Advertisement

ಚಿನ್ನಮ್ಮನ ಬೆಂಗಳೂರು ವಾಸ ಅಂತ್ಯ: ತಮಿಳುನಾಡಿನತ್ತ ಹೊರಟ ವಿ.ಕೆ. ಶಶಿಕಲಾ

08:22 AM Feb 08, 2021 | Team Udayavani |

ಬೆಂಗಳೂರು: ಜೈಲು ವಾಸ ಮುಗಿಸಿರುವ ತಮಿಳರ ಚಿನ್ನಮ್ಮ, ಎಐಎಡಿಎಂಕೆಯ ಉಚ್ಛಾಟಿತ ನಾಯಕಿ ವಿ.ಕೆ. ಶಶಿಕಲಾ ಇಂದು ತಮಿಳುನಾಡಿಗೆ ಹೊರಟಿದ್ದಾರೆ. ಇದರೊಂದಿಗೆ ಚಿನ್ನಮ್ಮನ ಕೆಲವು ವರ್ಷಗಳ ಬೆಂಗಳೂರು ವಾಸ ಇಂದಿಗೆ ಅಂತ್ಯವಾಗಿದೆ.

Advertisement

ಕಳೆದೊಂದು ವಾರದಿಂದ ನಗರದ ಪ್ರೆಸ್ಟಿಜ್ ಗಾಲ್ಫ್ ಶೈರ್ ಕ್ಲಬ್ ನಲ್ಲಿ ಕಾಲ ಕಳೆದಿದ್ದ ಶಶಿಕಲಾ ಇಂದು ಬೆಳಗ್ಗೆ ತಮಿಳುನಾಡಿನತ್ತ ಹೊರಟಿದ್ದಾರೆ. ಅತ್ತಿಬೆಲೆ, ಹೊಸೂರು ಮಾರ್ಗವಾಗಿ ಶಶಿಕಲಾ ತಮಿಳುನಾಡಿಗೆ ಹೋಗಲಿದ್ದಾರೆ.

ಮಾರ್ಗಮಧ್ಯೆ ಸಾವಿರಾರು ಮಂದಿ ಬೆಂಬಲಿಗರು ಸೇರಿದ್ದು, ಶಶಿಕಲಾ ಅವರನ್ನು ವೈಭವದಿಂದ ಸ್ವಾಗತಿಸಲು ಸಿದ್ದತೆ ನಡೆಸಿದ್ದಾರೆ. ಶಶಿಕಲಾ ಬೆಂಬಲಿಗರು ಬೆಂಗಳೂರಿನಲ್ಲಿ ಹಾಕಿದ್ದ ತಮಿಳು ಬ್ಯಾನರ್ ಗಳನ್ನು ಕನ್ನಡ ಪರ ಸಂಘಟನೆ ಕಾರ್ಯಕರ್ತರು ರವಿವಾರ ಕಿತ್ತು ಹಾಕಿದ ಘಟನೆಯೂ ನಡೆದಿತ್ತು.

ಇದನ್ನೂ ಓದಿ:ಕಮಲಾ ಸೊಸೆ ಮೀನಾಕ್ಷಿ ಬೈಡೆನ್‌ಗೆ ತಲೆನೋವಾಗುತ್ತಿದ್ದಾರಾ?

ದೂರು: ವಿ.ಕೆ. ಶಶಿಕಲಾ ತಮಿಳುನಾಡಿ ನಾದ್ಯಂತ ಹಿಂಸೆ ನಡೆಸಲು ಸಂಚು ರೂಪಿಸುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಡಳಿತ ಪಕ್ಷ ಭಾನುವಾರ ಪೊಲೀಸರಿಗೆ ದೂರು ನೀಡಿದೆ.

Advertisement

ಏಪ್ರಿಲ್‌- ಮೇನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿ ರುವ ಹಿನ್ನೆಲೆಯಲ್ಲಿ ದಿ.ಜಯಲಲಿತಾ ಆಪ್ತೆ ರಾಜಕೀಯವಾಗಿ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ಅಂಶ ಇನ್ನೂ ಸ್ಪಷ್ಟವಾಗಿಲ್ಲ. ಎಐಎಡಿಎಂಕೆ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಅಮ್ಮಾ ಮಕ್ಕಳ್‌ ಮುನ್ನೇತ್ರ ಕಳಗಂ ಪಕ್ಷದ ಸಂಸ್ಥಾಪಕ, ಶಾಸಕ ಟಿ.ಟಿ.ವಿ.ದಿನಕರನ್, ಇದು ತೇಜೋವಧೆಯ ತಂತ್ರ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next