Advertisement
ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶಾದ್ಯಂತ ಸ್ಪರ್ಶ ಕುಷ್ಠ ರೋಗ ಅರಿವು ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲಾ, ತಾಲೂಕು ಹಾಗೂ ಗ್ರಾಪಂ ಮಟ್ಟದಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಜ.30ರಂದು ಜಿಲ್ಲಾಧಿಕಾರಿಗಳು ಕಾರ್ಯಕ್ರಮ ಉದ್ಘಾಟಿಸಿ ಸಂದೇಶ ನೀಡುವರು ಎಂದು ತಿಳಿಸಿದರು.
ರೋಗಿಗಳಿಗೆ ಚಿಕಿತ್ಸೆ ಕೊಡಲಾಗುವುದು ಎಂದು ತಿಳಿಸಿದರು. ಕುಷ್ಠರೋಗ ಮೈಕ್ರೋಬ್ಯಾಕ್ಟೀರಿಯಂ ಲೆಪ್ರಯಿಂದ ಉಂಟಾಗುವ ರೋಗ. ಇದು ಅನುವಂಶಿಕ ರೋಗವಲ್ಲ. ಕುಷ್ಠ ರೋಗ ಶಾಪಗ್ರಸ್ತವೂ ಅಲ್ಲ. ಪಾಪದ ಫಲವೂ ಅಲ್ಲ. ಚರ್ಮದ ಮೇಲೆ ತಿಳಿ-ಬಿಳಿ ತಾಮ್ರವರ್ಣದ ಮಚ್ಚೆಗಳಿಗೆ ಸ್ಪರ್ಶ ಜ್ಞಾನವಿರುವುದಿಲ್ಲ. ಈ ರೋಗದ ಲಕ್ಷಣಗಳು ಕಂಡು ಬಂದಾಗ ಗ್ರಾಮದಲ್ಲಿನ ಆಶಾ ಕಾರ್ಯಕರ್ತೆಯರು, ಎಎನ್‌ಎಂ ಹಾಗೂ ಆರೋಗ್ಯ ಕಾರ್ಯಕರ್ತೆಯರಿಗೆ ತಿಳಿಸಿ ಮಾರ್ಗದರ್ಶನ ಪಡೆಯಬಹುದು ಎಂದರು.
Related Articles
Advertisement
ಜಿಲ್ಲೆಯಲ್ಲಿ ಏಪ್ರಿಲ್-2019ರಿಂದ ಇಲ್ಲಿಯವರೆಗೆ 66 ರೋಗಿಗಳನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಲಾಗಿದೆ. 2019-20ನೇ ಸಾಲಿನಲ್ಲಿ ಇಬ್ಬರಿಗೆ ಆರ್‌ಸಿಎಸ್(ಶಸ್ತ್ರಚಿಕಿತ್ಸೆ) ಮಾಡಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಒಬ್ಬರಿಗೆ ಆರ್ ಸಿಎಸ್(ಶಸ್ತ್ರಚಿಕಿತ್ಸೆ) ಮಾಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಪ್ರಭಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಭಗವಂತ ಅನವಾರ ಮಾತನಾಡಿ, ಕುಷ್ಠರೋಗದ ನಿರ್ಮೂಲನೆಗೆ ಎರಡು ವಿಧದ ಚಿಕಿತ್ಸೆಗಳಿವೆ. ಒಂದು ಮತ್ತು ಎರಡು ವರ್ಷ ಅವಧಿ ಚಿಕಿತ್ಸೆ ಇರುತ್ತದೆ. 2018-19ನೇ ಸಾಲಿನಲ್ಲಿ 52 ಜನ ಕುಷ್ಠರೋಗ ಹೊಂದಿದವರನ್ನು ಗುರುತಿಸಿ ಅದರಲ್ಲಿ 40ಜನರಿಗೆ ಯಶಸ್ವಿ ಚಿಕಿತ್ಸೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಆಂದೋಲನದಲ್ಲಿ ಕುಷ್ಠರೋಗ ಹೊಂದಿದವರನ್ನು ಸನ್ಮಾನಿಸಲಾಗುವುದು.ಅಲ್ಲದೆ ಜನಪ್ರಿಯ ವ್ಯಕ್ತಿಯಿಂದ ಕಾರ್ಯಕ್ರಮದ ಕುರಿತು ಪ್ರಚಾರ ಮಾಡಲಾಗುವುದು ಎಂದು ತಿಳಿಸಿದರು. ಪಾದಗಳ ದೌರ್ಬಲ್ಯ, ಬೆರಳುಗಳ ದೌರ್ಬಲ್ಯ, ಕಣ್ಣು ಮುಚ್ಚುವಲ್ಲಿ ತೊಂದರೆ, ದೇಹದ ಮೇಲೆ ಸ್ಪರ್ಶಜ್ಞಾನವಿಲ್ಲದ ಮಚ್ಚೆಗಳು, ತ್ವಚೆ ಮೇಲೆ ಕೆಂಪಾದ ಬಾವು, ನೋವಿನಿಂದ ಕೂಡಿದ ಹಗ್ಗದ ಹಾಗೆ ಊದಿಕೊಂಡ ನರಗಳು ಇವುಗಳಲ್ಲಿ ಯಾವುದೇ ಚಿಹ್ನೆಗಳು ಕಂಡುಬಂದಲ್ಲಿ ತಕ್ಷಣವೇ ಸಮೀಪದ ಸರಕಾರಿ ಆಸ್ಪತ್ರೆಯಲ್ಲಿ ಪರೀಕ್ಷಿಸಿಕೊಳ್ಳಬೇಕು. ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷೆ ಮತ್ತು ಚಿಕಿತ್ಸೆ ಉಚಿತವಾಗಿ ಲಭ್ಯವಿದೆ ಎಂದು ಮಾಹಿತಿ ನೀಡಿದರು. ಕುಷ್ಠರೋಗ ಜಾಗೃತಿ ಅಭಿಯಾನದ ಮತ್ತು ಪ್ರತಿಜ್ಞಾವಿಧಿ ಒಳಗೊಂಡ ಭಿತ್ತಿಪತ್ರ ಬಿಡುಗಡೆ ಮಾಡಲಾಯಿತು. ಜಿಲ್ಲಾ ಕಿರಿಯ ಆರೋಗ್ಯ ಸಹಾಯಕ ಶರಣಯ್ಯ ಸ್ವಾಮಿ, ಶರಣಬಸವ ಹೊಸಮನಿ ಪತ್ರಿಕಾಗೋಷ್ಠಿಯಲ್ಲಿದ್ದರು.