Advertisement

ಯಾದಗಿರಿ: 36 ಜನ ಗುಣಮುಖ

12:36 PM Jun 13, 2020 | Naveen |

ಯಾದಗಿರಿ: ಗಡಿ ಜಿಲ್ಲೆಗೆ ಮಹಾರಾಷ್ಟ್ರದ ನಂಟಿನಿಂದ ಮಹಾಮಾರಿ ಕೋವಿಡ್‌ ನಿಂದ ತತ್ತರಿಸಿದ್ದ ಜಿಲ್ಲೆಯಲ್ಲಿ ಶುಕ್ರವಾರ ಸೋಂಕಿತರು ಪತ್ತೆಯಾಗಿಲ್ಲ. ಇನ್ನೊಂದೆಡೆ 36 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುವುದು ಜನರಲ್ಲಿ ತುಸು ನೆಮ್ಮದಿ ತರಿಸಿದೆ.

Advertisement

ಗುರುವಾರ 66 ಜನರಲ್ಲಿ ಸೋಂಕು ಪತ್ತೆಯಾಗುವ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 735ಕ್ಕೆ ಏರಿಕೆಯಾಗಿತ್ತು. ಈ ಪೈಕಿ ಶುಕ್ರವಾರದವರೆಗೆ ಒಟ್ಟು 254 ಜನ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಶುಕ್ರವಾರದ 172 ನೆಗೆಟಿವ್‌ ವರದಿ ಸೇರಿ ಈವರೆಗೆ 18122 ಜನರ ವರದಿ ನೆಗೆಟಿವ್‌ ಬಂದಿವೆ.

223 ಜನರ ಮಾದರಿ ಸೇರಿದಂತೆ 858 ಜನರ ವರದಿ ಬರಬೇಕಿದೆ. ಉಳಿದ 480 ಪ್ರಕರಣಗಳು ಸಕ್ರೀಯವಾಗಿರುತ್ತವೆ. ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 1160 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 2557 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ.

ಹೊಸ ಜಿಲ್ಲಾಸ್ಪತ್ರೆಯಲ್ಲಿ 161 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಶಹಾಪುರ ಕೊರೊನಾ ಕೇರ್‌ ಸೆಂಟರ್‌ನಲ್ಲಿ 88 ಜನರನ್ನು, ಸುರಪುರ ಕೊರೊನಾ ಕೇರ್‌ ಸೆಂಟರ್‌ನಲ್ಲಿ 72 ಮತ್ತು ಏಕಲವ್ಯ ಕೊರೊನಾ ಕೇರ್‌ ಸೆಂಟರ್‌ನಲ್ಲಿ 144 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಜಿಲ್ಲೆಯ 21 ಸಾಂಸ್ಥಿಕ ಕ್ವಾರಂಟೈನ್‌ ಕೇಂದ್ರಗಳಲ್ಲಿ ಒಟ್ಟು 1333 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ 40 ಕಂಟೈನ್ಮೆಂಟ್‌ ಝೋನ್‌ ರಚಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next