Advertisement

ಪೌರ ಕಾರ್ಮಿಕರಿಗೂ ಆರೋಗ್ಯ ತಪಾಸಣೆ

03:49 PM Apr 30, 2020 | Naveen |

ಯಾದಗಿರಿ: ಕೋವಿಡ್ ವಾರಿಯರ್ಗಳಂತೆ ಕೆಲಸ ಮಾಡುತ್ತಿರುವ ಪೌರಕಾರ್ಮಿಕರಿಗೆ ಕೊವಿಡ್‌-19 ಪರೀಕ್ಷೆ ಜೊತೆಗೆ ಎಲ್ಲಾ ರೀತಿಯ ಆರೋಗ್ಯ ತಪಾಸಣೆ ನಡೆಸಬೇಕು. ಯಾವುದಾದರೂ ಸಮಸ್ಯೆಗಳು ಕಂಡುಬಂದಲ್ಲಿ ಜಿಲ್ಲಾಸ್ಪತ್ರೆ ಶಿಫಾರಸು ಮಾಡಲು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ಸೂಚಿಸಿದರು.

Advertisement

ಇಲ್ಲಿನ ನಗರಸಭೆಯಲ್ಲಿ ಮಂಗಳವಾರ ಪೌರಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ಪೌರಕಾರ್ಮಿಕರಿಗೆ ಗ್ಲೌಸ್‌, ಸ್ಯಾನಿಟೈಸರ್‌, ಮಾಸ್ಕ್ ಸೇರಿದಂತೆ ಇನ್ನಿತರ ಸುರಕ್ಷಾ ಸಾಧನ ನೀಡಬೇಕು. ಅವರಿಗೆ ಉಪಾಹಾರ ಕೂಡ ನೀಡಲು ಸೂಚಿಸಿದ ಡಿಸಿ, ಕೋವಿಡ್ ಸಾಂಕ್ರಾಮಿಕ ರೋಗವಾಗಿರುವುದರಿಂದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಸಾಮಾಜಿಕ ಅಂತರ ಕಾಪಾಡಿಕೊಂಡು ಕರ್ತವ್ಯ ನಿರ್ವಹಿಸುವಂತೆ ತಿಳಿಸಿದರು.

ಡಾ.ಕೀರ್ತಿ ಎಚ್‌.ಚಿಂತನಹಳ್ಳಿ ನೇತೃತ್ವದ ತಂಡವು ಪೌರಕಾರ್ಮಿಕರು ಹಾಗೂ ನಗರಸಭೆಯ ಎಲ್ಲಾ ಸಿಬ್ಬಂದಿಗೆ ಜ್ವರ, ಶ್ವಾಸಕೋಶ ಹಾಗೂ ರಕ್ತದೊತ್ತಡ ತಪಾಸಣೆ ನಡೆಸಿತು. ಪೌರಾಯುಕ್ತ ರಮೇಶ ಸುಣಗಾರ, ಇಂಜಿನಿಯರ್‌ ಗಂಗಾಧರಗೌಡ, ಪರಿಸರ ಇಂಜಿನಿಯರ್‌ ಸಂಗಮೇಶ ಪನಶೆಟ್ಟಿ ಹಾಗೂ ಆರೋಗ್ಯ ನಿರೀಕ್ಷಕರು ಇತರೆ ಸಿಬ್ಬಂದಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next