Advertisement

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

08:00 PM Apr 27, 2024 | Team Udayavani |

ಯಾದಗಿರಿ : ಲೋಕಸಭೆ ಚುನಾವಣೆ ಹಾಗೂ ಸುರಪುರ ವಿಧಾನಸಭಾ ಉಪಚುನಾವಣೆ ಪ್ರಚಾರದ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆಗಮಿಸಲಿದ್ದಾರೆ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರ್ ಅವರು ತಿಳಿಸಿದರು.

Advertisement

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು ಅವರು, ಮೇ.1.ರಂದು ಸುರಪುರ ಉಪಚುನಾವಣೆ ಬಹಿರಂಗ ಸಭೆಯಲ್ಲಿ ಹಾಗೂ ಯಾದಗಿರಿ ನಗರದ ಹೊನ್ನಕೇರಿ ಲೇಔಟ್‌ನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆ ಬಹಿರಂಗ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಿದರು.

ಅಂದು ಸುರಪುರ ತಾಲೂಕಿನ ದೇವತ್ಕಲ್ ಪಟ್ಟಣದಲ್ಲಿ ನಡೆಯುವ ಪ್ರಚಾರ ಸಭೆಯ ನಂತರ ಮಧ್ಯಾಹ್ನ 2.ಗಂಟೆಗೆ ಯಾದಗಿರಿ ನಗರಕ್ಕೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ಅವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಬಸರೆಡ್ಡಿ ಅನಪುರ ಹಾಗೂ ಕಾಂಗ್ರೆಸ್ ಪಕ್ಷದ ಅನೇಕ ನಾಯಕರು ಒಳಗೂಡಿ ಬೈಕ್ ರ‍್ಯಾಲಿ ಮೂಲಕ ಅವರನ್ನು ಕರೆತರಲಾಗುವುದು. ನಗರದ ಮೈಲಾಪುರ ಅಗಸಿಯಿಂದ ಕಾರ್ಯಕ್ರಮ ನಡೆಯುವ ಸ್ಥಳ ಹೊನ್ನಕೇರಿ ಲೇಔಟ್‌ವರೆಗೂ ರೋಡ್ ಶೋ ನಡೆಯಲಿದ್ದು, ಬಹಿರಂಗ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಪಕ್ಷದ ಅಭಿಮಾನಿಗಳು ಭಾಗವಹಿಸಬೇಕೆಂದು ಮನವಿ ಮಾಡಿದರು.

ಬೃಹತ್ ಬಹಿರಂಗ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪುರ, ವೈದ್ಯಕೀಯ ಶಿಕ್ಷಣ ಸಚಿವರಾದ ಶರಣಪ್ರಕಾಶ ಪಾಟೀಲ ಹಾಗೂ ಈ ಭಾಗದ ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next