ಅಡಿಲೇಡ್: ಪರ್ತ್ ಟೆಸ್ಟ್ ಪಂದ್ಯದಲ್ಲಿ ಸೋಲು ಕಂಡಿದ್ದ ಆಸ್ಟ್ರೇಲಿಯಾ ಅಡಿಲೇಡ್ ಪಂದ್ಯದಲ್ಲಿ ತಿರುಗಿ ಬಿದ್ದಿದೆ. ಪಿಂಕ್ ಬಾಲ್ ಟೆಸ್ಟ್ ಪಂದ್ಯವನ್ನು ಆಸ್ಟ್ರೇಲಿಯಾ ಹತ್ತು ವಿಕೆಟ್ ಗಳಿಂದ ಗೆದ್ದುಕೊಂಡಿದ್ದು, ಸರಣಿಯಲ್ಲಿ 1-1ರ ಸಮಬಲ ಸಾಧಿಸಿದೆ.
ಅಡಿಲೇಡ್‌ನಲ್ಲಿ ನಡೆದ ಹಗಲು-ರಾತ್ರಿ ಟೆಸ್ಟ್‌ನಲ್ಲಿ ಸೋಲಿನ ಪರಿಣಾಮವಾಗಿ, ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್‌ಗಳ ಪಟ್ಟಿಯಲ್ಲಿ ಭಾರತದ ಸ್ಥಾನದಲ್ಲಿ ದೊಡ್ಡ ಬದಲಾವಣೆಯಾಗಿದೆ. ಮೊದಲ ಸ್ಥಾನದಲ್ಲಿದ್ದ ರೋಹಿತ್ ಶರ್ಮಾ ತಂಡವು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಇಳಿಯಿತು.
ಅಡಿಲೇಡ್‌ನಲ್ಲಿ 10 ವಿಕೆಟ್‌ಗಳ ವಿಜಯದ ಪರಿಣಾಮವಾಗಿ, ಆಸ್ಟ್ರೇಲಿಯಾ ಪಾಯಿಂಟ್‌ಗಳ ಪಟ್ಟಿಯಲ್ಲಿ ನಂ. 1 ಸ್ಥಾನವನ್ನು ಪುನಃ ಪಡೆದುಕೊಂಡಿದೆ. ದಕ್ಷಿಣ ಆಫ್ರಿಕಾ ಎರಡನೇ ಸ್ಥಾನದಲ್ಲಿದೆ.
ಹಗಲು-ರಾತ್ರಿ ಟೆಸ್ಟ್‌ನ ಎರಡು ಇನ್ನಿಂಗ್ಸ್ ಗಳಲ್ಲಿ ಭಾರತ ಕೇವಲ 180 ಮತ್ತು 175 ರನ್ ಗಳಿಸುವ ಮೂಲಕ ನಿರಾಶಾದಾಯಕ ಪ್ರದರ್ಶನವನ್ನು ನೀಡಿತು. ರಿಷಭ್ ಪಂತ್ ಮತ್ತು ನಿತೀಶ್ ಕುಮಾರ್ ರೆಡ್ಡಿ ಹೊರತುಪಡಿಸಿ ಉಳಿದ ಬ್ಯಾಟರ್ ಗಳು ವಿಫಲರಾದರು.