Advertisement

ಪ್ರತಿಯೊಬ್ಬರಿಗೂ ಉದ್ಯೋಗ ನೀಡುವ ಉದ್ದೇಶ

12:19 PM Jun 05, 2020 | Naveen |

ಯಾದಗಿರಿ: ಮಹಾತ್ಮಗಾಂಧಿ ರಾಷ್ಟ್ರಿಯ ಉದ್ಯೋಗ ಖಾತ್ರಿ ಯೋಜನೆಯಡಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಯೊಬ್ಬರಿಗೆ ಉದ್ಯೋಗ ದೊರಕಿಸುವ ಯೋಜನೆ ರೂಪಿಸಿದ್ದಾರೆ. ರಾಜ್ಯದಲ್ಲಿಯೂ ಪ್ರತಿಯೊಬ್ಬ ಕಾರ್ಮಿಕ ಉದ್ಯೋಗ ಪಡೆಯಬಹುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಖಾತೆ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

Advertisement

ತಾಲೂಕಿನ ಬಳಿಚಕ್ರ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಸಾಮಾಜಿಕ ಅರಣ್ಯ ಕ್ಷೇತ್ರದ ಸಸಿ ನೆಡುವುದು ಮತ್ತು ನಾಲಾ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಸರ್ಕಾರಿ ನೌಕರರು, ತೆರಿಗೆ ಪಾವತಿದಾರರು ಹಾಗೂ ಜನಪ್ರತಿನಿಧಿಗಳನ್ನು ಹೊರತು ಪಡಿಸಿ ಉಳಿದೆಲ್ಲರೂ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ನಿರ್ವಹಿಸಲು ಪಿಡಿಒ ಗಳಿಂದ ಉದ್ಯೋಗ ಚೀಟಿ ಪಡೆಯಬೇಕು ಎಂದು ಹೇಳಿದರು.

ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕ ವೆಂಕಟರೆಡ್ಡಿ ಮುದ್ನಾಳ, ಜಿಪಂ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ, ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ, ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಬಿಜೆಪಿ ಜಿಲ್ಲಾಧ್ಯಕ್ಷ ಡಾ| ಶರಣಭೂಪಾಲರೆಡ್ಡಿ ನಾಯ್ಕಲ್‌, ಬಿಜೆಪಿ ಮುಖಂಡರಾದ ದೇವರಾಜ ನಾಯಕ, ಸಾಯಬಣ್ಣ ಬೋರಬಂಡಾ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next