Advertisement

ಸಿಎಂ ಜತೆ ಚರ್ಚಿಸಲು ಅವಕಾಶ

04:11 PM Dec 29, 2019 | Naveen |

ಯಾದಗಿರಿ: ಮಕ್ಕಳು ಸ್ವತಃ ತಮ್ಮನ್ನು ಕಾಡುತ್ತಿರುವ ಸಮಸ್ಯೆಗಳನ್ನು ಗುರುತಿಸಿ ಮಾಡಿದ ಪಟ್ಟಿಯನ್ನು ಜನಪ್ರತಿನಿಧಿ
ಗಳಿಗೆ ತಲುಪಿಸಿ, ಆ ಸಮಸ್ಯೆಗಳು ವಿಧಾನಸಭೆಯನ್ನು ಪ್ರತಿಧ್ವನಿಸುವಂತೆ ಮಾಡುವ ಉದ್ದೇಶದಿಂದ ಮಕ್ಕಳ ಸಂಸತ್‌ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಜಿಲ್ಲಾ ಬಾಲ ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ರಘುವೀರಸಿಂಗ್‌ ಠಾಕೂರ ಹೇಳಿದರು.

Advertisement

ತಾಲೂಕಿನ ಕಂದಕೂರ ಗ್ರಾಮದ ಎಸ್‌.ಎಲ್‌.ವಿ ಮೆಮೋರಿಯಲ್‌ ಶಾಲೆಯಲ್ಲಿ ಇತ್ತೀಚೆಗೆ ಕರ್ನಾಟಕ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ, ಚೈಲ್ಡ್‌ ರೈಟ್ಸ್‌ ಟ್ರಸ್ಟ್‌ ಬೆಂಗಳೂರು ಹಾಗೂ ಅನಂತ ಸೇವಾ ಟ್ರಸ್ಟ್‌ ಆಶ್ರದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಮಕ್ಕಳ ಸಂಸತ್‌  ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದ ವಿವಿಧ ಭಾಗಗಳಲ್ಲಿನ ಮಕ್ಕಳ ಯಾವ ಸಮಸ್ಯೆ, ಬೇಡಿಕೆಗಳನ್ನು ವಿಧಾನ ಪರಿಷತ್ತು ಮತ್ತು ವಿಧಾನ ಸಭೆಯಲ್ಲಿ ಚರ್ಚೆಗೆ ಜನಪ್ರತಿನಿಧಿಗಳು ತೆಗೆದುಕೊಳ್ಳಬೇಕು? ಬಾಲ್ಯ ವಿವಾಹ, ಬಾಲ ಕಾರ್ಮಿಕ, ಜೀತ ಪದ್ಧತಿ, ಮಕ್ಕಳ ಮೇಲೆ ಆಗುವ ಲೈಂಗಿಕ ದೌರ್ಜನ್ಯಗಳು ಸೇರಿದಂತೆ ಹಲವು ವಿಚಾರ ಮಕ್ಕಳೊಡನೆ ಸಮಾಲೋಚನೆ ನಡೆಸಲಾಗುತ್ತಿದೆ. ಜಿಲ್ಲಾ ಮಟ್ಟದಲ್ಲಿ ಮಕ್ಕಳೇ ಗುರುತಿಸುವ ಸಮಸ್ಯೆಗಳನ್ನು ರಾಜ್ಯ
ಮಟ್ಟದ ಮಕ್ಕಳ ಸಂಸತ್‌ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ
ಜೊತೆ ಮಕ್ಕಳೆ ಚರ್ಚಿಸುವ ಅವಕಾಶವನ್ನು ಕಲ್ಪಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮಿಕೊಳ್ಳಲಾಗಿದೆ.
ಮಕ್ಕಳು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು
ಎಂದು ತಿಳಿಸಿದರು.

ಕಾರ್ಮಿಕ ನಿರೀಕ್ಷಕ ಶಿವಶಂಕರ ಬಿ. ತಳವಾರ ಮಾತನಾಡಿ, ಅಸಂಘಟಿತ ಕಾರ್ಮಿಕರಿಗೆ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್‌ಧನ್‌ ಯೋಜನೆ ಭವಿಷ್ಯದಲ್ಲಿ ನೆರವಾಗಲಿದೆ. ಆದ್ದರಿಂದ ಪ್ರತಿಯೊಬ್ಬ ಅಸಂಘಟಿತ ಕಾರ್ಮಿಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಕಾರ್ಮಿಕ ಇಲಾಖೆಯಿಂದ ಸೌಲಭ್ಯ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರರಾದ ಮಹಾಲಕ್ಷ್ಮೀ ಸಜ್ಜನ್‌ ಮಾತನಾಡಿ, ಕೋಟಾ³-2003 ಕಾಯ್ದೆಯಡಿ ಸೆಕ್ಷನ್‌ 4, 5, 6, 6ಎ, 6ಬಿ ಮತ್ತು 7ರ ಪ್ರಕಾರ ಸಂಬಂಧಿ ಸಿದ ಕಾಯ್ದೆಗಳನುಸಾರ ಹೋಟೆಲ್‌, ರೆಸ್ಟೊರೆಂಟ್‌, ಧಾಬಾ, ಅಂಗಡಿಗಳಲ್ಲಿ ಮತ್ತು ಶಾಲಾ-ಕಾಲೇಜು ಪ್ರದೇಶದ 100 ಮೀಟರ್‌ ಅಂತರದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕಿಗೆ ಸಂಬಂಧಿಸಿದ ಉತ್ಪನ್ನಗಳನ್ನು ಬಹಿರಂಗವಾಗಿ ಮಕ್ಕಳಿಂದ ಮಾರುವುದಕ್ಕೆ ಪ್ರಚೋದನೆ ನೀಡುವುದು, ದುಡಿಸಿಕೊಳ್ಳುವುದು ಮತ್ತು ಸೇದುವುದು ಕಾನೂನಿನ ಪ್ರಕಾರ ನಿಷೇ ಧಿಸಲಾಗಿರುತ್ತದೆ.

ನಿಯಮಗಳನ್ನು ಉಲ್ಲಂಘಿಸಿದಲ್ಲಿದಂಡ ವಿಧಿಸುವುದರ ಜೊತೆಗೆ ಶಿಕ್ಷೆಗೆ ಒಳಪಡಬೇಕಾಗುತ್ತದೆ ಎಂದು ತಿಳಿವಳಿಕೆ ನೀಡಿದರು. ಅನಂತ ಸೇವಾ ಟ್ರಸ್ಟ್‌ ಅಧ್ಯಕ್ಷ ಶರಣಪ್ಪ ಎಸ್‌. ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯಶಿಕ್ಷಕ ಎಸ್‌. ಎಮ್‌.ಭೂತಲ್‌ ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next