Advertisement
ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಬುಧವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಛತ್ರಪತಿ ಶಿವಾಜಿ ಮಹಾರಾಜ ಜಯಂತ್ಯುತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
Related Articles
Advertisement
ಜೀಜಾಬಾಯಿ ಶಿವಾಜಿ ಮಹಾರಾಜರಿಗೆ ಚಿಕ್ಕಂದಿನಲ್ಲೆ ರಾಮಾಯಣ, ಮಹಾಭಾರತದ ಕಥೆಗಳು, ದೇಶಕಟ್ಟುವಲ್ಲಿ ಹೋರಾಡಿದ ಮಹಾಪುರುಷರ ಜೀವನ ಸಾಧನೆಗಳನ್ನು ಹೇಳಿ ಶಿವಾಜಿಯಲ್ಲಿ ಧೈರ್ಯ ತುಂಬುತ್ತಿದ್ದರು.
ಮರಾಠ ಸಮುದಾಯವನ್ನು ಸಂಘಟಿಸಿದ ಶಿವಾಜಿ ಮಹಾರಾಜರು ಸ್ತ್ರೀಯರಿಗೆ ಪ್ರಾಮುಖ್ಯತೆ ನೀಡಿದರು. ಸಾಮಾಜಿಕ, ರಾಜಕೀಯ, ಧಾರ್ಮಿಕ ಹಾಗೂ ಶೈಕ್ಷಣಿಕವಾಗಿ ರಕ್ಷಣೆ ಪಡೆಯಲು ಎಲ್ಲರೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಅಗತ್ಯವಿದೆ. ಜೀಜಾಬಾಯಿಯವರಂತೆ ತಮ್ಮ ಮಕ್ಕಳಿಗೆ ಉತ್ತಮ ಜೀವನ ಮೌಲ್ಯಗಳನ್ನು ಹೇಳಿಕೊಡಬೇಕು ಎಂದು ಸಲಹೆ ನೀಡಿದರು.
ಛತ್ರಪತಿ ಎಂದರೆ ರಾಜರ ರಾಜ, ಅರಸರ ಅರಸ ಎಂದು ಅರ್ಥವಾಗುತ್ತದೆ. ಛತ್ರಪತಿ ಶಿವಾಜಿ ಮಹಾರಾಜರು ಶಕ್ತಿಯಿಂದ ಮಾಡಲು ಆಗದ ಕೆಲಸವನ್ನು ಯುಕ್ತಿಯಿಂದ ಮಾಡುತ್ತಿದ್ದರು. ಕಲ್ಯಾಣ ಕರ್ನಾಟಕಕ್ಕೆ ಕೂಡ ಛತ್ರಪತಿ ಶಿವಾಜಿ ಮಹಾರಾಜರ ಕೊಡುಗೆ ಅಪಾರವಾಗಿದೆ. ಮುಂದಾಲೋಚನೆ, ತೀಕ್ಷ ಮತಿಯುಳ್ಳವರಾಗಿದ್ದ ಶಿವಾಜಿ ಮಹಾರಾಜರು ಆಡಳಿತದ ಸುಧಾರಣೆಗೆ ಅಷ್ಟ ಪ್ರಧಾನರೆಂಬ ಮಂತ್ರಿಮಂಡಲ ರಚಿಸಿ ಆಡಳಿತಾತ್ಮಕವಾಗಿ ಅಪಾರ ಕೊಡುಗೆ ನೀಡಿದರು.
ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ| ಸುಭಾಶ್ಚಂದ್ರ ಕೌಲಗಿ, ಸಮಾಜದ ಜಿಲ್ಲಾ ಅಧ್ಯಕ್ಷ ವಿಜಯಕುಮಾರ ಚವ್ಹಾಣ, ನಗರಸಭೆ ಮಾಜಿ ಸದಸ್ಯ ನಾರಾಯಣರಾವ್ ಚವ್ಹಾಣ ಸೇರಿದಂತೆ ಸಮಾಜದ ಮುಖಂಡರು, ಮಹಿಳೆಯರು, ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸಂಗೀತ ಶಿಕ್ಷಕರಾದ ಚಂದ್ರಶೇಖರ ಗೋಗಿ ಹಾಗೂ ತಂಡದವರು ನಾಡಗೀತೆ ಹಾಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಸ್ವಾಗತಿಸಿದರು. ಉಪನ್ಯಾಸಕ ಗುರುಪ್ರಸಾದ ವೈದ್ಯ ನಿರೂಪಿಸಿದರು.