Advertisement

ಜನದಟ್ಟಣೆ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ

10:33 PM Apr 29, 2021 | Team Udayavani |

ಯಾದಗಿರಿ: ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸಲು ಸರ್ಕಾರ ಕಟ್ಟುನುಟ್ಟಿನ ಕ್ರಮ ವಹಿಸಲು ಮಾರ್ಗಸೂಚಿ ಹೊರಡಿಸಿದ್ದು, ಏ.29ರ ರಾತ್ರಿ 9ಗಂಟೆಯಿಂದ 15 ದಿನಗಳ ವರೆಗೆ ಕಠಿಣ ಕ್ರಮಗಳನ್ನು ಜಾರಿಗೊಳಿಸಿದೆ. ಮೊದಲ ದಿನವಾದ ಬುಧವಾರ ಜಿಲ್ಲಾ ಕೇಂದ್ರದಲ್ಲಿ ಬೆಳಿಗ್ಗೆ 6ರಿಂದ 10 ಗಂಟೆಯವರೆಗೆ ತರಕಾರಿ, ಹಣ್ಣು, ಹಾಲು ಸೇರಿ ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಲಾಗಿತ್ತು ಸಮಯ ಮೀರಿದ್ದರೂ ನಿರ್ಲಕ್ಷ ವಹಿಸಿದವರಿಗೆ ಪೊಲೀಸರು ಎಚ್ಚರಿಕೆ ನೀಡಿದರು.

Advertisement

ಇನ್ನು ಸುರಪುರದಲ್ಲಿ ಅನಗತ್ಯವಾಗಿ ರಸ್ತೆಗಿಳಿದ ವಾಹನ ಸವಾರರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದು, ಶಹಾಪುರದಲ್ಲಿ ಬೈಕ್‌ ಸವಾರರಿಗೆ ಪೊಲೀಸರು ಬಸ್ಕಿ ಹೊಡೆಸಿ ಎಚ್ಚರಿಕೆ ನೀಡಿದ್ದಾರೆ. ಸಾರಿಗೆ ಸಂಚಾರವೂ ಸಂಪೂರ್ಣ ಸ್ಥಗಿತಗೊಂಡಿದ್ದರಿಂದ ಬಸ್‌ ನಿಲ್ದಾಣದಲ್ಲಿ ಜನರಿಲ್ಲದೇ ಬಿಕೋ ಎನ್ನುತ್ತಿತ್ತು. ರೈಲು ಮಾರ್ಗವಾಗಿ ಬೆಂಗಳೂರು ಮತ್ತು ಮಹಾರಾಷ್ಟ್ರದಿಂದ ಆಗಮಿಸುವವರು ಪ್ರತ್ಯೇಕ ವಾಹನಗಳ ವ್ಯವಸ್ಥೆ ಮಾಡಿಕೊಂಡು ಗ್ರಾಮ ಸೇರುವಂತಾಯಿತು.

ಬೆಳಿಗ್ಗೆ ಉಪಹಾಸ ಹೋಟೆಲ್‌ಗ‌ಳ ಎದುರು ಜನ ಜಮಾಯಿಸಿದ್ದರು. ಸಾಮಾಜಿಕ ಅಂತರವೇ ಇಲ್ಲದೇ ಮುಗಿಬಿದ್ದಿದ್ದು ಕಂಡು ಬಂತು. ಬಹುತೇಕ ಹೋಟೆಲ್‌ಗ‌ಳಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಪಾರ್ಸಲ್‌ ನೀಡುತ್ತಿರುವುದು ಕಂಡು ಬಂತು. ಇನ್ನು ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಟಿಕೆಟ್‌ ಕಾಯ್ದಿರಿಸುವ ವ್ಯವಸ್ಥೆ ಜಾರಿಯಲ್ಲಿದ್ದು ಈ ವೇಳೆಯೂ ನಿಲ್ದಾಣದಲ್ಲಿ ಸಾಮಾಜಿಕ ಅಂತರ ಗಾಳಿಗೆ ತೂರಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next