Advertisement

ಯಾದಗಿರಿಯಲ್ಲಿ 499 ಜನ ಸೋಂಕಿತರು ಗುಣಮುಖ

12:19 PM Jun 21, 2020 | Naveen |

ಯಾದಗಿರಿ: ಜಿಲ್ಲೆಯ ಪಾಲಿಗೆ ಶನಿವಾರ ಸ್ವಲ್ಪ ನೆಮ್ಮದಿ ಮೂಡಿಸಿದ್ದು, ಜಿಲ್ಲೆಯಲ್ಲಿ ಕೋವಿಡ್  ಸೋಂಕಿತರು ಪತ್ತೆಯಾಗಿಲ್ಲ.

Advertisement

ಕೋವಿಡ್‌-19 ಖಚಿತಪಟ್ಟ 877 ವ್ಯಕ್ತಿಗಳಲ್ಲಿ ಮತ್ತೆ 10 ಜನ ಸೇರಿದಂತೆ ಜೂನ್‌ 20ರವರೆಗೆ ಒಟ್ಟು 499 ಜನ ಗುಣಮುಖರಾಗಿದ್ದಾರೆ. ಉಳಿದ 377 ಪ್ರಕರಣಗಳು ಸಕ್ರಿಯವಾಗಿವೆ. ಇನ್ನು ಜಿಲ್ಲೆಯಲ್ಲಿ ಶುಕ್ರವಾರದವರೆಗೆ ಸೋಂಕಿತರ ಸಂಪರ್ಕದಿಂದ ಕೋವಿಡ್  ಗೆ 8 ಜನ ತುತ್ತಾಗಿದ್ದಾರೆ. ಸೋಂಕು ಹರಡದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆಯಾಗಿ ಜಿಲ್ಲೆಯಲ್ಲಿ 71 ಕಂಟೇನ್ಮೆಂಟ್‌ ಝೋನ್‌ ರಚಿಸಿದೆ.

ಶನಿವಾರದ 357 ನೆಗೆಟಿವ್‌ ವರದಿ ಸೇರಿ ಈವರೆಗೆ 20759 ಮಾದರಿಗಳ ವರದಿ ನೆಗೆಟಿವ್‌ ಬಂದಿವೆ. 499 ಜನರ ಮಾದರಿ ಸಂಗ್ರಹಿಸಲಾಗಿದ್ದು, ಇನ್ನು 1899 ಜನರ ವರದಿ ಬರುವುದು ಬಾಕಿಯಿದೆ. ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 1377 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 2779 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಹೊಸ ಜಿಲ್ಲಾಸ್ಪತ್ರೆಯಲ್ಲಿ 173 ಜನ ಶಹಾಪುರ ಕೋವಿಡ್ ಕೇರ್‌ ಸೆಂಟರ್‌ ನಲ್ಲಿ 55, ಸುರಪುರ ಕೋವಿಡ್ ಕೇರ್‌ ಸೆಂಟರ್‌ನಲ್ಲಿ 50 ಮತ್ತು ಬಂದಳ್ಳಿ ಏಕಲವ್ಯ ಕೋವಿಡ್ ಕೇರ್‌ ಸೆಂಟರ್‌ ನಲ್ಲಿ 68 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಜಿಲ್ಲೆಯ 21 ಸಾಂಸ್ಥಿಕ ಕ್ವಾರಂಟೈನ್‌ ಸೆಂಟರ್‌ಗಳಲ್ಲಿ ಒಟ್ಟು 743 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ ತಿಳಿಸಿದ್ದಾರೆ.

ಸಾರ್ವಜನಿಕರು ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ-ಟಿಶ್ಯೂ ಪೇಪರ್‌ ಬಳಸಬೇಕು. ಕೈ ಸ್ವಚ್ಛಗೊಳಿಸುವ ದ್ರಾವಣ ಅಥವಾ ನೀರು ಮತ್ತು ಸೋಪು ಬಳಸಿ ಆಗಾಗ ಕೈಗಳನ್ನು ತೊಳೆದುಕೊಳ್ಳಬೇಕು ಮತ್ತು ಸಾಮಾಜಿಕ ಸಮೂಹ ಗುಂಪು ಸೇರಬಾರದು ಎಂದು ಸಲಹೆ ನೀಡಿದ್ದಾರೆ.

ಕೋವಿಡ್‌-19 ಪೀಡಿತ ಇತರೆ ದೇಶ, ರಾಜ್ಯಗಳಿಂದ ಯಾದಗಿರಿ ಜಿಲ್ಲೆಗೆ ಹಿಂತಿರುಗಿದ ದಿನದಿಂದ 14 ದಿನಗಳವರೆಗೆ ರೋಗ ಲಕ್ಷಣಗಳು ಇರಲಿ ಅಥವಾ ಇಲ್ಲದಿರಲಿ ನಿಗದಿತ ಕ್ವಾರಂಟೈನ್‌ ಕೇಂದ್ರದಲ್ಲಿ ಪ್ರತ್ಯೇಕವಾಗಿರಬೇಕು ಹಾಗೂ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ವರದಿ ಮಾಡಿಕೊಳ್ಳಬೇಕು. ಮಾಹಿತಿಗಾಗಿ ಜಿಲ್ಲಾಡಳಿತದ ಕಂಟ್ರೋಲ್‌ ರೂಂ ಸಹಾಯವಾಣಿ ಸಂಖ್ಯೆ 08473- 253950 ಅಥವಾ ವಾಟ್ಸ್‌ಆ್ಯಪ್‌ ಸಂಖ್ಯೆ: 9449933946 ಅಥವಾ 24ಗಿ7 ಉಚಿತ ಆರೋಗ್ಯ ಸಹಾಯವಾಣಿ 104ಕ್ಕೆ ಕರೆ ಮಾಡಲು ಜಿಲ್ಲಾಡಳಿತ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next