Advertisement

ಸಾರ್ವಜನಿಕರ ದೂರು: ವಿವಿಧ ಗ್ರಾಮಗಳಿಗೆ ಜಿಪಂ ಸಿಇಒ ದಿಢೀರ್‌ ಭೇಟಿ

01:19 PM Apr 18, 2020 | Naveen |

ಯಾದಗಿರಿ: ಯಾದಗಿರಿ ತಾಲೂಕಿನ ಹಲವು ಗ್ರಾಪಂ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ಕಾರ್ಯ ಸ್ಥಗಿತಗೊಂಡಿದ್ದರಿಂದ ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಿದ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ವಿವಿಧ ಗ್ರಾಮಗಳಿಗೆ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು.

Advertisement

ತಾಲೂಕಿನ ಜಿನಕೇರಾ, ಸೈದಾಪುರ, ಗುರುಮಠಕಲ್ಲ ತಾಲೂಕಿನ ದೇವರಹಳ್ಳಿ, ಗಾಜರಕೋಟ ಸೇರಿದಂತೆ ವಿವಿಧ ಗ್ರಾಮಗಳ ಶುದ್ಧ ಕುಡಿಯುವ ನೀರಿನ ಘಟಕಗಳು ಹಲವು ಕಾರಣಗಳಿಂದಾಗಿ ಸ್ಥಗಿತಗೊಂಡಿದ್ದವು. ಈ ಗ್ರಾಮಗಳಿಗೆ ಭೇಟಿ ನೀಡಿದ ಜಿಪಂಸಿಇಒ ಅಂದೇ ಕ್ರಮ ಕೈಗೊಂಡು ಘಟಕಗಳಿಗೆ ಮರುಜೀವ ನೀಡಿದ್ದಾರೆ.

ಎಲ್ಲ ಗ್ರಾಪಂಗಳಲ್ಲಿ ಸರ್ಕಾರದ ನಿರ್ದೇಶನದಂತೆ ಟಾಸ್ಕ್ ಫೋರ್ಸ್‌ ಸಮಿತಿ ರಚನೆ ಮಾಡಲಾಗಿದೆ. ಸಮಿತಿಗಳ ಮೂಲಕ ಸಾರ್ವಜನಿಕರಿಗೆ ರೋಗ ತಡೆಗಟ್ಟುವ ಕುರಿತು ಅಗತ್ಯ ಜಾಗೃತಿ ಮೂಡಿಸಲಾಗುತ್ತಿದೆ. ಕೋವಿಡ್ ವೈರಸ್‌ ಹರಡುವುದನ್ನು ತಡೆಗಟ್ಟುವ ಕಾರ್ಯದ ಜತೆಗೆ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಜಿಲ್ಲೆಯ ತೀವ್ರವಾಗಿ ಸ್ಪಂದಿಸಿರುವುದು ಗ್ರಾಮೀಣ ಭಾಗದ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೇ ಸಂದರ್ಭದಲ್ಲಿ ನಾಗರಿಕರಿಗೆ ಕೋವಿಡ್  ವೈರಸ್‌ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ತಮ್ಮ ಮನೆಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಮುಖ್ಯವಾಗಿ ಅನವಶ್ಯಕವಾಗಿ ಮನೆಯಿಂದ ಹೊರಗಡೆ ಬರಬಾರದು. ಕೋವಿಡ್  ಬಗ್ಗೆ ಭಯ ಪಡದೆ ಸರ್ಕಾರ ವಿಧಿಸಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಸಲಹೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next