ಕೋಲ್ಕತ್ತಾ: ಪಶ್ಚಿಮ ಕರಾವಳಿಯಲ್ಲಿ ತೌಕ್ತೆ ಚಂಡಮಾರುತ ಅಪ್ಪಳಿಸಿದ ಕೆಲವೇ ದಿನಗಳಲ್ಲಿ ಇದೀಗ ಪೂರ್ವ ಕರಾವಳಿಯಗೆ ಯಾಸ್ ಚಂಡಮಾರುತದ ಭೀತಿ ಎದುರಾಗಿದೆ. ಪಶ್ಚಿಮ ಬಂಗಾಳ ಮತ್ತು ಒರಿಸ್ಸಾ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಯಾಸ್ ಚಂಡಮಾರುತವು ಮೇ.26ರ ಬೆಳಗ್ಗೆ ಉತ್ತರ ಒರಿಸ್ಸಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ತೀರಕ್ಕೆ ಅಪ್ಪಳಿಸಲಿದೆ ಎಂದು ಅಂದಾಜಿಸಲಾಗಿದೆ. ಆ ಸಂದರ್ಭದಲ್ಲಿ ಗಾಳಿಯ ವೇಗವು ಗಂಟೆಗೆ 155ರಿಂದ 165 ಕಿ.ಮೀ.ನಷ್ಟಿರುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ:ಫೇಸ್‌ಬುಕ್, ಟ್ವಿಟರ್‌ಗೆ ನಿಷೇಧದ ಭೀತಿ : ಸರಕಾರದ ನಿಯಮ ಪಾಲನೆ ವಿಫಲ ಹಿನ್ನೆಲೆ ಕ್ರಮ
ಕೇಂದ್ರ ಸಚಿವರುಗಳಾದ ಪಿಯೂಶ್ ಗೋಯಲ್, ಧರ್ಮೇಂದ್ರ ಪ್ರಧಾನ್ ಮತ್ತು ಮನ್ಸುಖ್ ಮಾಂಡವಿಯಾ ಸೇರಿ ಕೆಲವು ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿದರು. ಹವಾಮಾನ ಇಲಾಖೆ, ವಿಪತ್ತು ನಿರ್ವಹಣಾ ಇಲಾಖೆ, ರೈಲ್ವೇ ಇಲಾಖೆ ಸೇರಿದಂತೆ ಹಲವರು ಸಭೆಯಲ್ಲಿ ಪಾಲ್ಗೊಂಡರು. ಸಭೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಕೋಲ್ಕತ್ತ ಬಂದರಿನಲ್ಲಿ ಮಂಗಳವಾರದಿಂದಲೇ ಎಲ್ಲಾ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗುವುದು. ಮಂಗಳವಾರ ಬೆಳಿಗ್ಗೆಯಿಂದ ಹಡಗುಗಳ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಮೀನುಗಾರಿಕೆಗಾಗಿ ಆಳ ಸಮುದ್ರಕ್ಕೆ ಹೋಗಿದ್ದ ಎಲ್ಲಾ 265 ಬೋಟ್‌ಗಳು ಈಗಾಗಲೇ ತೀರಕ್ಕೆ ಮರಳಿವೆ ಎಂದು ಕರಾವಳಿ ಕಾವಲು ಪಡೆ ತಿಳಿಸಿದೆ.
ಇದನ್ನೂ ಓದಿ:ಈ ವರ್ಷದ ಮೊದಲ ಚಂದ್ರಗ್ರಹಣ ದೇಶದಲ್ಲೂ ಗೋಚರಿಸಲಿದೆ