Advertisement

ಗ್ರಂಥಾಲಯ ಕಟ್ಟಡ ಬಳಕೆಗೆ ಗ್ರಹಣ

04:41 PM Dec 06, 2019 | Naveen |

ಯಾದಗಿರಿ: ಹಳೆ ಕಟ್ಟಡ ಶಿಥಿಲಗೊಂಡ ಹಿನ್ನೆಲೆಯಲ್ಲಿ ಗ್ರಾಪಂನಿಂದ ನಿರ್ಮಿಸಲಾಗಿರುವ ಹೊಸ ಕಟ್ಟಡದಲ್ಲಿಯೂ ಗ್ರಂಥಾಲಯ ಆರಂಭವಾಗುವುದಕ್ಕೆ ಗ್ರಹಣ ಹಿಡಿದಿದೆ.

Advertisement

ಜಿಲ್ಲೆಯ ಗುರುಮಠಕಲ್‌ ತಾಲೂಕು ಪಸಪೂಲ ಗ್ರಾಪಂ ಕೇಂದ್ರ ಸ್ಥಾನವಾಗಿದೆ. ಈ ಹಿಂದೆ ಗ್ರಾಮದಲ್ಲಿದ್ದ ಹಳೆ ಕಟ್ಟಡದಲ್ಲಿಯೇ ಇಷ್ಟು ದಿನ ಗ್ರಂಥಾಲಯ ನಡೆಯುತ್ತಿತ್ತು, ಹಳೆ ಕಟ್ಟಡ ಶಿಥಿಲಗೊಂಡಿದ್ದರಿಂದ 2013-14ರಲ್ಲಿ ಗ್ರಾಪಂನಿಂದ ಬಿಆರ್‌ಜಿಎಫ್‌ ಯೋಜನೆಯಲ್ಲಿ ಸಾರ್ವಜನಿಕ ಗ್ರಂಥಾಲಯ ಕಟ್ಟಡ ಕಾಮಗಾರಿ ಆರಂಭಿಸಿ 2015ರಲ್ಲಿ ಪೂರ್ಣಗೊಳಿಸಲಾಗಿದೆ. ಹಲವಾರು ವರ್ಷಗಳೇ ಕಳೆದರೂ ಅಧಿಕಾರಿಗಳ ಬೇಜವ್ಧಾರಿತನದಿಂದ ಉದ್ಘಾಟನೆ ಆಗದೇ ನನೆಗುದಿಗೆ ಬಿದ್ದಿದೆ ಎನ್ನುವುದು ಗ್ರಾಮಸ್ಥರ ಆರೋಪ. ಕೆಲ ದಿನಗಳಿಂದ ಕಟ್ಟಡ ಸಂಪೂರ್ಣ ಶಿಥಿಲಗೊಂಡಿದ್ದರಿಂದ ಗ್ರಂಥಾಲಯವೇ ತೆರೆಯದಂತಾಗಿದ್ದು, ವಿದ್ಯಾರ್ಥಿಗಳು, ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ.

ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಪುಸ್ತಕ, ವಿವಿಧ ಪತ್ರಿಕೆಗಳು ಲಭ್ಯವಾಗಿ ಹಲವು ಪರೀಕ್ಷೆಗಳಿಗೆ ತಯಾರಿ ನಡೆಸಲು ಅನುಕೂಲವಾಗುತ್ತದೆ. ಆದರೆ ಗ್ರಂಥಾಲಯ ಇಲ್ಲದೇ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ನಡೆಸುವುದಕ್ಕೆ ಕಷ್ಟವಾಗುತ್ತಿದೆ ಎನ್ನುತ್ತಾರೆ ವಿದ್ಯಾರ್ಥಿಗಳು.

ವಿದ್ಯಾರ್ಥಿಗಳು ನಿತ್ಯ ಯಾದಗಿರಿಗೆ ಶಾಲಾ ಕಾಲೇಜುಗಳಿಗೆ ಆಗಮಿಸಿದ ವೇಳೆ ಪತ್ರಿಕೆ, ಪುಸ್ತಕ ಓದುವ ಅನಿವಾರ್ಯತೆ ಎದುರಾಗಿದೆ. ತಮ್ಮ ಗ್ರಾಮದಲ್ಲಿ ಗ್ರಂಥಾಲವಿದ್ದರೂ ಉಪಯೋಗಕ್ಕೆ ಬಾರದಂತಾಗಿದೆ ಎನ್ನುವುದು ಸ್ಥಳೀಯರ ಗೋಳು.

ಗ್ರಂಥಾಲಯಕ್ಕೆ ನಿರ್ಮಿಸ ಲಾಗಿರುವ ಕಟ್ಟಡವನ್ನು ಅಂಗನವಾಡಿ ಕೇಂದ್ರಕ್ಕೆ ಬಳಸಿಕೊಳ್ಳುವ ಕುರಿತು ಚಿಂತನೆ ನಡೆದಿದ್ದು, ಯಾವುದೇ ಕಾರಣಕ್ಕೂ ಅದಕ್ಕೆ ಅವಕಾಶ ನೀಡಬಾರದು. ನಮಗೆ ಗ್ರಂಥಾಲಯವೇ ಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

Advertisement

ಶೀಘ್ರವೇ ಹಳೆ ಗ್ರಂಥಾಲಯವನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರಿಸಿ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು. ಸಂಬಂಧಿಸಿದ ಅಧಿಕಾರಿಗಳು ಇತ್ತ ಗಮನಿಸಿ ಸಮಸ್ಯೆಗೆ ಸ್ಪಂದಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next