ರಸ್ತೆ ದುರಸ್ಥಿ ಕಾರ್ಯಕ್ಕೆ ತತಕ್ಷಣವೇ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
Advertisement
ನಿರ್ವಹಣೆ ಇಲ್ಲದ ರಸ್ತೆ ಕಡಲ ತೀರದ ಸುಮಾರು 60ಕ್ಕೂ ಅಧಿಕ ಮನೆಗಳಿಗೆ ಸಂಪರ್ಕ ಕಲ್ಪಿಸುವ ಯಡಾಡಿ ಮನೆ ರಸ್ತೆ ನಿರ್ವಹಣೆ ಇಲ್ಲದೆ ನಿರ್ಲಕ್ಷéಕ್ಕೆ ಒಳಗಾಗಿದೆ.
ರಸ್ತೆ ಆರಂಭದಲ್ಲಿ ಸುಮಾರು ನೂರು ಮೀಟರ್ ಅಂತರ ವರೆಗೆ ರಸ್ತೆ ಕಾಂಕ್ರೇಟಿಕರಣ ಮಾಡಲಾಗಿದ್ದರೂ ಕಾಮಗಾರಿ ನಡೆದ ಸ್ವಲ್ಪ ವರ್ಷದಲ್ಲಿ ಯೇ ರಸ್ತೆ ಹೊಂಡ ಗುಂಡಿ ಬಿದ್ದು ಮತ್ತೆ ಸಮಸ್ಯೆಯನ್ನು ಸೃಷ್ಟಿಸಿದೆ. ಈ ಅವ್ಯವಸ್ಥೆಯ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
ಸಂಪೂರ್ಣ ಹದಗೆಟ್ಟ ಯಡಾಡಿ ಮನೆ ಕರಾವಳಿ ಗ್ರಾಮೀಣ ಸಂಪರ್ಕ ರಸ್ತೆಯಲ್ಲಿ ನಿತ್ಯ ಸಂಚರಿಸುವ ಪಾದಾಚಾರಿಗಳು ಹಾಗೂ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ರಸ್ತೆ ಆರಂಭದಲ್ಲಿ ಸುಮಾರು 100 ಮೀಟರ್ ಅಂತರ ವರೆಗೆ ಕಾಟಾಚಾರಕ್ಕಾಗಿ ನಡೆಸಿದ ಕಾಂಕ್ರೀಟ್ ರಸ್ತೆ ಕಾಮಗಾರಿ ಸಂಪೂರ್ಣ ಕಳಪೆ ಮಟ್ಟದಾಗಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಸಂಬಂಧಪಟ್ಟವರು ರಸ್ತೆ ದುರಸ್ಥಿ ಕಾರ್ಯಕ್ಕೆ ತತ್‌ಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು
-ಸುದರ್ಶನ್ ಕೊಮೆ, ಸ್ಥಳೀಯರು