Advertisement

ಯಾದಗಿರಿ: ಕರಪತ್ರ, ಪೋಸ್ಟರ್‌ ಮುದ್ರಿಸಲು ಅನುಮತಿ ಕಡ್ಡಾಯ

06:30 PM Apr 13, 2023 | Team Udayavani |

ಯಾದಗಿರಿ: ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ, ರಾಜಕೀಯ ಪಕ್ಷಗಳ ಮತ್ತು ಅಭ್ಯರ್ಥಿಗಳ ಕರಪತ್ರ, ಪೋಸ್ಟರ್‌ ಮತ್ತು ಬ್ಯಾನರ್‌ನ್ನು ಮುದ್ರಿಸುವ ಮೊದಲು ಅನುಮತಿ ಪಡೆದು ಚುನಾವಣೆ ನೀತಿ ಸಂಹಿತೆಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಸ್ನೇಹಲ್‌ ಆರ್‌. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

ಯಾವುದೇ ರೀತಿಯ ಅಪಪ್ರಚಾರ, ಸುಳ್ಳು ಮಾಹಿತಿಯ, ಕೋಮುಗಲಭೆ ಸೃಷ್ಟಿಸುವಂತಹ ಕರಪತ್ರ, ಪೋಸ್ಟರ್‌ ಮತ್ತು ಬ್ಯಾನರ್‌ಗಳನ್ನು ಮುದ್ರಿಸಲು ಅವಕಾಶವಿರುವುದಿಲ್ಲ ಎಂದು ತಿಳಿಸಿದ್ದಾರೆ. ಪ್ರತಿ ಪೇಜ್‌ನ ಮುದ್ರಣಕ್ಕೆ ಈಗಾಗಲೇ ಹಣ ನಿಗದಿಪಡಿಸಲಾಗಿದೆ. ಕರಪತ್ರ, ಫಲಕ, ಪೋಸ್ಟರ್‌, ಬ್ಯಾನರ್‌ ಮುಂಭಾಗದಲ್ಲಿ ಮುದ್ರಕರ ಹೆಸರು, ಪ್ರಕಾಶಕರ ಹೆಸರು, ಮೊಬೈಲ್‌ ಸಂಖ್ಯೆ ಮತ್ತು ಮುದ್ರಣ ಪ್ರತಿಗಳ ಸಂಖ್ಯೆ ನಮೂದಿಸಬೇಕು ಎಂದು ಅವರು ತಿಳಿಸಿದ್ದಾರೆ.

ಯಾವುದೇ ಜಾತಿ, ಧರ್ಮದ ಜನರ ಭಾವನೆಗೆ ಧಕ್ಕೆ ತರುವ ವಿಷಯವನ್ನು ಮುದ್ರಿಸಬಾರದು. ಯಾವುದೇ ನಿಬಂಧನೆಗಳನ್ನು ಉಲ್ಲಂಘಿಸಿದರೆ ಜೈಲು ಶಿಕ್ಷೆ ಮತ್ತು ದಂಡ ವಿ ಧಿಸಬಹುದಾಗಿದೆ. ಚುನಾವಣಾ ಆಯೋಗದ ಮಾರ್ಗಸೂಚಿಯನುಸಾರ ಬ್ಯಾನರ್‌, ಪ್ಲೆಕ್ಸ್‌, ಕರಪತ್ರ ಮುದ್ರಣವಾಗದೇ ನಿಯಮವನ್ನು ಉಲ್ಲಂಘಿಸಿದರೆ ಪ್ರಜಾಪ್ರತಿನಿಧಿ  ಕಾಯ್ದೆ ಅನ್ವಯ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಚುನಾವಣಾ ಬಹಿಷ್ಕಾರದಂತಹ ಪೋಸ್ಟರ್‌, ಕರಪತ್ರ ಮತ್ತು ಬ್ಯಾನರ್‌ ಮುದ್ರಿಸುವುದು ಕಾಯ್ದೆಯ ಉಲ್ಲಂಘನೆಯಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು: ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳ ಮೂಲಕ ಪ್ರಚೂರಪಡಿಸಬಹುದಾದ ಜಾಹೀರಾತು, ಪೇಡ್‌ ನ್ಯೂಸ್‌ಗಳ ಬಗ್ಗೆ ನಿಗಾ ಇಡಲಾಗಿದೆ. ನಿಗದಿತ ನಮೂನೆಯಲ್ಲಿ ಸಂಬಂಧಿಸಿದ ಅಭ್ಯರ್ಥಿಗಳು ಜಾಹೀರಾತು ಪ್ರಕಟಿಸುವ ಮುನ್ನ ಪೂರ್ವಾನುಮತಿ ಪಡೆಯಬೇಕು. ಅನುಮತಿ ಇಲ್ಲದೇ ಜಾಹೀರಾತು ಪ್ರಕಟಿಸಿದರೆ ಕಾನೂನು ರೀತಿ ಸೂಕ್ತ ಕ್ರಮಕೈಗೊಳ್ಳಲಾಗುತ್ತದೆ. ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಎಂಸಿಎಂಸಿ ಸಮಿತಿಗಳ ಮೂಲಕ ನಿಗಾ ಸಹ ಇಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮುದ್ರಕರು ಪಾಂಪ್ಲೇಟ್‌ ಮತ್ತು ಪೋಸ್ಟರ್‌ಗಳನ್ನು ಮುದ್ರಿಸುವ ಮೊದಲು ಪ್ರಕಾಶಕರ ಗುರುತಿನ ಬಗ್ಗೆ ದೃಢೀಕರಣವನ್ನು ಇಬ್ಬರು ಅನುಮೋದಕರೊಂದಿಗೆ ಪಡೆದಿರಲೇಬೇಕು. ಗುರುತಿನ ದೃಢೀಕರಣವಿಲ್ಲದೇ ಮುದ್ರಣ ಮಾಡಬಾರದು. ತಾವು ಮುದ್ರಿಸುವ ಎರಡು ಪ್ರತಿಯನ್ನು ನಿಗದಿತ ನಮೂನೆಯಲ್ಲಿ ಪ್ರಿಂಟಿಂಗ್‌ ಪ್ರಸ್‌ ಮಾಲೀಕರು ಜಿಲ್ಲಾ ಧಿಕಾರಿಗಳಿಗೆ ಹಾಗೂ ಆರ್‌ಒಗಳಿಗೆ ಸಲ್ಲಿಸಬೇಕು. ಯಾವುದೇ ಜಾತ್ರೆ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ಮುದ್ರಣವಾಗುವ ಕರಪತ್ರಗಳಲ್ಲಿ ಅಭ್ಯರ್ಥಿಗಳ ಭಾವಚಿತ್ರ ಹಾಕದಂತೆ ಚುನಾವಣೆ ನೀತಿ ಸಂಹಿತೆ ಕಡ್ಡಾಯವಾಗಿ ಪಾಲಿಸಬೇಕು.
ಸ್ನೇಹಲ್‌ ಆರ್‌., ಜಿಲ್ಲಾಧಿಕಾರಿ

Advertisement

ಜಾಹೀರಾತು ಮುದ್ರಣಕ್ಕೆ ಅನುಮತಿ ಕಡ್ಡಾಯ
ವಿವಿಧ ಮಾಧ್ಯಮಗಳ ಮೂಲಕ ಪ್ರಚಾರ ಕೈಗೊಳ್ಳುವ ಮುನ್ನ ಜಿಲ್ಲಾ ಧಿಕಾರಿಗಳು ಮತ್ತು ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿಯ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್‌ ಆರ್‌. ಅವರು ತಿಳಿಸಿದ್ದಾರೆ.

ಮುದ್ರಣ ಮಾಧ್ಯಮಕ್ಕೆ ಸಂಬಂಧಪಟ್ಟಂತೆ ಜಾಹೀರಾತು ನೀಡುವ ಮುಂಚೆ ಆಯಾ ಪಕ್ಷಗಳ ಪ್ರತಿನಿಧಿ ಗಳಾಗಿದ್ದರೆ ಸಂಬಂಧಪಟ್ಟ ಪಕ್ಷದ ಅಭ್ಯರ್ಥಿಯ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಪಕ್ಷದ ಅಭ್ಯರ್ಥಿಯ ಮಾಹಿತಿ ಇಲ್ಲದೇ ಜಾಹಿರಾತು ನೀಡಿದರೆ ಕಾನೂನು ರೀತಿಯ ಕ್ರಮ ಕೈಗೊಳ್ಳಲು ಅವಕಾಶವಿದೆ ಎಂದು ಅವರು ತಿಳಿಸಿದ್ದಾರೆ. ಒಟ್ಟಾರೆ ವಿವಿಧ ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಕಟವಾಗುವ ಜಾಹೀರಾತುಗಳ ವೆಚ್ಚವನ್ನು ಆಯಾ ಅಕೌಂಟಿಂಗ್‌ ತಂಡ ಎಕ್ಸಪೇಂಡಿಚರ್‌ ಅಬ್ಸರ್ವರ್‌ ತಂಡದ ಮೂಲಕ ಆಯಾ ಅಭ್ಯರ್ಥಿಗಳ ವೆಚ್ಚಕ್ಕೆ ಸೇರ್ಪಡೆಗೊಳಿಸಲಾಗುವುದು ಎಂದ ಅವರು, ಬರುವ ಚುನಾವಣೆಗಾಗಿ ಪ್ರತಿ ಅಭ್ಯರ್ಥಿಗೆ 40 ಲಕ್ಷ ರೂ. ವೆಚ್ಚವನ್ನು ಚುನಾವಣಾ ಆಯೋಗ ನಿಗದಿಪಡಿಸಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next