Advertisement

ಯಾದಗಿರಿಯಲ್ಲಿ ಸಮುದಾಯಕ್ಕೆ ಹರಡಿಲ್ಲ ಕೋವಿಡ್

06:32 PM Jun 14, 2020 | Naveen |

ಯಾದಗಿರಿ: ಯಾದಗಿರಿಯಲ್ಲಿ 735 ಮಂದಿಗೆ ಸೋಂಕು ತಗುಲಿದ್ದು, ಒಬ್ಬರಲ್ಲೂ ರೋಗ ಲಕ್ಷಣವಿಲ್ಲ. ಜಿಲ್ಲೆಯಲ್ಲಿ ಇಲ್ಲಿ ಸಮುದಾಯಕ್ಕೆ ಸೋಂಕು ಹರಡಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್‌ ಸ್ಪಷ್ಟಪಡಿಸಿದರು.

Advertisement

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾದಗಿರಿಯಲ್ಲಿ ಕೊರೊನಾ ಪರೀಕ್ಷಾ ವರದಿಗಳು ವಿಳಂಬವಾಗುತ್ತಿರುವ ಬಗ್ಗೆ ಜಿಲ್ಲಾಧಿಕಾರಿಗಳು ಗಮನಕ್ಕೆ ತಂದಿದ್ದಾರೆ. ಅಧಿಕಾರಿಗಳ ಜತೆ ಮಾತನಾಡಿದ್ದು, 24 ಇಲ್ಲವೇ 36 ತಾಸಿನೊಳಗೆ ವರದಿ ನೀಡಲು ಆದೇಶಿಸಲಾಗಿದೆ.

ಜಿಲ್ಲೆಯಲ್ಲಿ ಮೆಡಿಕಲ್‌ ಕಾಲೇಜ್‌ ಇಲ್ಲದ್ದರಿಂದ ಬೇರೆ ಕಡೆ ಅವಲಂಬಿಸಬೇಕಿದೆ. ಇನ್ನು ಒಂದು ವಾರದಲ್ಲಿ ಲ್ಯಾಬ್‌ ಆರಂಭಿಸಲಾಗುವುದು ಎಂದರು. ಯಾದಗಿರಿ ಮತ್ತು ಉಡುಪಿಯಲ್ಲಿ ಹೆಚ್ಚಿನ ಸೋಂಕಿತರು ಪತ್ತೆಯಾಗುತ್ತಿರುವುದು ಅತ್ಯಂತ ಕಳವಳಕಾರಿ ವಿಚಾರ. ಮಹಾರಾಷ್ಟ್ರದಿಂದ ಆಗಮಿಸಿದವರಲ್ಲೇ ಹೆಚ್ಚು ಸೋಂಕು ಕಂಡುಬರುತ್ತಿದೆ. ಶೇ.95 ಸೋಂಕಿತರಲ್ಲಿ ರೋಗ ಲಕ್ಷಣಗಳಿಲ್ಲ. ರಾಜ್ಯದಲ್ಲಿ 164 (ಶೇ.5) ಸೋಂಕಿತರಿಗೆ ಮಾತ್ರ ರೋಗದ ಲಕ್ಷಣಗಳಿವೆ ಎಂದರು.

ಲಾಕ್‌ಡೌನ್‌ ಮುಂದುವರಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸೋಂಕು ನಿಯಂತ್ರಣಕ್ಕೆ ತರಲು ಸರ್ಕಾರ ಲಾಕ್‌ಡೌನ್‌ ಘೋಷಿಸಿತ್ತು. ಜೀವ ಉಳಿಸಿಯಾಗಿದೆ. ಈಗ ಜೀವದ ಜತೆಗೆ ಜೀವನವೂ ಸಹಜ ಸ್ಥಿತಿಗೆ ಬರಬೇಕಿದೆ. ಸಾಮಾಜಿಕ ಅಂತರ ಕಾಪಾಡಿ ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next