Advertisement

ಹೊರಗುತ್ತಿಗೆ ನೌಕರರ ಪರ ಧ್ವನಿ ಎತ್ತುವಂತೆ ಆಗ್ರಹಿಸಿ ಮನವಿ

11:07 AM Jul 05, 2019 | Naveen |

ಯಾದಗಿರಿ: ರಾಜ್ಯದಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾಟಾ ಎಂಟ್ರಿ ಆಪರೇಟರ್‌ಗಳ ಸಮಸ್ಯೆ ಕುರಿತು ಸರ್ಕಾರದ ಗಮನ ಸೆಳೆಯುವಂತೆ ಒತ್ತಾಯಿಸಿ ಆಪರೇಟರ್‌ಗಳ ಸಂಘದಿಂದ ವಿಧಾನಸಭೆ ವಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ಹಾಗೂ ವಿಧಾನ ಪರಿಷತ್‌ ಸದಸ್ಯ ಎನ್‌. ರವಿಕುಮಾರ ಅವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

Advertisement

ಬೆಂಗಳೂರಿನಲ್ಲಿ ಎನ್‌. ರವಿಕುಮಾರ‌ ಅವರನ್ನು ಭೇಟಿಯಾದ ಸಂಘದ ಪ್ರಮುಖರು, ಹೊರಗುತ್ತಿಗೆ ನೌಕರರಿಗೆ ಕಳೆದ 3 ತಿಂಗಳಿಂದ ವೇತನ ನೀಡಿಲ್ಲ. ಇಲಾಖೆಯಲ್ಲಿ ಕಳೆದ 16 ವರ್ಷಗಳಿಂದ ಸುಮಾರು ಸಾವಿರ ಜನರು ಸೇವೆ ಸಲ್ಲಿಸುತ್ತಿದ್ದು, ಸೇವಾ ಭದ್ರತೆಯೂ ಇಲ್ಲದಂತಾಗಿದೆ. ತಮ್ಮ ಬೇಡಿಕೆ ಈಡೇರಿಸುವಂತೆ ಹಲವು ಬಾರಿ ಇಲಾಖೆ ಮುಖ್ಯಸ್ಥರಿಗೆ ಮನವಿ ಮಾಡಲಾಗಿದೆ. ತಮ್ಮನ್ನು ಕೆಲಸಕ್ಕೆ ನೇಮಿಸಿಕೊಂಡ ಎಚ್ಸಿಎಲ್ ಮತ್ತು ಶ್ರೀವೆನ್‌ ಇನೊಧೀ ಲಿಮಿಟೆಡ್‌ ಕಂಪನಿ ಗುತ್ತಿಗೆ ಮುಗಿದಿದೆ ಎಂದು ಹೇಳುತ್ತಿದ್ದು, ಯಾವುದೇ ಅಧಿಕೃತ ಪತ್ರ ನೀಡಿಲ್ಲ. ಅಲ್ಲದೇ ಜನವರಿಯಿಂದ ಮಾರ್ಚ್‌ವರೆಗಿನ ಪಿಎಫ್‌ ಕೂಡ ಜಮಾ ಮಾಡಿಲ್ಲ ಎಂದು ಮನವಿಯಲ್ಲಿ ಉಲ್ಲೇಖೀಸಿದ್ದಾರೆ.

2017ರಿಂದ ಸರ್ಕಾರ ನಿಗದಿಪಡಿಸಿದ ಕನಿಷ್ಠ ವೇತನದ ಬಾಕಿ ಮೊತ್ತ ನೀಡುವುದು, 3 ತಿಂಗಳ ವೇತನ ಜತೆಗೆ ಪಿಎಫ್‌ ಕೂಡಲೇ ಭರಿಸುವುದು, ಗುತ್ತಿಗೆ ಬದಲಾಯಿಸಿದರೂ 16 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವವರನ್ನೇ ಮುಂದುವರಿಸುವುದು, ಕೋರ್ಟ್‌ ತೀರ್ಪಿನಂತೆ ಹೊರಗುತ್ತಿಗೆ ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಸರ್ಕಾರ ಗಮನ ಸೆಳೆಯುವಂತೆ ಮನವಿ ಮಾಡಿದ್ದಾರೆ.

ಸರಕಾರ ಶೀಘ್ರದಲ್ಲಿ ಬೇಡಿಕೆ ಈಡೇರಿಸಲು ಮುಂದಾಗದಿದ್ದರೆ ಜುಲೈ 8ರಿಂದ ಬೆಂಗಳೂರಿನಲ್ಲಿ ಅರ್ನಿಷ್ಠಾವಧಿ ಮುಷ್ಕರ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಸಂಘ ಎಚ್ಚರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next