Advertisement
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ-2020ರ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರೀಕ್ಷೆಗಳು ಮಕ್ಕಳ ಭವಿಷ್ಯ ನಿರ್ಧರಿಸುತ್ತವೆ. ಕೆಲವರ ತಪ್ಪಿನಿಂದ ಮುಗ್ಧ ವಿದ್ಯಾರ್ಥಿಗಳು ತೊಂದರೆ ಅನುಭವಿಸಬೇಕಾಗುತ್ತದೆ. ಆದ್ದರಿಂದ ಮೊಬೈಲ್ ಫೋನ್‌ಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಮಾಹಿತಿ, ದಾಖಲೆ ಚಿತ್ರೀಕರಿಸುವುದು, ಚಿತ್ರೀಕರಿಸಲು ಪ್ರಯತ್ನಿಸುವುದು ಮತ್ತು ಸಮೂಹ ಮಾಧ್ಯಮ ಅಥವಾ ಜಾಲತಾಣಗಳಲ್ಲಿ ಹರಿದಾಡುವಂತೆ ಮಾಡುವುದು ಅಪರಾಧವಾಗಿದೆ. ಒಂದು ವೇಳೆ ಕಂಡುಬಂದಲ್ಲಿ ಇಲಾಖಾ ಕ್ರಮದಂತೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
Related Articles
Advertisement
ಕೊಠಡಿಯಿಂದ ಹೊರಗೆ, ಕಾರಿಡಾರ್ ಅಥವಾ ನೆಲದ ಮೇಲೆ ಕುಳಿತು ಪರೀಕ್ಷೆ ಬರೆಸುವಂತಿಲ್ಲ. ಪರೀಕ್ಷಾಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗುವುದು. ಪರೀಕ್ಷಾಕೇಂದ್ರದ ಸಂಪೂರ್ಣ ಜವಾಬ್ದಾರಿ ಮುಖ್ಯ ಅಧೀಕ್ಷಕರಾಗಿ ನೇಮಕಗೊಂಡ ಅಧಿಕಾರಿಯದ್ದಾಗಿರುತ್ತದೆ. ಪರೀಕ್ಷಾ ಕಾರ್ಯಗಳಿಗಾಗಿ ನೇಮಕಗೊಂಡ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾತ್ರ ಕೇಂದ್ರದಲ್ಲಿರಬೇಕು. ಅನ್ಯ ವ್ಯಕ್ತಿಗಳು ಕೇಂದ್ರದೊಳಗೆ ಕಂಡುಬಂದಲ್ಲಿ ಮುಖ್ಯ ಅಧೀಕ್ಷಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಹೇಳಿದರು. ಪರೀಕ್ಷಾ ಕೇಂದ್ರಗಳಲ್ಲಿ ವಾಟರ್ ಬಾಯ್‌ಗಳ ನೇಮಕ ರದ್ದುಪಡಿಸಲಾಗಿದೆ. ಕುಡಿಯುವ ನೀರಿನ ವ್ಯವಸ್ಥೆಯನ್ನು 2, 3
ಕೊಠಡಿಗಳ ಅಂತರದಲ್ಲಿ ಕೊಠಡಿ ಹೊರಗೆ ವ್ಯವಸ್ಥೆ ಮಾಡಬೇಕು. ಆಯಾ ದಿನದ ವಿಷಯ ಪರೀಕ್ಷೆಗಳು ಮುಗಿದ ತಕ್ಷಣವೇ ಉತ್ತರ ಪತ್ರಿಕೆಗಳನ್ನು ಕ್ರೂಢೀಕರಿಸಿ ಬಂಡಲ್ ಗಳನ್ನು ಸೀಲು ಮಾಡಿ ರವಾನಿಸಬೇಕು ಎಂದು ಸೂಚಿಸಿದರು. ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಎಸ್.
ಸೋಮನಾಳ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸಂತ ಚವ್ಹಾಣ, ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಸಭೆಯಲ್ಲಿದ್ದರು.