Advertisement

ಟೆಸ್ಟ್ ಲ್ಯಾಬ್‌ ಸಿದ್ಧತೆಗೆ ಕೂರ್ಮಾರಾವ್‌ ಸೂಚನೆ

12:11 PM May 08, 2020 | Naveen |

ಯಾದಗಿರಿ: ನೋವೆಲ್‌ ಕೋವಿಡ್ ವೈರಸ್‌ಗೆ ಸಂಬಂಧಿಸಿದಂತೆ ನೂತನ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್‌19 ಪರೀಕ್ಷೆ ನಡೆಸುವ ಟೆಸ್ಟ್‌ ಲ್ಯಾಬ್‌ ಸ್ಥಾಪನೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ಅಧಿಕಾರಿಗಳಿಗೆ ಸೂಚಿಸಿದರು.

Advertisement

ನೂತನ ಜಿಲ್ಲಾಸ್ಪತ್ರೆಗೆ ಗುರುವಾರ ಭೇಟಿ ನೀಡಿ, ಕೋವಿಡ್‌19 ಟೆಸ್ಟ್‌ ಲ್ಯಾಬ್‌ ಸ್ಥಾಪನೆ ಮತ್ತು ಆಸ್ಪತ್ರೆಯಲ್ಲಿ ಆಕ್ಸಿಜನ್‌ ಪೈಪ್‌ಲೈನ್‌ ಕಾಮಗಾರಿ ಕೈಗೊಳ್ಳಲು ಪರಿಶೀಲನೆ ನಡೆಸಿದರು. ಜಿಲ್ಲಾಡಳಿತ ವತಿಯಿಂದ ಮುಂಜಾಗ್ರತಾ ಕ್ರಮವಾಗಿ ಕೋವಿಡ್ ವೈರಸ್‌ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಕೋವಿಡ್ ಪರೀಕ್ಷೆಗಳನ್ನು ಹೆಚ್ಚು ಹೆಚ್ಚು ನಡೆಸಬೇಕಿದ್ದು, ಅಗತ್ಯ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಈ ವೇಳೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಾರಾಯಣಪ್ಪ, ಕೆಎಚ್‌ಎಸ್‌ಡಿಆರ್‌ಪಿ ಕಾರ್ಯನಿರ್ವಾಹಕ ಇಂಜಿನಿಯರ್‌ ಹಾಗೂ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಕಿರಣ ಸೇರಿದಂತೆ ಇನ್ನಿತರರು ಹಾಜರಿದ್ದರು. 1358 ವರದಿ ನೆಗೆಟಿವ್‌: ನೋವೆಲ್‌ ಕೋವಿಡ್ ವೈರಸ್‌ ಪರೀಕ್ಷೆಗಾಗಿ ಜಿಲ್ಲೆಯಿಂದ ಕಳುಹಿಸಿದ್ದ ಮಾದರಿಗಳಲ್ಲಿ ಗುರುವಾರ ಮತ್ತೆ 47 ಮಾದರಿಗಳ ವರದಿ ನೆಗೆಟಿವ್‌ ಬಂದಿದ್ದು, ಇಲ್ಲಿಯವರೆಗೆ ಒಟ್ಟು 1,358 ಮಾದರಿಗಳ ವರದಿ ನೆಗೆಟಿವ್‌ ಬಂದಂತಾಗಿದೆ. ಜಿಲ್ಲೆಯಲ್ಲಿ 29 ಹೊಸ ಮಾದರಿಗಳು ಸೇರಿದಂತೆ 125 ಮಾದರಿಗಳ ವರದಿ ಬರಬೇಕಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್‌ ಜಿ.ರಜಪೂತ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೊಸ ಜಿಲ್ಲಾಸ್ಪತ್ರೆಯ ಐಸೊಲೇಷನ್‌ ವಾರ್ಡ್‌ನಲ್ಲಿ 2 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಶಹಾಪುರ ಎಸ್‌ಐಸಿನಲ್ಲಿ 2 ಮತ್ತು ಸುರಪುರ ಸೂಪರ್‌ ಕ್ವಾರಂಟೈನ್‌ ಸೆಂಟರ್‌ನಲ್ಲಿ 5 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಪ್ರಾಥಮಿಕ ಸಂಪರ್ಕ 22 ಜನ, ದ್ವಿತೀಯ ಸಂಪರ್ಕದ 63 ಜನರಿದ್ದು, ಇವರನ್ನು ಪ್ರತ್ಯೇಕವಾಗಿರಿಸಲಾಗಿದೆ. ವಿದೇಶಗಳಿಂದ ಜಿಲ್ಲೆಗೆ ಮರಳಿ ಬಂದಿರುವ 71 ಜನರ ಅವಲೋಕನ ಅವಧಿ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.

ಜಿಲ್ಲೆಯ ಅರಕೇರಾ (ಕೆ) ಇನ್‌ಸ್ಟಿಟ್ಯೂಶನಲ್‌ ಕ್ವಾರಂಟೈನ್‌ನಲ್ಲಿ 50 ಜನ, ಗುಂಜನೂರಿನಲ್ಲಿ 19 ಜನ, ಹುಣಸಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 139 ಜನ ಮತ್ತು ಕೆಂಭಾವಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 7 ಜನ ಸೇರಿದಂತೆ ಒಟ್ಟು 215 ಜನರನ್ನು ಇನ್‌ ಸ್ಟಿಟ್ಯೂಶನಲ್‌ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next