Advertisement

ಯಾದಗಿರಿ: 17ರ ವರೆಗೆ ನಿಷೇಧಾಜ್ಞೆ

05:38 AM May 14, 2020 | Suhan S |

ಯಾದಗಿರಿ: ಜಿಲ್ಲೆಯಲ್ಲಿ ಇಬ್ಬರಿಗೆ ಕೋವಿಡ್‌ 19 ಪಾಸಿಟಿವ್‌ ಸೋಂಕು ದೃಢಪಟ್ಟಿರುವುದರಿಂದ ಮುಂದೆ ಸಂಭವಿಸಬಹುದಾದ ಅನಾಹುತಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮೇ 12ರ ಮಧ್ಯರಾತ್ರಿಯಿಂದ ಮೇ 17ರ ಮಧ್ಯರಾತ್ರಿ ವರೆಗೆ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿ ಎಂ.ಕೂರ್ಮಾರಾವ್‌ ಆದೇಶ ಹೊರಡಿಸಿದ್ದಾರೆ.

Advertisement

ಬಟ್ಟೆ, ಚಿನ್ನದ ಅಂಗಡಿ ಹೊರತುಪಡಿಸಿ ಜಿಲ್ಲೆಯಲ್ಲಿ ಎಲ್ಲ ಅಂಗಡಿಗಳನ್ನು ಬೆಳಗ್ಗೆ 7:00ರಿಂದ ಮಧ್ಯಾಹ್ನ 1:00ರವರೆಗೆ ಮಾತ್ರ ತೆರೆಯಲು ಅನುಮತಿ ನೀಡಿದ್ದಾರೆ. ಮದ್ಯ ಮಾರಾಟ ಸನ್ನದುಗಳಾದ ಸಿಎಲ್‌-02, ಸಿಎಲ್‌-04, ಸಿಎಲ್‌-07, ಸಿಎಲ್‌-09 ಹಾಗೂ ಸಿಎಲ್‌-11 ಸಿ ಅಂಗಡಿಗಳು ಜಿಲ್ಲಾದ್ಯಂತ ಬೆಳಗ್ಗೆ 7:00ರಿಂದ ಮಧ್ಯಾಹ್ನ 1:00ರ ವರೆಗೆ ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ವಯ ಮಾತ್ರ ಕಾರ್ಯನಿರ್ವಹಿಸತಕ್ಕದ್ದು ಎಂದು ಸೂಚಿಸಿದ್ದಾರೆ. ಕಂಟೇನ್ಮೆಂಟ್‌ ವಲಯಕ್ಕೆ ಸಂಬಂಧಿ ಸಿದಂತೆ ಪ್ರತ್ಯೇಕ ಕಟ್ಟುನಿಟ್ಟಿನ ನಿರ್ಬಂಧನೆಗಳು ಇರುವುದರಿಂದ ಈ ಆದೇಶ ಅನ್ವಯಿಸುವುದಿಲ್ಲ. ಈ ಆದೇಶ ಆಸ್ಪತ್ರೆ ಸೇವೆಗಳು, ಪಶು ಆಸ್ಪತ್ರೆಗಳು, ಔಷಧ ಅಂಗಡಿಗಳು ಇತ್ಯಾದಿ ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next