ಬೆಂಗಳೂರು : ಜೆಡಿಎಸ್ ನ ಮಾಜಿ ಶಾಸಕ ವೈ.ಎಸ್.ವಿ. ದತ್ತಾ, ಕೋಲಾರ ಜಿಲ್ಲೆಯ ಮುಳಬಾಗಿಲು ವಿಧಾನಸಭೆ ಕ್ಷೇತ್ರದ ಪಕ್ಷೇತರ ಶಾಸಕ ಹೆಚ್. ನಾಗೇಶ್ ಹಾಗೂ ಅವರು ಶನಿವಾರ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
Advertisement
ಕೆಪಿಸಿಸಿ ಕಚೇರಿಯಲ್ಲಿ ಇಬ್ಬರು ನಾಯಕರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರ್ಪಡೆಯಾದರು. ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನಾಗೇಶ್ ಹಾಗೂ ದತ್ತ ಅವರನ್ನು ಪಕ್ಷಕ್ಕೆ ಬರ ಮಾಡಿಕೊಂಡರು.
ಈ ವೇಳೆ ಪಕ್ಷದ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಶಾಸಕ ಬೈರತಿ ಸುರೇಶ್ ಸೇರಿ ಇತರ ಮುಖಂಡರು ಹಾಜರಿದ್ದರು.