Advertisement

ಜನತಾ ದರ್ಶನ ಯಶಸ್ಸಿಗೆ ಸಿದ್ಧತೆ ಕೈಗೊಳ್ಳಿ

11:24 AM Jun 13, 2019 | Team Udayavani |

ಯಾದಗಿರಿ: ಜೂನ್‌ 21ರಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗುರುಮಠಕಲ್ ತಾಲೂಕಿನ ಚಂಡರಕಿ ಗ್ರಾಮದ ಶಾಲೆಯಲ್ಲಿ ವಾಸ್ತವ್ಯ ಮಾಡಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕೆಂದು ಶಾಸಕ ನಾಗನಗೌಡ ಕಂದಕೂರ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಚಂಡರಕಿ ಗ್ರಾಮಕ್ಕೆ ಭೇಟಿ ನೀಡಿದ ಅವರು, ಸಿಎಂ ವಾಸ್ತವ್ಯ ಹೂಡುವ ಶಾಲೆಯ ಆವರಣವನ್ನು ವೀಕ್ಷಿಸಿ ಅಧಿಕಾರಿಗಳೊಂದಿಗೆ ಶಾಲೆಯಲ್ಲಿಯೇ ವ್ಯವಸ್ಥೆಗಳ ಕುರಿತು ಚರ್ಚೆ ನಡೆಸಿದರು.

ಗ್ರಾಮ ವಾಸ್ತವ್ಯದಲ್ಲಿ ಪ್ರಮುಖವಾಗಿ ಜನತಾ ದರ್ಶನ ಇದ್ದು, ಹಾಗಾಗಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಅಹವಾಲು ಸಲ್ಲಿಸಲು ಬರುವುದರಿಂದ ಅದಕ್ಕೆ ತೊಂದರೆಯಾಗದಂತೆ ಸಮರ್ಪಕ ವ್ಯವಸ್ಥೆ ಮಾಡಿಕೊಳ್ಳುವಂತೆ ತಿಳಿಸಿದರು. ಕಾರ್ಯಕ್ರಮಕ್ಕೆ ಹಾಕಲಾಗುವ ಬೃಹತ್‌ ಪೆಂಡಾಲ್, ವಾಹನ ನಿಲುಗಡೆ, ಸಿಎಂ ವಾಸ್ತವ್ಯ ಮಾಡುವ ಕೊಠಡಿ ಹೀಗೆ ಶಾಲೆ ಆವರಣದಲ್ಲಿ ಮೂಲ ಸೌಕರ್ಯಗಳ ಒದಗಿಸುವ ಕುರಿತು ಪರಿಶೀಲಿಸಿದರು.

ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ಮಾತನಾಡಿ, ಬೆಳಗ್ಗೆಯಿಂದ ಸಂಜೆ 6:30ರ ವರೆಗೆ ಜನತಾ ದರ್ಶನ ನಡೆಯಲಿದ್ದು, ಬಳಿಕ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ವೇಳೆ ಸಾರ್ವಜನಿಕರು ಸಾಲಾಗಿ ಬಂದು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು ಎಂದರು. ಈಗಾಗಲೇ ಜಿಲ್ಲಾಧಿಕಾರಿಗಳು ಸಭೆ ನಡೆಸಿ, 15 ಸಮಿತಿಗಳನ್ನು ರಚಿಸಲಾಗಿದ್ದು, ಜವಾಬ್ದಾರಿಯನ್ನು ವಹಿಸಲಾಗಿದೆ ಎಂದು ಗಮನಕ್ಕೆ ತಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಷ ಸೋನಾವಣೆ ಭಗವಾನ, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ಜಿಪಂ ಪ್ರಭಾರಿ ಉಪ ಕಾರ್ಯದರ್ಶಿ ಮುನಿಸ್ವಾಮಿ, ಲೋಕೋಪಯೋಗಿ ಇಲಾಖೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚನ್ನಬಸ್ಸಪ್ಪ ಮೆಕಾಲೆ, ಡಿವೈಎಸ್ಪಿ ಯು. ಶರಣಪ್ಪ, ತಾಪಂ ಕಾರ್ಯನಿರ್ವಹಣಾಧಿಕಾರಿ ಪ್ರಭಯ್ಯ ಸ್ವಾಮಿ, ತಹಶೀಲ್ದಾರ್‌ ಶಶಿಧರಾಚಾರ್ಯ ಸೇರಿದಂತೆ ಪ್ರಮುಖರಾದ ಜಿ. ತಮ್ಮಣ್ಣ, ಪ್ರಕಾಶ ನೀರೆಟಿ, ಬಾಲಪ್ಪ ನೀರೆಟಿ, ವೀರಪ್ಪ ಪ್ಯಾಟಿ, ಮಲ್ಲಿಕಾರ್ಜುನ ಅರುಣಿ, ನಾಗೇಂದ್ರಪ್ಪ ಚಂಡರಕಿ, ಜನದೀಶ ಕಲಾಲ ಸೇರಿದಂತೆ ಹಲವರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next