Advertisement

ನ್ಯಾಯ ಸಿಗದಿದ್ದರೆ ದಸಂಸ ಉಗ್ರ ಹೋರಾಟ ಎಚ್ಚರಿಕೆ

04:12 PM Jul 14, 2019 | Naveen |

ಯಾದಗಿರಿ: ಶಹಾಪುರ ತಾಲೂಕಿನ ಮರಕಲ್ ಗ್ರಾಮದಲ್ಲಿ ಹಲ್ಲೆಗೊಳಗಾದ ದಲಿತರು ಹಾಗೂ ಅವರ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡುವುದು ಮತ್ತು ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ನಿಯೋಗ ಜಿಲ್ಲಾಧಿಕಾರಿಗೆ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿತು.

Advertisement

ದಸಂಸ ಜಿಲ್ಲಾ ಸಂಚಾಲಕ ಮರೆಪ್ಪ ಚಟ್ಟರಕರ್‌ ನೇತೃತ್ವದಲ್ಲಿ ತೆರಳಿದ ನಿಯೋಗ ಉಭಯ ಅಧಿಕಾರಿಗಳಿಗೆ ಪ್ರತ್ಯೇಕ ಮನವಿ ಸಲ್ಲಿಸಿ, ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮರಕಲ್ ಗ್ರಾಮದಲ್ಲಿ ಜುಲೈ 8ರಂದು ಪರಿಶಿಷ್ಟ ಪಂಗಡದ ಜನರು, ಪರಿಶಿಷ್ಟ ಜಾತಿ ಜನರಾದ ನಾಲ್ವರ ಮೇಲೆ ಬಡಿಗೆ, ಕಬ್ಬಿಣ ರಾಡ್‌ಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು.

ಆರೋಪಿಗಳ ವಿರುದ್ಧ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಆರೋಪಿಗಳನ್ನು ಬಂಧಿಸಬೇಕು. ಗ್ರಾಮದ ದಲಿತರಿಗೆ ಸೂಕ್ತ ರಕ್ಷಣೆ ನೀಡಬೇಕು. ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಸೂಕ್ತ ರಕ್ಷಣಾ ವ್ಯವಸ್ಥೆ ಕಲ್ಪಿಸಬೇಕೆಂದು ಮನವಿ ಮಾಡಿದರು.

ಡಾ| ಅಂಬೇಡ್ಕರ್‌ ಕಟ್ಟೆ ನಿರ್ಮಾಣದ ಹಿನ್ನೆಲೆ ದ್ವೇಷದಿಂದ ಹಲ್ಲೆ ನಡೆಸಲಾಗಿದ್ದು, ಈ ಕುರಿತು ಪೊಲೀಸರು ಸೂಕ್ತ ಪರಿಶೀಲನೆ ನಡೆಸುವ ಮೂಲಕ ಆರೋಪಿತರಿಗೆ ಶಿಕ್ಷೆ ಕೊಡಿಸುವ ಮೂಲಕ ನ್ಯಾಯ ಒದಗಿಸಬೇಕು. ಅಲ್ಲದೇ ಆರೋಪಿತರು ಮಾರಣಾಂತಿಕ ಹಲ್ಲೆ ನಡೆಸಿದ್ದರೂ ಇಲ್ಲಿನ ಪೊಲೀಸರು 307 ಕಲಂನಡಿ ಪ್ರಕರಣ ದಾಖಲು ಮಾಡಿಕೊಳ್ಳಲು ಹಿಂದೇಟು ಹಾಕಿದ್ದಾರೆ. ಇಷ್ಟೆಲ್ಲ ದೌರ್ಜನ್ಯ ನಡೆದಿದ್ದು, ಪೊಲೀಸರು ಕಠಿಣ ಕ್ರಮ ಕೈಗೊಳ್ಳುವಲ್ಲಿ ಮುಂದಾಗಿಲ್ಲ ಎಂದು ಆರೋಪಿಸಿದರು.

ಕಾರಣ ಮೇಲಧಿಕಾರಿಗಲಾದ ತಾವುಗಳು ಸಮರ್ಪಕ ಪರಿಶೀಲನೆ ನಡೆಸುವ ಮೂಲಕ ನ್ಯಾಯ ಒದಗಿಸಿಕೊಡಬೇಕೆಂದು ಮನವಿ ಮಾಡಿದರು.

Advertisement

ನ್ಯಾಯ ಸಿಗದೆ ಹೋದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಅನಿವಾರ್ಯವೆಂದು ದಸಂಸ ಎಚ್ಚರಿಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಸಂಚಾಲಕರಾದ ಗೋಪಾಲ ತಳಗೇರಿ, ಶರಣರೆಡ್ಡಿ ಹತ್ತಿಗುಡೂರು, ದಲಿತ ಮುಖಂಡರಾದ ಬಸವರಾಜ ಮರಕಲ್, ದೇವೇಂದ್ರಪ್ಪ ಗೌಡೂರು, ಅಮಿತ ಹತ್ತಿಗುಡೂರು, ಹೊನ್ನರಾಜ ಹತ್ತಿಗುಡೂರು, ಶರಣು ಮರಕಲ್, ಹಣಮಂತ ಹತ್ತಿಗುಡೂರು ಸೇರಿದಂತೆ ಇನ್ನಿತರ ಕಾರ್ಯಕರ್ತರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next