Advertisement
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಮಾತನಾಡಿ, ನ. 1ರಂದು ಬೆಳಗ್ಗೆ 7ರಿಂದ 8:00 ಗಂಟೆಯವೆಗೆ ಜಿಲ್ಲೆಯ ವಿವಿಧ ಕಚೇರಿ ಮತ್ತು ಶಾಲಾ-ಕಾಲೇಜುಗಳಲ್ಲಿ ಧ್ವಜಾರೋಹಣ ನೆರವೇರಿಸಬೇಕು. ಬೆಳಗ್ಗೆ 8ಕ್ಕೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಲಾಗುವುದು. ನಂತರ 9:00 ಗಂಟೆಗೆ ನಗರದ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಮಟ್ಟದ ಕಾರ್ಯಕ್ರಮ ಆಯೋಜಿಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ಮಾಡುವರು.
Related Articles
Advertisement
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 5 ವ್ಯಕ್ತಿಗಳನ್ನು ಸನ್ಮಾನಿಸಲು ಜಿಲ್ಲಾ ಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒ, ಸಹಾಯಕ ಆಯುಕ್ತರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರನ್ನೊಳಗೊಂಡ ಆಯ್ಕೆ ಸಮಿತಿಯನ್ನು ಸಭೆಯಲ್ಲಿ ರಚಿಸಲಾಯಿತು.
ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಸಂಜೆ 6:00 ಗಂಟೆಯಿಂದ ನಗರದ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು. ಇದಕ್ಕೆ ಬೇಕಾದ ಅಗತ್ಯ ಪೂರ್ವಸಿದ್ಧತೆಯನ್ನು ಮಾಡಿಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ತಿಳಿಸಿದರು. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತಹ ಮಕ್ಕಳಿಗೆ ಬಹುಮಾನ ನೀಡುವುದಾಗಿ ಭಾವೈಕ್ಯತಾ ಸಮಿತಿ ಸದಸ್ಯರಾದ ಬಾಬು ದೋಖಾ ತಿಳಿಸಿದರು.
ಸಮಾರಂಭದ ವೇದಿಕೆಗೆ ಆಸನ, ಜನರೇಟರ್ ವ್ಯವಸ್ಥೆ ಮಾಡಬೇಕು. ಎಲ್ಲಾ ಸರಕಾರಿ ಕಚೇರಿ, ಜಿಲ್ಲಾಡಳಿತ ಕಾರ್ಯಾಲಯ, ನಗರದ ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಹಾಗೂ ನಗರ ಸ್ವತ್ಛತೆ ಮಾಡುವಂತೆ ವಿವಿಧ ಇಲಾಖೆ ಅ ಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ನೀರಿನ ವ್ಯವಸ್ಥೆ, ಪೊಲೀಸ್ ಬಂದೋಬಸ್ತ್, ಅಗ್ನಿಶಾಮಕ ವಾಹನ ಹಾಗೂ ಕಾಲೇಜು ಮೈದಾನದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಬೇಕು.
ಅಂದು ಬೆಳಗ್ಗೆ 5:00 ಗಂಟೆಯಿಂದ ರಾತ್ರಿ 9:00 ಗಂಟೆಯವರೆಗೆ ವಿದ್ಯುತ್ ಲೋಡ್‌ಶೆಡ್ಡಿಂಗ್ ಮಾಡಬಾರದು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಸಭೆಯ ನಡವಳಿಗಳನ್ನು ಓದಿದರು.
ಅಪರ ಜಿಲ್ಲಾ ಧಿಕಾರಿ ಪ್ರಕಾಶ್ ಜಿ. ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಎಸ್. ಸೋಮನಾಳ, ನಗರಸಭೆ ಪೌರಾಯುಕ್ತ ರಮೇಶ ಸುಣಗಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಭಗವಂತ ಅನವಾರ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಹನುಮನಗೌಡ, ಅಬಕಾರಿ ಇಲಾಖೆಯ ಜಿಲ್ಲಾ ವಿಚಕ್ಷಣ ದಳದ ನಿರೀಕ್ಷಕ ಕೇದಾರನಾಥ್, ಉಪ ನಿರ್ದೇಶಕರಾದ ದತ್ತಪ್ಪ ಕಲ್ಲೂರ್, ಸಾಹಿತಿ ಅಯ್ಯಣ್ಣ ಹುಂಡೇಕಾರ, ಡಾ| ಸಿದ್ದಪ್ಪ ಹೊಟ್ಟಿ, ಆರ್. ಮಹಾದೇವಪ್ಪ ಅಬ್ಬೆತುಮಕೂರ, ಬಸವಂತರಾಯ ಮಾಲಿಪಾಟೀಲ, ಮೌಲಾಲಿ ಅನಪುರ, ನೂರೊಂದಪ್ಪ ಲೇವಡಿ ಸೇರಿದಂತೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.