21ರಂದು ಬೆಳಗ್ಗೆ 11:00ಕ್ಕೆ ಜಿಲ್ಲಾಡಳಿತ ಭವನದಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ. ರಜಪೂತ ಹೇಳಿದರು.
Advertisement
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಾಯಕ ಶರಣರ ಜಯಂತ್ಯೋತ್ಸವ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಯಂತ್ಯೋತ್ಸವದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಂದು ಬೆಳಗ್ಗೆ ಕಾಯಕ ಶರಣರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಅದರಂತೆ ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿ ಹಾಗೂ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ-ಕಾಲೇಜುಗಳಲ್ಲಿಯೂ ಶ್ರದ್ಧಾ, ಭಕ್ತಿಯೊಂದಿಗೆ ಕಾಯಕ ಶರಣರ ಜಯಂತಿ ಕಡ್ಡಾಯವಾಗಿ ಆಚರಿಸಬೇಕು. ತಾಲೂಕು ಮಟ್ಟದಲ್ಲಿ ಜಯಂತಿ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಸೂಚಿಸಿದರು.
Related Articles
ಸಭೆ ನಡಾವಳಿ ಓದಿದರು. ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ದತ್ತಪ್ಪ ಕಲ್ಲೂರ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಿ. ರೇವಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಗೌರಮ್ಮ ದೊಂತಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
Advertisement