Advertisement

ಯಾದಗಿರಿ: 102 ಮಂದಿಗೆ ಸೋಂಕು

02:44 PM Aug 12, 2020 | Suhan S |

ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್ ಮಹಾಮಾರಿ ಮತ್ತೆ ಒಂದೇ ದಿನ ಶತಕ ಬಾರಿಸಿದ್ದು, 102 ಜನರು ಸೋಂಕಿಗೆ ತುತ್ತಾಗಿದ್ದಾರೆ. ಸೋಂಕಿತರ ಸಂಖ್ಯೆ 3,231ಕ್ಕೆ ಏರಿಕೆಯಾಗಿದೆ.

Advertisement

ಯಾದಗಿರಿ ನಗರ ಮತ್ತು ಗ್ರಾಮೀಣ ತಾಲೂಕು ಗುರುಮಠಕಲ್‌ ಸೇರಿ 41 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಶಹಾಪುರ ವ್ಯಾಪ್ತಿಯ 19 ಹಾಗೂ ಸುರಪುರ ವ್ಯಾಪ್ತಿಯ ಮುದನೂರ ಕೆ. ಗ್ರಾಮದ 17 ಜನ ಸೇರಿ ಒಟ್ಟು 42 ಜನರಿಗೆ ಸೋಂಕು ತಗುಲಿದೆ. ಜಿಲ್ಲೆಯಲ್ಲಿ ಮಂಗಳವಾರ ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 345 ಜನರನ್ನು ಪತ್ತೆ ಹಚ್ಚಲಾಗಿದೆ. ದ್ವಿತೀಯ ಸಂಪರ್ಕದಲ್ಲಿದ್ದ 394 ಜನರು ಪತ್ತೆಯಾಗಿದ್ದು ಒಟ್ಟು 13006 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ.

ಆರೋಗ್ಯ ಇಲಾಖೆ ಮಂಗಳವಾರ 349 ಜನರ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳಿಸಿದೆ. 231 ಜನರ ವರದಿ ನೆಗೆಟಿವ್‌ ಬಂದಿವೆ. ಜಿಲ್ಲೆಯಲ್ಲಿ 281 ಕಂಟೇನ್ಮೆಂಟ್‌ ಝೋನ್‌ಗಳನ್ನು ರಚಿಸಲಾಗಿದೆ. ಹೊಸ ಜಿಲ್ಲಾಸ್ಪತ್ರೆಯಲ್ಲಿ 147 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಶಹಾಪುರ 61, ಸುರಪುರ 110 ಜನ ಹಾಗೂ ಬಂದಳ್ಳಿ ಏಕಲವ್ಯ ಕೋವಿಡ್ ಕೇರ್‌ ಸೆಂಟರ್‌ ನಲ್ಲಿ 84 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next