Advertisement

ಸ್ವಚ್ಛತೆ ಪ್ರತಿಯೊಬ್ಬರ ಜವಾಬ್ಧಾರಿಯಾಗಲಿ: ಮುದ್ನಾಳ

07:18 PM Oct 04, 2019 | Naveen |

ಯಾದಗಿರಿ: ಸ್ವಚ್ಛತೆ ಪ್ರತಿಯೊಬ್ಬರ ಜವಾಬ್ದಾರಿಯಾಗಬೇಕು. ಈ ದಿಸೆಯಲ್ಲಿ ಸರ್ಕಾರಿ ಇಲಾಖೆಗಳು ಸೇರಿದಂತೆ ಸಂಘ ಸಂಸ್ಥೆಗಳು ಪ್ರಯತ್ನ ಮಾಡಬೇಕು ಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ ಹೇಳಿದರು.

Advertisement

ನಗರದ ಎಪಿಎಂಸಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ 150ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಯಾದಗಿರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ, ಗಂಜ್‌ ವರ್ತಕರ ಸಂಘ, ಗಂಜ್‌ ಗುಮಾಸ್ತರ ಸಂಘ, ರೋಟರಿ ಕ್ಲಬ್‌ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸ್ವತ್ಛ ಭಾರತ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಅಲ್ಲದೆ ಪರಿಸರದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಇದರಿಂದ ನಗರಗಳು ಬೆಳೆದರೂ ಯಾವುದೇ ಪರಿಣಾಮ ಬೀರುವುದಿಲ್ಲ. ಗಾಂಧೀಜಿ  ಜಯಂತಿ
ದಿನದಂದು ಶ್ರಮಾದಾನ ಕೈಗೊಂಡಿರುವುದು ಅರ್ಥ ಪೂರ್ಣವಾಗಿದೆ. ಇದಕ್ಕೆ ಕೈಜೋಡಿಸಿದ ಎಲ್ಲ ಸಂಘ ಸಂಸ್ಥೆಗಳ ಕಾರ್ಯ ಶ್ಲಾಘನೀಯವಾಗಿದೆ. ಇದು ನಿತ್ಯದ ಬದುಕಿನಲ್ಲಿ ಕಾಣುವಂತಾಗಬೇಕು ಎಂದು ಹೇಳಿದರು.

ಎಪಿಎಂಸಿ ಅಧ್ಯಕ್ಷ ಶರಣಗೌಡ ಕಾಳೆಬೆಳಗುಂದಿ, ಡಿವೈಎಸ್‌ಪಿ ಶರಣಪ್ಪ, ವರ್ತಕರ ಸಂಘದ ಅಧ್ಯಕ್ಷ ವಿಶ್ವನಾಥ ಜೋಳದಡಗಿ, ರೋಟರಿ ಕ್ಲಬ್‌ ಅಧ್ಯಕ್ಷ ಹಾಗೂ ಎಪಿಎಂಸಿ ಸದಸ್ಯ ಸೋಮನಾಥ ಜೈನ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next