Advertisement
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕೋವಿಡ್-19 ತಡೆಗೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮಮಟ್ಟದ ಟಾಸ್ಕ್ಫೋರ್ಸ್ ಸಮಿತಿಗಳಲ್ಲಿರುವ ಜನಪ್ರತಿನಿಧಿಗಳು, ಪಿಡಿಒ, ಗ್ರಾಮ ಲೆಕ್ಕಾಧಿಕಾರಿಗಳು ಹೋಂ ಕ್ವಾರಂಟೈನ್‌ನಲ್ಲಿದ್ದವರ ಚಲನವಲನಗಳ ಮೇಲೆ ನಿಗಾವಹಿಸಬೇಕು. ಮನೆಬಿಟ್ಟು ಹೊರಗಡೆ ಓಡಾಡಿದಲ್ಲಿ ಅಥವಾ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಲ್ಲಿ ಜಿಲ್ಲಾಡಳಿತದ ಕಂಟ್ರೋಲ್ ರೂಂ. 08473 253950 ಸಂಖ್ಯೆಗೆ ಮಾಹಿತಿ ನೀಡಲು ತಿಳಿಸಿ ಎಂದು ಸಲಹೆ ನೀಡಿದರು.
ಸ್ಟಿಟ್ಯೂಶನಲ್ ಕ್ವಾರಂಟೈನ್ ಸೆಂಟರ್‌ಗಳಲ್ಲಿ ಪ್ರತ್ಯೇಕವಾಗಿರಿಸಲಾಗಿದೆ. ಈ ಪೈಕಿ ಈಗಾಗಲೇ 11 ಸಾವಿರ ಜನರ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದರು.
Related Articles
Advertisement
ಜಿಲ್ಲೆಯಲ್ಲಿ ಕೋವಿಡ್19 ಟೆಸ್ಟ್ ಪೂರ್ವಭಾವಿಯಾಗಿ ನಡೆಸುವ 2 ಟ್ರೂನ್ಯಾಟ್ ಲ್ಯಾಬ್‌ಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಹೊಸ ಜಿಲ್ಲಾಸ್ಪತ್ರೆಯಲ್ಲಿ ಆರ್‌ಟಿ-ಪಿಸಿಆರ್ ಟೆಸ್ಟ್ ಲ್ಯಾಬ್ ಸ್ಥಾಪನೆಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಷಿನ್ ಬಂದ ನಂತರ ಜಿಲ್ಲೆಯಲ್ಲಿಯೇ ಪರೀಕ್ಷೆ ನಡೆಸಬಹುದು. ಹೊಸ ಜಿಲ್ಲಾಸ್ಪತ್ರೆಯಲ್ಲಿ 132 ಹಾಸಿಗೆಗಳಿಗೆ ಹೈಫ್ಲೋ ಆಕ್ಸಿಜನ್ ಸರಬರಾಜು ವ್ಯವಸ್ಥೆ ಮಾಡಲಾಗಿದೆ. 33 ತಜ್ಞ ವೈದ್ಯರು, 63 ವೈದ್ಯರು, 18 ಶುಶ್ರೂಷಕರು, 16 ಲ್ಯಾಬ್ ತಂತ್ರಜ್ಞರು ಹಾಗೂ 20 ಫಾರ್ಮಾಸಿಸ್ಟ್‌ಗಳ ಅವಶ್ಯಕತೆ ಇದೆ. ಅರ್ಜಿ ಕರೆದರೂ ತಜ್ಞವೈದ್ಯರು, ವೈದ್ಯರು, ಲ್ಯಾಬ್ ತಂತ್ರಜ್ಞರು ಬರುತ್ತಿಲ್ಲ ಎಂದು ತಿಳಿಸಿದರು.
ಶೇ.78.47 ಸರ್ವೇ ಕಾರ್ಯಜಿಲ್ಲೆಯಲ್ಲಿ ಸುರಪುರದ ಆಸರ್‌ವೊಹಲ್ಲಾ, ಶಹಾಪುರ ತಾಲೂಕಿನ ಕನ್ಯಾಕೋಳೂರು, ಚಂದಾಪುರ ಕೆಳಗಿನ ತಾಂಡಾ ಮತ್ತು ಯಾದಗಿರಿ ನಗರದ ದುಖಾನವಾಡಿ ಸೇರಿ ಒಟ್ಟು 4 ಕಂಟೇನ್ಮೆಂಟ್ ಝೋನ್‌ಗಳನ್ನು ಗುರತಿಸಲಾಗಿದ್ದು, ಸಿಝಡ್ ಆ್ಯಪ್ ಮೂಲಕ ಶೇ.78.47ರಷ್ಟು ಸರ್ವೇ ಮಾಡಲಾಗಿದೆ. ಇನ್ನು ಜಿಲ್ಲೆಯಾದ್ಯಂತ ಮತಗಟ್ಟೆ ಅಧಿಕಾರಿಗಳು, ಶಿಕ್ಷಕರು ಮತ್ತು ಆಶಾ ಕಾರ್ಯಕರ್ತೆಯರಿಂದ ಹೆಲ್ತ್ ವಾಚ್ ಆ್ಯಪ್ ಮೂಲಕ ನಡೆಸುತ್ತಿರುವ ಕುಟುಂಬಗಳ ಸಾರ್ವತ್ರಿಕ ಸಮೀಕ್ಷೆ ಕಾರ್ಯ ಶೇ.79.44ರಷ್ಟು ಪೂರ್ಣಗೊಂಡಿದೆ ಎಂದು ವಿವರಿಸಿದರು. ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.