Advertisement
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಂತ ಕವಿ ಸರ್ವಜ್ಞ ಜಯಂತ್ಯುತ್ಸವ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಯಂತ್ಯುತ್ಸವ ಅಂಗವಾಗಿ ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಅಂದು ಬೆಳಗ್ಗೆ ಸಂತ ಕವಿ ಸರ್ವಜ್ಞರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಅದರಂತೆ ಜಿಲ್ಲೆಯ ಎಲ್ಲಾ ಗ್ರಾ.ಪಂ, ಸರ್ಕಾರಿ ಕಚೇರಿ ಹಾಗೂ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲಾ-ಕಾಲೇಜುಗಳಲ್ಲಿಯೂ ಸಹ ಶ್ರದ್ಧಾ, ಭಕ್ತಿಯೊಂದಿಗೆ ಕವಿ ಸರ್ವಜ್ಞ ಜಯಂತಿ ಕಡ್ಡಾಯವಾಗಿ ಆಚರಿಸಬೇಕು. ಈ ಸಂದರ್ಭದಲ್ಲಿ ಮಕ್ಕಳಿಗೆ ಕವಿ ಸರ್ವಜ್ಞರ ಬಗ್ಗೆ ತಿಳಿವಳಿಕೆ ಮೂಡಿಸಬೇಕು. ತಾಲೂಕು ಮಟ್ಟದಲ್ಲಿ ಕೂಡ ಸದರಿ ಜಯಂತಿಯನ್ನು ಅರ್ಥಪೂರ್ಣ ಆಚರಣೆಗೆ ತಹಶೀಲ್ದಾರರು ಕೈಗೊಳ್ಳುವಂತೆ ಕಟ್ಟುನಿಟ್ಟಾಗಿ ಸೂಚಿಸಿದರು.
ಮತ್ತು ಜಿಲ್ಲಾ ಅಂಕಿತ ಅಧಿಕಾರಿಗಳಿಗೆ ವಹಿಸಲಾಯಿತು. ಜಯಂತಿಯಲ್ಲಿ ಶಾಂತಿ, ಸುವ್ಯವಸ್ಥೆ
ಕಾಪಾಡಲು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಜಿಲ್ಲಾ ಪೊಲೀಸ್ ಇಲಾಖೆಗೆ ತಿಳಿಸಲಾಯಿತು. ಕಾರ್ಯಕ್ರಮದ ನೋಡಲ್ ಅಧಿಕಾರಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ದತ್ತಪ್ಪ ಸಾಗನೂರ ಅವರನ್ನು ನೇಮಕ ಮಾಡಲಾಯಿತು. ಜಿಲ್ಲಾ ಬಾಲ ಕಾರ್ಮಿಕ ಇಲಾಖೆ ಯೋಜನಾ ನಿರ್ದೇಶಕರಾದ ರಘುವೀರಸಿಂಗ್ ಠಾಕೂರ ಸಭೆ ನಡಾವಳಿ ಓದಿದರು. ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ದತ್ತಪ್ಪ ಕಲ್ಲೂರ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಿ.ರೇವಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಗೌರಮ್ಮ ದೊಂತಾ ಉಪಸ್ಥಿತರಿದ್ದರು.
ಕುಂಬಾರ ಸಮಾಜದ ಜಿಲ್ಲಾಧ್ಯಕ್ಷ ದೇವಿಂದ್ರಪ್ಪ ದರ್ಶನಾಪುರ, ಪ್ರಧಾನ ಕಾರ್ಯದರ್ಶಿ ದೇವಿಂದ್ರಪ್ಪ ಕುಂಬಾರ ಯರಗೋಳ, ಹಣಮಂತಪ್ಪ ಮಿನಾಸಪುರ, ರಾಜೇಂದ್ರ ಮುದ್ನಾಳ, ನರಸಪ್ಪ ಮಾಧ್ವಾರ, ಗುರುಬಸವ ಹಾಲಗೇರಾ, ಭೀಮರಾಯ ಮುಂಡರಗಿ, ಶಿವರಾಜ ಹಾಲಗೇರಾ, ಬಸವರಾಜ ಅಜಲಾಪುರ ಹಾಗೂ ವಿವಿಧ ಇಲಾಖೆಗಳ ಅ ಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.