Advertisement

8ರಂದು ರಾಷ್ಟ್ರೀಯ ಲೋಕ್‌ ಅದಾಲತ್‌

12:57 PM Feb 01, 2020 | |

ಯಾದಗಿರಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿ ಕಾರ ಬೆಂಗಳೂರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಆಶ್ರಯದಲ್ಲಿ ರಾಷ್ಟ್ರೀಯ ಲೋಕ್‌ ಅದಾಲತ್‌ನ್ನು ಫೆ. 8ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲೆಯ ಯಾದಗಿರಿ, ಸುರಪುರ ಮತ್ತು ಶಹಾಪುರ ನ್ಯಾಯಾಲಯಗಳ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಶಿವನಗೌಡ ತಿಳಿಸಿದರು.

Advertisement

ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷದಲ್ಲಿ ಫೆ. 8, ಏ.11, ಜು.11, ಸೆ.12 ಹಾಗೂ ಡಿ. 12ರಂದು ಸೇರಿದಂತೆ ಒಟ್ಟು 5
ರಾಷ್ಟ್ರೀಯ ಲೋಕ್‌ ಅದಾಲತ್‌ಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಲೋಕ್‌ ಅದಾಲತ್‌ ಮೂಲಕ ಶೀಘ್ರದಲ್ಲಿ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣ ಅವಕಾಶವಾಗಿದೆ. ಫೆ. 8ರ ಲೋಕ್‌ ಅದಾಲತ್‌ನಲ್ಲಿ ಜಿಲ್ಲೆಯ
1,207 ಪ್ರಕರಣಗಳನ್ನು ರಾಜಿ ಮೂಲಕ ಪರಿಹರಿಸಲು ಗುರುತಿಸಲಾಗಿದೆ.

ಫೆ. 8ರ ವರೆಗೆ ಪ್ರಕರಣಗಳನ್ನು ಗುರುತಿಸುವ ಕಾರ್ಯ ಚಾಲ್ತಿಯಲ್ಲಿರುತ್ತದೆ.
ಸಾರ್ವಜನಿಕರು ಅದಾಲತ್‌ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ಹೆಚ್ಚಿನ ಮಾಹಿತಿಗಾಗಿ ನ್ಯಾಯ ಸಂಯೋಗ, ಕಾನೂನು ನೆರವು ಘಟಕ ನ್ಯಾಯ
ದೇಗುಲ ಮೊದಲನೆ ಮಹಡಿ, ಹೆಚ್‌. ಸಿದ್ದಯ್ಯ ರಸ್ತೆ, ಬೆಂಗಳೂರು-560027, ದೂರವಾಣಿ ಸಂಖ್ಯೆ:080-22111730 ಹಾಗೂ ವೆಬ್‌ಸೈಟ್‌ www.kslsa.
kar.nic.in ಸಂಪರ್ಕಿಸಬಹುದು. ಅಥವಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲೂಕು ಕಾನೂನು ಸೇವಾ ಸಮಿತಿ ಶಹಾಪುರ/ ಸುರಪುರ ಸದಸ್ಯ ಕಾರ್ಯದರ್ಶಿ ಅವರನ್ನು
ಸಂಪರ್ಕಿಸಬಹುದು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ದೂ: 08473 252325 ಸಂಪರ್ಕಿಸಬಹುದು ಎಂದು ತಿಳಿಸಿದರು.

ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿ ನಾಮದೇವ ಕೆ.ಸಾಲಮಂಟಪಿ, ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಅರ್ಜುನ ಬನಸೊಡೆ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next