Advertisement

ಒಂದು ಬಿಟ್ಟರೇ ಮತ್ತೊಂದಿಲ್ಲ ..

12:29 PM Mar 06, 2020 | Naveen |

ಯಾದಗಿರಿ: ಗಡಿ ಜಿಲ್ಲೆ ಯಾದಗಿರಿ ಜಿಲ್ಲಾ ಕೇಂದ್ರವಾಗಿ 10 ವರ್ಷ ಕಳೆದರೂ ಸಮರ್ಪಕ ಅಭಿವೃದ್ಧಿ ಕಂಡಿಲ್ಲ. ಇದುವರೆಗೆ ಆಳುವ ಸರ್ಕಾರಗಳು ಜಿಲ್ಲೆಯ ಅಭಿವೃದ್ಧಿಯನ್ನು ಸಂಪೂರ್ಣ ನಿರ್ಲಕ್ಷಿಸುತ್ತ ಬಂದಿವೆ. ಇದೀಗ ತಾವೇ ಘೋಷಿಸಿದ್ದ ಜಿಲ್ಲೆಯ ಅಭಿವೃದ್ಧಿ ಮರೆತು ಯಡಿಯೂರಪ್ಪ ಅವರೂ ಅದೇ ಮಾರ್ಗದಲ್ಲಿ ಸಾಗಿದ್ದಾರೆ ಎನ್ನುವ ಅಸಮಾಧಾನ ಜಿಲ್ಲೆಯಲ್ಲಿ ವ್ಯಕ್ತವಾಗಿದೆ.

Advertisement

ಬಜೆಟ್‌ ಜಿಲ್ಲೆಯ ಜನರಲ್ಲಿ ತೀವ್ರ ನಿರಾಸೆ ಮೂಡಿಸುವಂತೆ ಮಾಡಿದೆ. ಮಹತ್ವಾಕಾಂಕ್ಷೆ ಜಿಲ್ಲೆಯ ಶಿಕ್ಷಣ, ಉದ್ಯೋಗ, ನೀರಾವರಿ, ಕೈಗಾರಿಕೆ ವಲಯಗಳ ಅಭಿವೃದ್ಧಿಗೆ ಬಜೆಟ್‌ನಲ್ಲಿ ಯಾವುದೇ ಅನುದಾನ ಮೀಸಲಿರಿ ಸದೇ ಸಂಪೂರ್ಣ ನಿರ್ಲಕ್ಷಿಸಲಾಗಿದೆ ಎಂದು ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸಲದ ಬಜೆಟ್‌ನಲ್ಲಿ ಗಡಿ ಜಿಲ್ಲೆಗೆ ಏನೂ ವಿಶೇಷ ಕೊಡುಗೆ ಸಿಕ್ಕಿಲ್ಲ. ಆದರೂ ಈ ಭಾಗದ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ದೂರದೃಷ್ಟಿಯಿಂದ ಯೋಜನೆಯೊಂದನ್ನು ಘೋಷಿಸಲಾಗಿದೆ. ಯಾದಗಿರಿ, ರಾಯಚೂರು ಹಾಗೂ ಕಲಬುರಗಿ ಭಾಗದ ಜನರಿಗೆ ಕುಡಿಯುವ ನೀರಿನ ಸರಬರಾಜಿಗೆ ಅನುಕೂಲವಾಗುವಂತೆ ತಿಂಥಿಣಿ ಬ್ರಿಡ್ಜ್ ಬಳಿ ಕೃಷ್ಣಾ ನದಿಗೆ ಜಲಾಶಯ ನಿರ್ಮಿಸಲು ಯೋಜನಾ ವರದಿ ತಯಾರಿಸಲು ಸರ್ಕಾರ ಘೋಷಿಸಿದೆ.

ಪ್ರಮುಖವಾಗಿ ನೂತನ ಗುರುಮಠಕಲ್‌, ವಡಗೇರಾ ಹಾಗೂ ಹುಣಸಗಿ ತಾಲೂಕು ಕೇಂದ್ರಗಳು ಘೋಷಣೆಯಾಗಿ ಎರಡು ವರ್ಷ ಕಳೆದರೂ ತಹಶೀಲ್ದಾರ್‌ ಕಚೇರಿ ಹೊರತು ಪಡಿಸಿ ಬೇರಾವ ಇಲಾಖೆಗಳ ಕಚೇರಿಗಳು ಕಾರ್ಯಾರಂಭವಾಗಿಲ್ಲ. ಈ ಬಜೆಟ್‌ನಲ್ಲಾದರೂ ಅನುದಾನ ನಿಗದಿ ಮಾಡಿ ನೂತನ ತಾಲೂಕು ಕೇಂದ್ರಗಳ ಅನುಷ್ಠಾನಕ್ಕೆ ಒತ್ತು ನೀಡುತ್ತಾರೆ ಎನ್ನುವ ಜನರ ಆಸೆಗೆ ಸರ್ಕಾರ ತಣ್ಣೀರೆರೆಚಿದೆ. ಕೆಂಭಾವಿ ನೂತನ ತಾಲೂಕು ಕೇಂದ್ರ ಘೋಷಣೆಗೆ ಮಾಡುವಂತೆ ಆ ಭಾಗದ ಜನರ ಬಹು ವರ್ಷಗಳ ಬೇಡಿಕೆಯಾಗಿತ್ತು. ಅದು ಕೂಡ ಈಡೇರಿಲ್ಲ.

ಇ ಂ ಜಿ ನಿ ¿ ು ರಿ ಂ ಗ … ಕಾಲೇಜು ಬಹು ವರ್ಷದ
ಬೇಡಿಕೆಗೆ ಈ ಹಿಂದಿನ ಸರ್ಕಾರಗಳಿಂದ ಯಾವುದೇ ಸ್ಪಂದನೆ ಸಿಕ್ಕಿರಲಿಲ್ಲ. ಈಗ ಯಡಿಯೂರಪ್ಪ ನೇತೃತ್ವದ ಸರ್ಕಾರವೂ ಯಾದಗಿರಿಯನ್ನು ನಿರ್ಲಕ್ಷಿಸಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ತೋಟಗಾರಿಕೆ ಅಭಿವೃದ್ಧಿಗೆ ಪೂರಕವಾಗಬಹುದಾದ ಇಸ್ರೇಲ್‌ ಮಾದರಿ ಕೃಷಿ ಪದ್ಧತಿ ಅನುಷ್ಠಾನವಾಗದೇ ಘೋಷಣೆಗೆ ಮಾತ್ರ ಸೀಮಿತವಾಗಿ ಉಳಿದಿದೆ.

Advertisement

ಸರ್ಕಾರದ ನೂತನ ಸಚಿವರು ಇಸ್ರೇಲ್‌ ಮಾದರಿ ಕೃಷಿಯನ್ನು ಕೈಬಿಡಲ್ಲ ಎನ್ನುವ ವಿಚಾರ ಹೇಳಿದ್ದರೂ ಅದಕ್ಕೆ ಯಾವುದೇ ಅನುದಾನ ಮೀಸಲಿರಿಸಿಲ್ಲ. ಪ್ರಸಕ್ತ ಬಜೆಟ್‌ನಲ್ಲಿ ಯಾದಗಿರಿ ಜಿಲ್ಲೆಯ ಸುರಪುರ ನಗರಕ್ಕೆ ಕುಡಿಯುವ ನೀರಿನ ಯೋಜನೆ, ಯಾದಗಿರಿ ಜಿಲ್ಲಾಸ್ಪತ್ರೆಯನ್ನು ಸೂಪರ್‌ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯನ್ನಾಗಿಸುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳಲ್ಲಿ ಜಿಲ್ಲೆಯ ಕೊನೆ ಭಾಗದ ರೈತರಿಗೆ ನೀರು ತಲುಪಿಸಲು ಕೆಬಿಜೆಎನ್‌ಎಲ್‌ ಕಾಲುವೆಗಳ ಎತ್ತರಕ್ಕೆ ಬಜೆಟ್‌ನಲ್ಲಿ
1 ಸಾವಿರ ಕೋಟಿ ರೂ. ಮೀಸಲಿಡುವುದು.

ಗುರುಮಠಕಲ್‌ ಮತಕ್ಷೇತ್ರದ 60 ಕೆರೆಗಳಿಗೆ ನೀರು ತುಂಬುವ ಯೋಜನೆಗೆ 480 ಕೋಟಿ ರೂ. ಮೀಸಲಿಡುವುದು. ಯಾದಗಿರಿ ಭುವನೇಶ್ವರಿ ಬೆಟ್ಟ, ಗವಿಸಿದ್ಧಲಿಂಗೇಶ್ವರ ಪ್ರವಾಸಿ ತಾಣ ಅಭಿವೃದ್ಧಿಗೆ 30 ಕೋಟಿ ರೂ. ಬೇಡಿಕೆ. ಜಿಲ್ಲೆಯ ಶಹಾಪುರ ತಾಲೂಕು ಶಿರವಾಳ ಐತಿಹಾಸಿಕ ಸ್ಮಾರಕಗಳ ಅಭಿವೃದ್ಧಿಗೆ ಆದ್ಯತೆ ನೀಡುವುದು. ಜಿಲ್ಲಾ ಕೇಂದ್ರದಲ್ಲಿ ಟ್ರೀ ಪಾರ್ಕ್‌ ನಿರ್ಮಾಣ. ಇಂಜಿನಿಯರಿಂಗ್‌ ಮತ್ತು ಪಶುವೈದ್ಯಕೀಯ ಕಾಲೇಜು ಘೋಷಣೆಗೆ
ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಆದರೆ ಇದರಲ್ಲಿ ಯಾವೊಂದು ಯೋಜನೆ ಪರಿಗಣಿಸಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next