Advertisement

ಕಾರ್ಮಿಕರ ಕ್ವಾರಂಟೈನ್‌ ಕಡ್ಡಾಯ: ಇಬ್ರಾಹಿಂ

12:16 PM May 13, 2020 | Team Udayavani |

ಯಾದಗಿರಿ: ಹೊರ ರಾಜ್ಯಗಳಿಂದ ಜಿಲ್ಲೆಗೆ ಮರಳುವ ವಲಸೆ ಕಾರ್ಮಿಕರನ್ನು ಕಡ್ಡಾಯವಾಗಿ 14 ದಿನಗಳ ಕಾಲ ಕ್ವಾರಂಟೈನ್‌ ಮಾಡಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ, ಹಜ್‌ ಮತ್ತು ವಕ್ಫ್ ಇಲಾಖೆ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎ.ಬಿ. ಇಬ್ರಾಹಿಂ ಸೂಚಿಸಿದರು.

Advertisement

ಡಿಸಿ ಕಚೇರಿ ಸಭಾಂಗಣದಲ್ಲಿ ಕೋವಿಡ್‌-19 ಸಂಬಂಧ ಜಿಲ್ಲಾಡಳಿತ ಕೈಗೊಂಡ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಭೆ ನಡೆಸಿದರು. ಕ್ವಾರಂಟೈನ್‌ ನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ಅನುಸರಿಸಬೇಕು. ಕ್ವಾರಂಟೈನ್‌ ವ್ಯಕ್ತಿಗಳಿಗೆ ವಸತಿ ಮತ್ತು ಊಟದೊಂದಿಗೆ ಅಗತ್ಯ ಸೌಕರ್ಯ ಒದಗಿಸಬೇಕು. ಕೋವಿಡ್‌ 19 ವೈರಾಣುವಿಗೆ ಔಷಧವನ್ನು ಇನ್ನೂ ಕಂಡುಹಿಡಿಯದ ಕಾರಣ ಸಾಮಾಜಿಕ ಅಂತರ ಕಾಪಾಡುವುದು ಮತ್ತು ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು ಅಗತ್ಯ ಎಂದರು.

ಡಿಸಿ ಎಂ.ಕೂರ್ಮಾರಾವ್‌ ಮಾತನಾಡಿ, ರಾಜ್ಯದ ಇತರೆ ಜಿಲ್ಲೆಗಳಿಂದ ಯಾದಗಿರಿ ಜಿಲ್ಲೆಗೆ ಮೇ 10ರವರೆಗೆ 403 ಬಸ್‌ಗಳಲ್ಲಿ 10,537 ಕಾರ್ಮಿಕರು ಆಗಮಿಸಿದ್ದಾರೆ. ಹೊರ ರಾಜ್ಯಗಳಿಂದ ಬಂದ ಮತ್ತು ಬರುತ್ತಿರುವ ಕಾರ್ಮಿಕರನ್ನು ಇನ್‌ಸ್ಟಿಟ್ಯೂಶನಲ್‌ ಕ್ವಾರಂಟೈನ್‌ನಲ್ಲಿ ಇರಿಸಲಾಗುತ್ತಿದೆ. ಸರ್ಕಾರದ ಮಾರ್ಗಸೂಚಿಗಳನ್ವಯ ಇವರ ಮಾದರಿಗಳನ್ನು ಸಂಗ್ರಹಿಸಿ ಕೋವಿಡ್‌19 ಪರೀಕ್ಷೆಗೆ ಕಳುಹಿಸಲಾಗುತ್ತಿದೆ ಎಂದರು. ಪ್ರತಿದಿನ ಸರಾಸರಿ 50 ಮಾದರಿಗಳನ್ನು ಕೋವಿಡ್‌19 ಪರೀಕ್ಷೆಗೆ ಕಳಿಸಲಾಗುತ್ತಿದೆ. ಕೋವಿಡ್‌19 ಟೆಸ್ಟ್‌ ಲ್ಯಾಬ್‌ಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ. ಲ್ಯಾಬ್‌ ಗಳಿಗೆ ಬೇಕಾದಂತಹ ತಾಂತ್ರಿಕ ಸಿಬ್ಬಂದಿ ನೇಮಕಾತಿಯನ್ನು ಗುತ್ತಿಗೆ ಆಧಾರದಲ್ಲಿ ತೆಗೆದುಕೊಳ್ಳಲು ಕ್ರಮ ವಹಿಸಲಾಗುತ್ತಿದೆ ಎಂದು ವಿವರಿಸಿದರು.

ಜಿಪಂ ಸಿಇಒ ಶಿಲ್ಪಾ ಶರ್ಮಾ ಮಾತನಾಡಿ, ಕಾರ್ಮಿಕರಿಗೆ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ನೀಡಲಾಗುತ್ತಿದ್ದು, ಎಲ್ಲಾ ಕಾರ್ಮಿಕರಿಗೂ ಉದ್ಯೋಗ ನೀಡುವಂತಹ ಸಮಗ್ರ ಕ್ರಿಯಾ ಯೋಜನೆಯನ್ನು ತಯಾರು ಮಾಡಲಾಗುತ್ತಿದೆ ಎಂದು ತಿಳಿಸಿದರು. ಎಸ್ಪಿ ಋಷಿಕೇಶ್‌ ಭಗವಾನ್‌ ಸೋನವಣೆ, ಅಪರ ಜಿಲ್ಲಾಧಿಕಾರಿ ಪ್ರಕಾಶ್‌ ಜಿ.ರಜಪೂತ್‌, ಸಹಾಯಕ ಆಯುಕ್ತ ಶಂಕರಗೌಡ ಎಸ್‌.ಸೋಮನಾಳ, ಡಾ.ಎಂ.ಎಸ್‌ .ಪಾಟೀಲ್‌ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next