ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಸೋಲಿನ ಬಳಿಕ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಕುಸಿತ ಕಂಡಿದೆ. ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ ಟೆಸ್ಟ್ ಚಾಂಪಿಯನ್ ಶಿಪ್ ಯಾಂಕಿಂಗ್ ನಲ್ಲಿ ಐದನೇ ಸ್ಥಾನಕ್ಕಿಳಿದಿದೆ.
ಇದುವರೆಗೆ ಮೂರು ಸರಣಿಗಳಲ್ಲಿ ನಾಲ್ಕು ಪಂದ್ಯ ಗೆದ್ದಿರುವ ಭಾರತ ತಂಡ ಮೂರು ಪಂದ್ಯಗಳಲ್ಲಿ ಸೋಲನುಭವಿಸಿದೆ. ಎರಡು ಪಂದ್ಯಗಳು ಡ್ರಾ ಆಗಿದೆ. ಭಾರತ ಸದ್ಯ ಅತೀ ಹೆಚ್ಚು ಅಂದರೆ 53 ಅಂಕ ಹೊಂದಿದ್ದರೂ, ಗೆಲುವಿನ ಪ್ರತಿಶತ ಕಡಿಮೆ (49.07%) ಇರುವ ಕಾರಣ ಐದನೇ ಸ್ಥಾನದಲ್ಲಿದೆ.
ಇದನ್ನೂ ಓದಿ:ಕೋಲ್ಕತ್ತಾ ನೈಟ್ ರೈಡರ್ಸ್ ಪಾಳಯ ಸೇರಿದ ಟೀಂ ಇಂಡಿಯಾ ಮಾಜಿ ಕೋಚ್
ಸರಣಿ ಗೆದ್ದ ದಕ್ಷಿಣ ಆಫ್ರಿಕಾ ತಂಡ ನಾಲ್ಕನೇ ಸ್ಥಾನದಲ್ಲಿದೆ. ಕಳೆದ ಆವೃತ್ತಿಯ ಚಾಂಪಿಯನ್ ನ್ಯೂಜಿಲ್ಯಾಂಡ್ ತಂಡವು ಆರನೇ ಸ್ಥಾನದಲ್ಲಿದೆ. ಇದುವರೆಗೆ ಕೇವಲ ಎರಡು ಪಂದ್ಯವಾಡಿರುವ ಆದರೆ ಎರಡನ್ನೂ ಗೆದ್ದಿರುವ ಶ್ರೀಲಂಕಾ 100% ಗೆಲುವಿನ ಪ್ರತಿಶತದೊಂದಿಗೆ ಮೊದಲ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ ಮತ್ತು ಪಾಕಿಸ್ಥಾನ ನಂತರದ ಸ್ಥಾನದಲ್ಲಿದೆ. ಕೊನೆಯ ಸ್ಥಾನದಲ್ಲಿ ಇಂಗ್ಲೆಂಡ್ ತಂಡವಿದೆ.
Related Articles
ದಕ್ಷಿಣ ಆಫ್ರಿಕಾ ವಿರುದ್ದದ ಮೂರು ಪಂದ್ಯಗಳಲ್ಲಿ ಭಾರತ ತಂಡ 2-1 ಅಂತರದ ಸೋಲನುಭವಿಸಿದೆ. ಸೆಂಚೂರಿಯನ್ ನಲ್ಲಿ ನಡೆದ ಮೊದಲ ಪಂದ್ಯವನ್ನು ಭಾರತ ತಂಡ ಗೆದ್ದರೂ, ಜೋಹಾನ್ಸ್ ಬರ್ಗ್ ಮತ್ತು ಕೇಪ್ ಟೌನ್ ಪಂದ್ಯಗಳಲ್ಲಿ ತಂಡ ಸೋಲನುಭವಿಸಿತು.
ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಸರಣಿ ಆಡಲಿದೆ. ಮೂರು ಪಂದ್ಯಗಳ ಏಕದಿನ ಸರಣಿ ಜ.19ರಿಂದ ಆರಂಭವಾಗಲಿದ್ದು, ಟೀಂ ಇಂಡಿಯಾವನ್ನು ಕೆ.ಎಲ್.ರಾಹುಲ್ ಮುನ್ನಡೆಸಲಿದ್ದಾರೆ.