Advertisement
ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೃಷಿ ಮತ್ತು ಸಂಬಂಧಿಸಿದ ಇಲಾಖೆಗಳು ಕಾರ್ಯಕ್ರಮ ಆಯೋಜಿಸಿದಾಗ ಜಿಪಂ ಸದಸ್ಯರಿಗೆ ಮಾಹಿತಿ ನೀಡುವ ಜತೆಗೆ ಆಹ್ವಾನಿಸಬೇಕು. ಬೇಸಿಗೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮವಹಿಸಬೇಕು ಎಂದು ಸೂಚಿಸಿದರು.
Related Articles
Advertisement
ನಿರ್ಮಿತಿ ಕೇಂದ್ರದಿಂದ ನಡೆಯುವ ಕಾಮಗಾರಿಗಳು ಹಲವೆಡೆ ಪೂರ್ಣಗೊಂಡಿಲ್ಲ. ಅಲ್ಲದೇ ಸುರಪುರ ತಾಲೂಕಿನಾದ್ಯಂತ ಅಂಗನವಾಡಿ ಕೇಂದ್ರಗಳು ಶಿಥಿಲಗೊಂಡಿವೆ. ಮರು ನಿರ್ಮಾಣದ ಕೆಲಸಗಳು ಆಗಿಲ್ಲ. ಇನ್ನು ಜಿಲ್ಲೆಯಲ್ಲಿರುವ ವಸತಿ ನಿಲಯಗಳಲ್ಲಿ ಬೆಡ್, ಕಾಟ್ ಹಾಗೂ ಕಾಂಪೌಂಡ್ ಸಮಸ್ಯೆಗಳಿವೆ. ಅಧಿಕಾರಿಗಳು ಕೂಡಲೇ ಭೇಟಿ ನೀಡಿ ಸಮಸ್ಯೆ ಪರಿಹರಿಸಬೇಕು. ಇನ್ನು ದೇವದಾಸಿ ಪುನರ್ವಸತಿ ಯೋಜನೆಯಲ್ಲಿ ಈಗಾಗಲೇ ಇರುವ ಫಲಾನುಭವಿಗಳಿಗಷ್ಟೇ ಯೋಜನೆ ಲಾಭ ಕೊಡಬೇಕು. ದೇವದಾಸಿ ಎಂಬ ಅನಿಷ್ಠ ಪದ್ಧತಿ ನಿರ್ಮೂಲನೆ ಮಾಡಲು ಅಧಿಕಾರಿಗಳು ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.
ಇನ್ನು ಕೆಲ ಹಳ್ಳಿಗಳಲ್ಲಿ ವಿದ್ಯುತ್ ತಂತಿಗಳು ಹಳೆಯದಾಗಿ ಜೋತು ಬಿದ್ದಿವೆ. ಕೆಲವು ಕಟ್ ಆಗಿ ಬೀಳುತ್ತಿವೆ. ಅವುಗಳನ್ನು ಸರಿಪಡಿಸಬೇಕು. ಜತೆಗೆ ಗಂಗಾಕಲ್ಯಾಣ ಯೋಜನೆಯಲ್ಲಿ ಕೊಳವೆಬಾವಿ ಹಾಕಿಸಿದ ಫಲಾನುಭವಿಗಳಿಗೆ ಮೂರ್ನಾಲ್ಕು ವರ್ಷಗಳಿಂದ ವಿದ್ಯುತ್ ಸಂಪರ್ಕ ನೀಡಿಲ್ಲ ಎಂದು ದೂರುಗಳು ಬರುತ್ತಿವೆ. ಶೀಘ್ರ ವಿದ್ಯುತ್ ಸಂಪರ್ಕ ನೀಡಬೇಕು ಎಂದು ಸೂಚಿಸಿದರು.
ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಲಿಂಗಪ್ಪ ಪುಟಗಿ ಮಾತನಾಡಿ, ಕೋಟಗೇರಾ ಮೊರಾರ್ಜಿ ದೇಸಾಯಿ ವಸತಿ ಶಾಲೆ ನಿರ್ಮಾಣ ಕಾರ್ಮಾಣ ಕಾಮಗಾರಿ ನನೆಗುದಿದೆ ಬಿದ್ದಿದೆ. ಅದನ್ನು ಏಕೆ ಪ್ರಾರಂಭಿಸುತ್ತಿಲ್ಲ ಎಂದು ಪ್ರಶ್ನಿಸಿದರು. ಇದಕ್ಕೆ ನಿರ್ಮಿತಿ ಕೇಂದ್ರದ ಅಧಿಕಾರಿ ಮಾತನಾಡಿ, ಪ್ರಕರಣ ಕೋರ್ಟ್‌ನಲ್ಲಿದೆ ಎಂದು ವಿವರಿಸಿದರು.
ಈಗಾಗಲೇ ಕಾಮಗಾರಿ ನಿರ್ವಹಣೆಗೆ 27 ಲಕ್ಷ ಖರ್ಚಾಗಿದೆ ಎಂದು ಮಾಹಿತಿ ನೀಡಿದರು. ಜಿಪಂ ಮುಖ್ಯ ಕಾರ್ಯನಿರ್ವಾಹ ಅಧಿಕಾರಿ ಶಿಲ್ಪಾ ಶರ್ಮಾ, ಜಿಪಂ ಉಪಾಧ್ಯಕ್ಷೆ ಗಿರಿಜಮ್ಮ ಎಸ್. ರೊಟ್ನಡಗಿ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಭೀಮರೆಡ್ಡಿ ಗೌಡ ಇದ್ದರು.
ಜಿಪಂ ಉಪ ಕಾರ್ಯದರ್ಶಿ ಮುಕ್ಕಣ ಕರಿಗಾರ, ಜಿಪಂ ಮುಖ್ಯ ಯೋಜನಾಧಿಕಾರಿ ಸುನೀಲ ಬಿಸ್ವಾಸ್, ಜಿಪಂ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.