Advertisement

ವೈದ್ಯರ ಚೀಟಿ ಇಲ್ಲದೇ ಔಷಧ ನೀಡದಿರಲು ಸೂಚನೆ

01:54 PM Apr 23, 2020 | Naveen |

ಯಾದಗಿರಿ: ಜಿಲ್ಲೆಯ ಎಲ್ಲ ಔಷಧಿ ವಿತರಕರು ವೈದ್ಯರ ಔಷಧಿ ಚೀಟಿ ಇಲ್ಲದೇ ಯಾವುದೇ ತರಹದ ಔಷಧಿ ನೀಡಬಾರದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್‌ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಖಾಸಗಿ ವೈದ್ಯರು, ಔಷಧಿ ವಿತರಕರು ಹಾಗೂ ಆರ್‌ ಎಂಪಿಗಳೊಂದಿಗೆ ನಡೆಸಿದ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Advertisement

ಜಿಲ್ಲೆಯ ಪ್ರತಿಯೊಬ್ಬ ಖಾಸಗಿ ವೈದ್ಯರು ತಮ್ಮ ಆಸ್ಪತ್ರೆಗಳಿಗೆ ಬರುವ ತೀವ್ರ ಉಸಿರಾಟದ ಸೋಂಕಿನ ಹಾಗೂ ಶೀತಜ್ವರ ಪ್ರಕರಣಗಳನ್ನು ಕಡ್ಡಾಯವಾಗಿ ಸಂಬಂಧಿಸಿದ ತಾಲೂಕು ವೈದ್ಯಾಧಿಕಾರಿಗಳ ಗಮನಕ್ಕೆ ತಂದು ನೂತನ ಜಿಲ್ಲಾಸ್ಪತ್ರೆಯಲ್ಲಿ ಆರಂಭಿಸಿರುವ ಕೋವಿಡ್‌-19 ಆಸ್ಪತ್ರೆ ಇಲ್ಲವೇ ಹತ್ತಿರದ ಜ್ವರ ತಪಾಸಣಾ ಕೇಂದ್ರಕ್ಕೆ ಕಳುಹಿಸುವಂತೆ ಸೂಚಿಸಿದರು.

ಕೋವಿಡ್‌-19 ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಂಡಿದೆ ಎಂದು ಹೇಳಿದರು. ಕೋವಿಡ್‌-19 ಸಾಂಕ್ರಾಮಿಕ ರೋಗಕ್ಕೆ ಯಾವುದೇ ಮದ್ದು ಇಲ್ಲದೇ ಇರುವುದರಿಂದ ಜಿಲ್ಲೆಯ ಆರ್‌ಎಂಪಿಗಳು ವೈದ್ಯಕೀಯ ತಪಾಸಣೆ ಸ್ಥಗಿತಗೊಳಿಸಬೇಕು ಹಾಗೂ ಯಾವುದೇ ಕಾಯಿಲೆ ಇರುವ ವ್ಯಕ್ತಿ ಕಂಡುಬಂದಲ್ಲಿ ನೇರವಾಗಿ ತಾಲೂಕು ವೆÂದ್ಯಾಧಿಕಾರಿಗಳಿಗೆ ತಿಳಿಸಬೇಕು ಹಾಗೂ ಕೋವಿಡ್‌-19 ರೋಗದ ಕುರಿತು ಅರಿವು ಮೂಡಿಸಬೇಕು ಎಂದು ಹೇಳಿದರು.

ಖಾಸಗಿ ವೈದ್ಯರು ಹಾಗೂ ಆರ್‌ ಎಂಪಿಗಳು ಜಿಲ್ಲಾಡಳಿತದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು. ಒಂದು ವೇಳೆ ಸೂಚನೆಗಳನ್ನು ನಿರ್ಲಕ್ಷಿಸಿದಲ್ಲಿ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯದಂತೆ ನಿಯಮಾನುಸಾರ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಪಂ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಜಿಲ್ಲಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಎಂ.ಎಸ್‌. ಪಾಟೀಲ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ನಾರಾಯಣಪ್ಪ, ಡಾ| ಭಗವಂತ ಅನವಾರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ|
ವಿವೇಕಾನಂದ ಟೆಂಗೆ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next