Advertisement
ನಗರದ ಎನ್‌ವಿಎಂನಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವಾಹನದಲ್ಲಿ ಪ್ರಯಾಣ ಬೆಳೆಸಿದ ಸಚಿವರು, ನೇರವಾಗಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.
Related Articles
Advertisement
ಬಳಿಕ ಆಸ್ಪತ್ರೆ ಆವರಣ ವೀಕ್ಷಿಸಿದ ಸಚಿವರು, ತೆರೆದ ಸ್ಥಳದಲ್ಲಿ ಅವ ಧಿ ಮೀರಿರುವ ಔಷಧಿಗಳನ್ನು ಬೇಕಾಬಿಟ್ಟಿ ಬಿಸಾಡಿರುವುದನ್ನು ಪರಿಶೀಲಿಸಿ ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಆಡಳಿತ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಬಳಿಕ ಹೊರ ರೋಗಿಗಳ ವಿಭಾಗ, ನವಜಾತ ಶಿಶುಗಳ ವಿಭಾಗಕ್ಕೆ ಭೇಟಿ ನೀಡಿ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಬಂದಿದ್ದ ಜನರನ್ನು ಮಾತನಾಡಿಸಿ, ವ್ಯವಸ್ಥೆ ಕುರಿತು ಮಾಹಿತಿ ಪಡೆದರು.
ನಂತರ ನಗರಸಭೆ ಕಾರ್ಯಾಲಯಕ್ಕೆ ಭೇಟಿ ನೀಡಿ, ಸಿಬ್ಬಂದಿ ಹಾಜರಾತಿ ಪರಿಶೀಲನೆ ನಡೆಸಿದರು. ಒಬ್ಬೊಬ್ಬರಾಗಿ ಸಿಬ್ಬಂದಿ ಹೆಸರನ್ನು ಕೂಗಿ ಅವರು ಕೆಲಸಕ್ಕೆ ಬಂದಿದ್ದಾರೋ ಇಲ್ಲವೋ ಎನ್ನುವುದನ್ನು ಖಾತ್ರಿ ಪಡಿಸಿಕೊಂಡರು. ನಗರಸಭೆ ಎಇ ಶಿವರಾಜ ಕಳೆದ ಕೆಲದಿನಗಳಿಂದ ಗೈರು ಆಗಿರುವುದರಿಂದ ಅಮಾನತಿಗೆ ಶಿಫಾರಸು ಮಾಡುವಂತೆ ನಗರಸಭೆ ಪೌರಾಯುಕ್ತ ರಮೇಶ ಸುಣಗಾರ ಅವರಿಗೆ ಸೂಚಿಸಿದರು.
ನಗರ ಸ್ವಚ್ಛವಾಗಿಡಿ: ನಗರ ಸ್ವತ್ಛವಾಗಿಡಿ. ಎಲ್ಲಿ ನೋಡಿದರೂ ಕೊಳಚೆಯೇ ಕಂಡು ಬರುತ್ತಿದೆ. ಇನ್ನು ಮುಂದೆ ಹೀಗೆಲ್ಲ ನಡೆಯಲ್ಲ ಎಂದು ನಗರಸಭೆ ಪೌರಾಯುಕ್ತರಿಗೆ ಖಡಕ್ ಎಚ್ಚರಿಕೆ ನೀಡಿದರು. ನಗರದಲ್ಲಿ ಶುದ್ಧ ಕುಡಿಯುವ ನೀರು, ಸ್ವತ್ಛತೆಗೆ ಆದ್ಯತೆ ನೀಡಬೇಕು ಎಂದು ಸಚಿವರು ಸೂಚಿಸಿದರು.
ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ, ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಭಗವಂತ ಅನವಾರ ಹಾಗೂ ಇನ್ನಿತರರು ಈ ಸಂದರ್ಭದಲ್ಲಿದ್ದರು.