Advertisement
ನಗರದ ಚರ್ಚ್ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿಕ್ಷಣ, ಸಮಾಜ ಕಲ್ಯಾಣ, ಪೊಲೀಸ್ ಇಲಾಖೆ, ಕಾರಾಗೃಹ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸರ್ಕಾರೇತರ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಸಾಗಾಣಿಕೆ ವಿರೋದಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ವೆಂಕಟರಡ್ಡಿಗೌಡ ಮುದ್ನಾಳ, ಮಾದಕ ವಸ್ತುಗಳ ಸೇವನೆ ಮಾಡುವ ವ್ಯಕ್ತಿಯು ಸ್ವ ಇಚ್ಛೆಯಿಂದ ನಿರ್ಧಾರ ಕೈಗೊಂಡಾಗ ವ್ಯಸನ ಮುಕ್ತನಾಗಲು ಸಾಧ್ಯವಾಗುತ್ತದೆ. ಯುವಜನರು ಮಾದಕ ವಸ್ತುಗಳಿಂದ ದೂರವಿದ್ದು, ಸದೃಢ ದೇಶ ನಿರ್ಮಾಣದಲ್ಲಿ ಭಾಗಿಯಾಗಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಮಾನಸಿಕ ಆರೋಗ್ಯ ಅಧಿಕಾರಿಗ ಡಾ| ಭಗವಂತ ಅನವಾರ ಮಾತನಾಡಿ, 1989ರಿಂದ ಪ್ರತಿವರ್ಷ ಜೂನ್ 26 ಅನ್ನು ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನವನ್ನು ಒಂದೊಂದು ಘೋಷಣೆಯೊಂದಿಗೆ ಆಚರಿಸಲಾಗುತ್ತದೆ. ಪ್ರಸಕ್ತ ವರ್ಷ ‘ನ್ಯಾಯಕ್ಕಾಗಿ ಆರೋಗ್ಯ, ಆರೋಗ್ಯಕ್ಕಾಗಿ ನ್ಯಾಯ’ ಎಂಬ ಘೋಷಣೆಯೊಂದಿಗೆ ಆಚರಿಸಲಾಗುತ್ತಿದೆ ಎಂದು ಹೇಳಿದರು.
ಇತ್ತೀಚೆಗೆ ವಿದ್ಯುನ್ಮಾನ ಉಪಕರಣಗಳ ಅತಿಯಾದ ಬಳಕೆಯೂ ವ್ಯಸನವಾಗಿ ಪರಿಣಮಿಸಿದೆ. ದೇಶದಲ್ಲಿ 7 ಕೋಟಿ ಜನ ಮಾದಕ ವಸ್ತುಗಳ ಸೇವನೆಯ ಚಟಕ್ಕೆ ಬಲಿಯಾಗಿದ್ದಾರೆ. ಪಂಜಾಬಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿದೆ. ಗುಣಮುಖವಾಗದ ಕೆಲವು ಗಂಭೀರ ಕಾಯಿಲೆಗಳಿಗೆ ಒಳಗಾದವರು ಮಾದಕವಸ್ತುಗಳ ಸೇವನೆ ಮಾಡುತ್ತಾರೆ. ಇದರ ನಿಯಂತ್ರಣಕ್ಕೆ ದೊಡ್ಡ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮ ಮಾಡಬೇಕಿದೆ ಎಂದು ತಿಳಿಸಿದರು.
ಜಿಲ್ಲಾ ಮಾನಸಿಕ ಆರೋಗ್ಯ ಅಧಿಕಾರಿ ಡಾ| ಉಮೇಶ ಮಾತನಾಡಿ, ಮಾದಕ ವಸ್ತು ವ್ಯಸನ ಎಂದರೆ ಒಂದು ರೀತಿಯ ಮಾನಸಿಕ ಕಾಯಿಲೆ, ಮಾದಕ ವಸ್ತುಗಳ ಸೇವನೆಯಿಂದ ಮಾನಸಿಕ, ದೈಹಿಕ, ಸಾಮಾಜಿಕ, ಆರ್ಥಿಕ, ಬೌದ್ಧಿಕ, ನೈತಿಕವಾಗಿ ವ್ಯಕ್ತಿಯ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ ಎಂದು ಹೇಳಿದರು.
ಮನೋಚೈತನ್ಯ ಕಾರ್ಯಕ್ರಮದಡಿಯಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ 1ನೇ ಮಂಗಳವಾರ ಶಹಾಪುರ, 2ನೇ ಮಂಗಳವಾರ ಸುರಪುರ, 3ನೇ ಮಂಗಳವಾರ ಗುರುಮಠಕಲ್, 4ನೇ ಮಂಗಳವಾರ ಹುಣಸಗಿ, 1ನೇ ಶುಕ್ರವಾರ ವಡಗೇರಾ ಹಾಗೂ ಪ್ರತಿದಿನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನಿಡಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಶ್ರೀನಿವಾಸರಾವ್ ಕುಲಕರ್ಣಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು, ಶಾರದಾ ಆಯುರ್ವೇದಿಕ್ ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು, ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು. ಜಯಕುಮಾರ ಸ್ವಾಗತಿಸಿದರು. ಹಿರಿಯ ಆರೋಗ್ಯ ಸಹಾಯಕರಾದ ಮಹಿಪಾಲರಡ್ಡಿ ನಿರೂಪಿಸಿದರು. ಶರಣಬಸವ ಹೊಸಮನಿ ವಂದಿಸಿದರು.
ಜಾಗೃತಿ ಜಾಥಾ: ಕಾರ್ಯಕ್ರಮಕ್ಕೂ ಮೊದಲು ನಗರದ ಹಳೆ ಪ್ರವಾಸಿ ಮಂದಿರದಿಂದ ಚರ್ಚ್ ಸಭಾಂಗಣದವರೆಗೆ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಗೌರವಾನ್ವಿತ ರಾಚಪ್ಪ ಕೆ. ತಾಳಿಕೋಟಿ ಚಾಲನೆ ನೀಡಿದರು.
ಜಿಪಂ ಸಿಇಒ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಹಬೀಬ್ ಉಸ್ಮಾನ್ ಪಟೇಲ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿಗಳಾದ ಡಾ| ಸೂರ್ಯಪ್ರಕಾಶ ಎಂ.ಕಂದಕೂರ ಪಾಲ್ಗೊಂಡಿದ್ದರು.