Advertisement
ಜಿಲ್ಲೆಯ ಗಡಿ ಭಾಗದಲ್ಲಿರುವ ಗ್ರಾಮಗಳಿಗೆ ಪಲ್ಲಿ ಎಂದಿರುವ ಹೆಸರನ್ನು ಹಳ್ಳಿ ಎಂದು ಕನ್ನಡೀಕರಣಗೊಳಿಸುವುದು ಇಲ್ಲವೇ ಮರು ನಾಮಕರಣ ಮಾಡುವಂತೆ ಸಾಕಷ್ಟು ಬಾರಿ ಒತ್ತಾಯಿಸಿದರೂ ಸ್ಪಂದನೆ ಸಿಕ್ಕಿಲ್ಲ ಎನ್ನುವುದು ಕನ್ನಡ ಪರ ಸಂಘಟನೆಗಳ ಅಸಮಾಧಾನಕ್ಕೆ ಕಾರಣವಾಗಿದೆ.
Related Articles
Advertisement
ಗಡಿ ಭಾಗದ ಶಾಲೆಗಳಿಗೆ ಮೊದಲು ಕನ್ನಡ ಪುಸ್ತಕಗಳನ್ನು ಸರಬರಾಜು ಮಾಡಲು ಆದ್ಯತೆ ನೀಡಬೇಕು. ಸಿಬಿಎಸ್‌ಸಿ ಮತ್ತು ಐಸಿಎಸ್ ಪಠ್ಯಕ್ರಮದಲ್ಲಿ ಪ್ರಥಮ ಭಾಷೆಯಾಗಿ ಕನ್ನಡ ಅಳವಡಿಸಬೇಕು. ಡಾ| ಸರೋಜಿನಿ ಮಹಿಷಿ ವರದಿ ಅನ್ವಯ ಎಲ್ಲ ಸರ್ಕಾರಿ-ಖಾಸಗಿ ಸಂಸ್ಥೆಗಳ ಕಾರ್ಖಾನೆ, ಉದ್ದಿಮೆಗಳಲ್ಲಿ ಸಿ ಮತ್ತು ಡಿ ವೃಂದದ ನೌಕರರನ್ನು ನೇಮಕಾತಿ ಮಾಡಿಕೊಳ್ಳುವಾಗ ಕನ್ನಡಿಗರಿಗೆ ಕಡ್ಡಾಯವಾಗಿ ಮೀಸಲಾತಿ ನೀಡಬೇಕು. ಸರ್ಕಾರಿ ಶಾಲೆಗಳಲ್ಲಿ ಕನ್ನಡ ಬಳಕೆ ಸಮರ್ಪಕ ಅನುಷ್ಠಾನ ಆಗುತ್ತಿರುವ ಮತ್ತು ಆಗದಿರುವ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಸಮಿತಿಗೆ ಮಾಹಿತಿ ನೀಡುವಂತೆ ತಿಳಿಸಿದರು.
ಕನ್ನಡ ಭಾಷೆ, ನೆಲ ಕುರಿತು ಪ್ರತಿ ಮಾಹೆ ಒಂದು ವಿಶೇಷ ಉಪನ್ಯಾಸ, ವಿಚಾರ ಸಂಕಿರಣ, ಕನ್ನಡ ಜಾಗೃತಿ ಸಮಾವೇಶ ಹಾಗೂ ಇನ್ನಿತರ ಕನ್ನಡಪರ ಕಾರ್ಯಕ್ರಮಗಳನ್ನು ಕಾಲೇಜು ಮತ್ತು ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ಏರ್ಪಡಿಸುವ ಕುರಿತು ಚರ್ಚೆಯಾಗಿತ್ತು. ಆ ಚರ್ಚೆ ಕಾಗದದಲ್ಲಿಯೇ ಉಳಿದಿದೆ ಹೊರತು ಅನುಷ್ಠಾನವಾಗಿಲ್ಲ ಎನ್ನುವ ಅಸಮಾಧಾನ ಕೇಳಿ ಬಂದಿದೆ.
ಅನೀಲ ಬಸೂದೆ