ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

Advertisement

ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದ ವೇಳೆಯಲ್ಲೇ ಕೆಲವರು ಬಿ.ಇಡಿ ತರಗತಿಗೆ ಹಾಜರಾಗಿರುವುದಾಗಿ ಹೇಳಿ ಪರೀಕ್ಷೆ ಬರೆದಿದ್ದಾರೆ. ಏಕ ಕಾಲದಲ್ಲಿ ಎರಡು ವಿಭಿನ್ನ ಸ್ಥಳಗಳಲ್ಲಿ ಹಾಜರಾತಿ ಹೊಂದುವುದು ಕಾನೂನಿನ ಉಲ್ಲಂಘನೆ ಎಂದು ದೂರಿನಲ್ಲಿ ಹೇಳಲಾಗಿದೆ. ದೂರಿನೊಂದಿಗೆ ಮಾಹಿತಿ ಹಕ್ಕಿನ ಕಾಯ್ದೆಯಡಿ ಪಡೆದ ಸಾಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಉಪನ್ಯಾಸಕರ ಪಟ್ಟಿಯನ್ನು ಹಾಜರುಪಡಿಸಲಾಗಿದೆ. ದೂರು ಸ್ವೀಕರಿಸಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಮತ್ತೊಂದು ದೂರು: ಎಂಡಿಎಫ್‌ನ ಹಿಂದಿನ ಪ್ರಧಾನ ಕಾರ್ಯದರ್ಶಿ ಜಗದೀಶ್ ಎಂ. ಅವರು ಸರ್ವ ಸದಸ್ಯರ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆಯ ನಂತರವೂ ಕಾರ್ಯಕಾರಿ ಮಂಡಳಿಯ ಸಭೆಗಳ ನಡಾವಳಿ ಪುಸ್ತಕವನ್ನು ಸಂಸ್ಥೆಗೆ ಹಸ್ತಾಂತರಿಸದೆ ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ ಎಂದು ಅವರ ವಿರುದ್ಧ ಹಾಲಿ ಕೋಶಾಧ್ಯಕ್ಷ ಕವಲಕೋಡು ವೆಂಕಟೇಶ್ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next