Advertisement

ಪೌರ ಕಾರ್ಮಿಕರ ಸೇವೆ ಶ್ಲಾಘನೀಯ: ಮುದ್ನಾಳ

04:14 PM Apr 10, 2020 | Naveen |

ಯಾದಗಿರಿ: ಗಡಿಯಲ್ಲಿ ಸೈನಿಕರು ನಮ್ಮೆಲ್ಲರ ರಕ್ಷಣೆ ಮಾಡುತ್ತಿದ್ದಾರೆ. ಆದರೆ ನಗರ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡುವ ಮೂಲಕ ಎಲ್ಲರ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರ ಸೇವೆ ಶ್ಲಾಘನೀಯ ಎಂದು ಶಾಸಕ ವೆಂಕಟರೆಡ್ಡಿ ಗೌಡ ಮುದ್ನಾಳ ಹೇಳಿದರು.

Advertisement

ನಗರದ ಸರ್ಕಾರಿ ಪ.ಪೂ ಕಾಲೇಜು ಮೈದಾನದಲ್ಲಿ ವೀರಶೈವ ಸಮಾಜ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಪೌರ ಕಾರ್ಮಿಕರಿಗೆ ಸಮವಸ್ತ್ರಗಳು ಹಾಗೂ ವರ್ಧಮಾನ್‌ ಟ್ರೇಡಿಂಗ್‌ ಕಂಪನಿ ವತಿಯಿಂದ ತಲಾ 10 ಕೆ.ಜಿ. ಜೋಳ ವಿತರಿಸಿ ಅವರು ಮಾತನಾಡಿದರು.

ಸಾಹಿತ್ಯ ಪರಿಷತ್ತು ಮತ್ತು ವೀರಶೈವ ಸಮಾಜದವರು ಪೌರ ಕಾರ್ಮಿಕರ ಸೇವೆ ಮನಗಂಡು ಸಹಾಯ ನೀಡುತ್ತಿರುವುದು ಪ್ರಶಂಸನೀಯ. ಇದರಂತೆ ಕೊರೊನಾ ತಡೆಗಟ್ಟಲು ಹೋರಾಡುತ್ತಿರುವ ಸರ್ವರಿಗೂ ಸಹಕರಿಸಬೇಕು. ಅದರಂತೆ ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪ್ರದೇಶ ಸ್ವಚ್ಛವಾಗಿಟ್ಟುಕೊಳ್ಳಬೇಕು. ಸರ್ಕಾರದ ಆದೇಶಗಳನ್ನು ತಪ್ಪದೇ ಪಾಲಿಸಬೇಕು. ಈ ಮೂಲಕ ಎಲ್ಲರೂ ಸಾಮಾಜಿಕ ಅಂತರ ಕಾಪಾಡಿ ಕೊರೊನಾ ತಡೆಗಟ್ಟಲು ಶ್ರಮಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಸುಮಾರು 80 ಜನ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಪೌರಾಯುಕ್ತ ರಮೇಶ ಸುಣಗಾರ, ಸಿಬ್ಬಂದಿ ವರ್ಗ, ಜಿಲ್ಲಾ ಕಸಾಪ ಅಧ್ಯಕ್ಷ ಡಾ| ಸಿದ್ದಪ್ಪ ಹೊಟ್ಟಿ, ನಗರ ವೀರಶೈವ ಸಮಾಜದ ಅಧ್ಯಕ್ಷ ಅಯ್ಯಣ್ಣ ಹುಂಡೇಕಾರ್‌, ಡಾ| ಸುಭಾಶ್ಚಂದ್ರ ಕೌಲಗಿ, ಸುಭಾಷ ಆಯಾರಕರ್‌, ಬಸವರಾಜ ಮೋಟ್ನಳ್ಳಿ, ಡಾ| ಭೀಮರಾಯ ಲಿಂಗೇರಿ, ಡಾ| ಎಸ್‌.ಎಸ್‌. ನಾಯಕ, ನಗರಸಭೆ ಸದಸ್ಯರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next