ಬೆಂಗಳೂರು: ಕರ್ನಾಟಕ ಪ್ರಕಾಶಕರ ಸಂಘ ನೀಡುವ 2023ನೇ ಸಾಲಿನ “ಎಂ. ಗೋಪಾಲಕೃಷ್ಣ ಅಡಿಗ ಪುಸ್ತಕ ಪರಿಚಾರಕ” ಹಾಗೂ “ನಂಜನಗೂಡು ತಿರುಮಲಾಂಬ” ಪ್ರಶಸ್ತಿ ಪ್ರಕಟಿಸಲಾಗಿದೆ.
Advertisement
ಶಿವಮೊಗ್ಗ ಜಿಲ್ಲೆ ಸಾಗರದ ವೈ.ಎ. ದಂತಿ ಅವರು ಎಂ. ಗೋಪಾಲಕೃಷ್ಣ ಅಡಿಗ ಪುಸ್ತಕ ಪರಿಚಾರಕ ಪ್ರಶಸ್ತಿಗೆ ಮತ್ತು ಉತ್ತರ ಕನ್ನಡ ಜಿಲ್ಲೆಯ ಬಕ್ಕೆಮನೆಯ ವಿಶಾಲಾಕ್ಷಿ ಶರ್ಮ ಅವರು ನಂಜನಗೂಡು ತಿರುಮಲಾಂಬ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಶಸ್ತಿ 15 ಸಾವಿರ ರೂ.ನಗದು ಹಾಗೂ ಫಲಕ ಒಳಗೊಂಡಿರುತ್ತದೆ ಎಂದು ಕರ್ನಾಟಕ ಪ್ರಕಾಶಕರ ಸಂಘದ ಜಂಟಿ ಕಾರ್ಯದರ್ಶಿ ಸೃಷ್ಟಿ ನಾಗೇಶ್ ತಿಳಿಸಿದ್ದಾರೆ.