Advertisement
ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಗುರುವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ಶ್ರೀ ಆದಿ ಶಂಕರಾಚಾರ್ಯರ ಜಯಂತ್ಯುತ್ಸವ ಸಮಿತಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಶ್ರೀ ಆದಿ ಶಂಕರಾಚಾರ್ಯರ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ಶಂಕರಾಚಾರ್ಯರು ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ನಾಲ್ಕು ಬಾರಿ ಕಾಲ್ನಡಿಗೆಯಲ್ಲೆ ಸಂಚರಿಸಿದರು. ದೇಶದ ನಾಲ್ಕು ದಿಕ್ಕುಗಳಲ್ಲಿ ಕರ್ನಾಟಕದ ಶೃಂಗೇರಿಯಲ್ಲಿ ಶಾರದಾ ಪೀಠ, ಗುಜರಾತನಲ್ಲಿ ದ್ವಾರಕಾ ಪೀಠ, ಓರಿಸ್ಸಾದಲ್ಲಿ ಗೋವರ್ಧನ ಪೀಠ, ಉತ್ತರ ಖಂಡದಲ್ಲಿ ಜೋತಿರ್ಮಠ ಪೀಠವನ್ನು ಸ್ಥಾಪಿಸಿದರು. ವೇದ, ಉಪನಿಷತ್ತುಗಳ ಮೇಲೆ ಭಾಷ್ಯ ಬರೆದರು. ಇವರು ಪ್ರತಿಪಾದಿಸಿದ ಅದ್ವೈತ ತತ್ವವು ಎರಡಲ್ಲ ಒಂದು; ಅಂದರೆ ಆತ್ಮ ಮತ್ತು ಪರಮಾತ್ಮ ಒಂದೇ. ದೇವರನ್ನು ಕಾಣಲು ಜ್ಞಾನ ಮಾರ್ಗ ಸೂಕ್ತವಾಗಿದೆ ಎಂದು ಸಾರಿದರು. ಶಂಕರಾಚಾರ್ಯರ ಸಿದ್ಧಾಂತಕ್ಕೆ ಮಾಯಾವಾದ ಸಿದ್ಧಾಂತ ಎಂದು ಕೂಡ ಕರೆಯುತ್ತಾರೆ. ಅಂದರೆ ಜಗತ್ತು ಮಿತ್ಯ ಶಾಶ್ವತವಲ್ಲ. ಇದು ನೀರಿನ ಮೇಲಿನ ಗುಳ್ಳೆ ಇದ್ದಂತೆ. ಶಾಶ್ವತವಾದದ್ದು ದೇವರು, ಪರಮಾತ್ಮ ಎಂದು ಹೇಳಿದ್ದಾರೆ ಎಂದು ವಿವರಿಸಿದರು.
ಯಾದಗಿರಿ ನಗರಸಭೆಯ ಪೌರಾಯುಕ್ತ ರಮೇಶ ಸುಣಗಾರ, ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ಡಾ| ವಿ. ಮುನಿರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಜಯಂತ್ಯುತ್ಸವ ಸಮಿತಿಯ ಜಿಲ್ಲಾ ಸಂಚಾಲಕರಾದ ರತ್ನಾಕರ ಭಟ್ ಸುರಪುರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಂಗೀತ ಶಿಕ್ಷಕರಾದ ಚಂದ್ರಶೇಖರ ಗೋಗಿ ಹಾಗೂ ತಂಡದವರು ನಾಡಗೀತೆ ಹಾಡಿದರು. ಶುಭಂ ಪದವಿ ಮಹಾವಿದ್ಯಾಲಯದ ಉಪನ್ಯಾಸಕ ಗುರು ಪ್ರಸಾದ ವೈದ್ಯ ಕಾರ್ಯಕ್ರಮ ನಿರೂಪಿಸಿದರು.