ಹೈದರಾಬಾದ್: ಯುವಜನ ಶ್ರಮಿಕ ರೈತ ತೆಲಂಗಾಣ ಪಕ್ಷದ (ವೈಆರ್‌ಎಸ್‌ಟಿಪಿ) ಮುಖ್ಯಸ್ಥೆ ವೈ.ಎಸ್.ಶರ್ಮಿಳಾ ಅವರನ್ನು ಪೊಲೀಸರು ಹೈದರಾಬಾದ್‌ನಲ್ಲಿ ವಶಕ್ಕೆ ಪಡೆದಿದ್ದಾರೆ.
ತೆಲಂಗಾಣದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಖಂಡಿಸಿ, ಕೆ.ಚಂದ್ರ ಶೇಖರ ರಾವ್ ನೇತೃತ್ವದ ಸರಕಾರದ ವಿರುದ್ಧ ಬುಧವಾರ ಪ್ರತಿಭಟನೆ ನಡೆಸಲು ಮುಂದಾಗಿದ್ದರು.
ಚಂದ್ರ ಶೇಖರರಾವ್ ನೇತೃತ್ವದ ಆಡಳಿತದಲ್ಲಿ ಮಹಿಳೆಯರ ವಿರುದ್ಧ ಹೆಜ್ಜೆ ಹೆಜ್ಜೆಗೂ ಅನ್ಯಾಯ ನಡೆಯುತ್ತಿದೆ ಎಂದು ಶರ್ಮಿಳಾ ಆರೋಪಿಸಿ ದ್ದಾರೆ.
ಹೈದರಾಬಾದ್‌ನಲ್ಲಿ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸುತ್ತಿದ್ದಂತೆಯೇ ಮಹಿಳಾ ಪೊಲೀಸರು ಅವರನ್ನು ವಶಕ್ಕೆ ಪಡೆದು ಠಾಣೆಗೆ ಕರೆ ತರಲಾಯಿತು. ಅನಂತರ ಅವರನ್ನು ಮನೆಗೆ ಕಳುಹಿಸಲಾಯಿತು.