Advertisement

ತಂಬಾಕು ಉತ್ಪನ್ನ ಮಾರಾಟ ನಿಯಂತ್ರಣಕ್ಕೆ ಕರೆ

12:17 PM Dec 07, 2019 | |

ಯಾದಗಿರಿ: ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಅನಿಧಿಯಮ-2003 (ಕೊಟಾ³-2003) ಕಾಯ್ದೆಯನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ತಂಬಾಕು ಉತ್ಪನ್ನಗಳ ಮಾರಾಟ ನಿಯಂತ್ರಣಕ್ಕೆ ತರಬೇಕು ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಸೂಚಿಸಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ತ್ತೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಳ್ಳಲು ಅಧಿಕಾರಿಗಳು ದಾಳಿ ಮಾಡಿದ ಸಂದರ್ಭದಲ್ಲಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಸಹ ವಶಪಡಿಸಿಕೊಂಡು ದಂಡ ವಿಧಿಸಬೇಕು. ಜೊತೆಗೆ ಅಂಗಡಿ, ಶಾಪ್‌ಗ್ಳಲ್ಲಿ ಬಾಲ ಕಾರ್ಮಿಕರು ಕಂಡು ಬಂದರೆ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಶಿಕ್ಷಕರ ಸಭೆ, ಗ್ರಾಮ ಪಂಚಾಯಿತಿ ಹಾಗೂ ನಗರಸಭೆಗಳ ಸಭೆಗಳಲ್ಲಿ ಈ ಬಗ್ಗೆ ಮಾಹಿತಿ ನೀಡುವಂತೆ ನಿರ್ದೇಶಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಅಡಿ ಬರುವ ಸರ್ಕಾರಿ ಮತ್ತು ಸರ್ಕಾರೇತರ ಶಾಲೆಗಳಲ್ಲಿ ಕಡ್ಡಾಯವಾಗಿ ಸೆಕ್ಷನ್‌-4 ಮತ್ತು 6(ಬಿ) ಅಡಿಯಲ್ಲಿ ನಾಮಫಲಕ ಅಳವಡಿಸಬೇಕು. ಸೆಕ್ಷನ್‌ 6(ಎ) ಪ್ರಕಾರ 18 ವರ್ಷದೊಳಗಿನ ಮಕ್ಕಳು ತಂಬಾಕು ಉತ್ಪನ್ನದ ವಸ್ತುಗಳನ್ನು ಸೇವನೆ ಮಾಡುವಂತಿಲ್ಲ ಹಾಗೂ 6(2)ಎ ಪ್ರಕಾರ ಮಕ್ಕಳಿಗೆ ತಂಬಾಕು ಉತ್ಪನ್ನಗಳು ಕಾಣುವಂತೆ ಪ್ರದರ್ಶಿಸಬಾರದು ಎಂದು ಸೂಚಿಸುವ ಜಾಹೀರಾತು ನಾಮಫಲಕ ಅಳವಡಿಸಬೇಕು. ಸೆಕ್ಷನ್‌ 6ರ ಪ್ರಕಾರ ಯಾವುದೇ ಸರ್ಕಾರಿ ಹಾಗೂ ಸರ್ಕಾರೇತರ ಶಾಲೆಗಳ 100 ಮೀಟರ್‌ ವ್ಯಾಪ್ತಿಯ ಪ್ರದೇಶದಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡಬಾರದು ಮತ್ತು ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದನೆ ನೀಡುವ ಜಾಹೀರಾತು ಫಲಕಗಳನ್ನು ಪ್ರದರ್ಶಿಸುವಂತಿಲ್ಲ ಎಂದರು.

ಎಲ್ಲಾ ಸರ್ಕಾರಿ ಮತ್ತು ಸರ್ಕಾರೇತರ ಕಚೇರಿಗಳಲ್ಲಿ ಸೆಕ್ಷನ್‌-4ರ ಪ್ರಕಾರ ಬೋರ್ಡ್‌ ಅಳವಡಿಸಬೇಕು. ನಗರಸಭೆಯ ಅಧೀನದಲ್ಲಿ ಬರುವ ಎಲ್ಲಾ ಅಂಗಡಿ, ಹೋಟೆಲ್‌, ಪಾನ್‌ಶಾಪ್‌ಗ್ಳಲ್ಲಿ ಸೆಕ್ಷನ್‌-4ರ ಪ್ರಕಾರ ಸಾರ್ವಜನಿಕರಿಗೆ ಕಾಣುವಂತೆ ಬೋರ್ಡ್‌ ಅಳವಡಿಸಬೇಕು. ಬಿಡಿಬಿಡಿಯಾಗಿ ಮಾರಾಟವಾಗುವ ತಂಬಾಕು ಪದಾರ್ಥಗಳನ್ನು ವಶಕ್ಕೆ ಪಡೆದು ಮಾರಾಟಗಾರರಿಂದ ದಂಡ ವಸೂಲಿ ಮಾಡಬೇಕು ಎಂದು ನಿರ್ದೇಶಿಸಿದರು.

ಸೆಕ್ಷನ್‌ 5ರ ಪ್ರಕಾರ ನಗರಸಭೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗಡಿಗಳು, ಹೋಟೆಲ್‌, ಪಾನ್‌ಶಾಪ್‌ ಗಳಲ್ಲಿ ತಂಬಾಕು ಉತ್ಪನ್ನಗಳನ್ನು ಸೇವನೆ ಮಾಡಲು ಪ್ರೋತ್ಸಾಹಿಸುವಂತಹ ಜಾಹೀರಾತು ಫಲಕಗಳನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸುವಂತಿಲ್ಲ ಎಂದು ಹೇಳಿದರು.

Advertisement

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಸೇವನೆ ಮಾಡುವ ವ್ಯಕ್ತಿಗಳ ವಿರುದ್ಧ ಸೆಕ್ಷನ್‌ 21ರ ಪ್ರಕಾರ 200 ರೂ. ದಂಡ ವಿಧಿಸಲು ಅವಕಾಶ ಇದೆ. ಪ್ರತಿಯೊಂದು ಸರ್ಕಾರಿ ಕಚೇರಿಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಯ ಮುಕ್ತ ಪ್ರದೇಶವೆಂದು ನಿರ್ಮಾಣ ಮಾಡುವಲ್ಲಿ ಅಲ್ಲಿನ ಅಧಿಕಾರಿ ಮತ್ತು ಸಿಬ್ಬಂದಿಗಳು ಮನಸ್ಸು ಮಾಡಿದಾಗ ಮಾತ್ರ ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ| ವಿವೇಕಾನಂದ ಟೆಂಗೆ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ನಾರಾಯಣಪ್ಪ, ನಗರಸಭೆ ಪೌರಾಯುಕ್ತ ರಮೇಶ ಸುಣಗಾರ, ಆಹಾರ ಸುರಕ್ಷತಾ ಅಧಿಕಾರಿ ಆಂಜನೇಯ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರರಾದ ಮಹಾಲಕ್ಷ್ಮೀ ಸಜ್ಜನ್‌, ಜಿಲ್ಲಾ ಬಾಲ ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ರಘುವೀರಸಿಂಗ್‌ ಠಾಕೂರ್‌, ಆಪ್ತ ಸಮಾಲೋಚಕ ನಟರಾಜ್‌ ಸೇರಿದಂತೆ ತಾಲೂಕು ಆರೋಗ್ಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next