Advertisement
ಕಲಬುರಗಿ ಜಿಲ್ಲೆಯಲ್ಲಿ ಕೋವಿಡ್-19ಗೆ ಒಬ್ಬರು ಮೃತಪಟ್ಟು ಹಾಗೂ ನಾಲ್ವರಲ್ಲಿ ಸೋಂಕು ಕಂಡುಬಂದಿರುವ ಹಿನ್ನೆಲೆಯಲ್ಲಿ ಹಾಗೂ ಜಿಲ್ಲೆಯ ನೆರೆ ರಾಜ್ಯಗಳ ಜಿಲ್ಲೆಗಳಲ್ಲಿ ಕೋವಿಡ್-19 ಕೊರೊನಾ ವೈರಾಣು ಸೋಂಕು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವುದರಿಂದ ಏ.14ರ ಮಧ್ಯರಾತ್ರಿಯವರೆಗೆ ಜಿಲ್ಲೆಯ ಸಾರ್ವಜನಿಕರು ಅನುಸರಿಸಬೇಕಾದ ಅನುಸರಣ ಕ್ರಮಗಳನ್ನು ವಿಧಿಸಲಾಗಿದೆ.
ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಖರೀದಿಗೆ ಪ್ರತಿ ಮನೆಯಿಂದ ಓರ್ವ ಆರೋಗ್ಯವಂತ ವ್ಯಕ್ತಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಗುಂಪುಗೂಡದೇ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸಮಯ ನಿಗದಿಪಡಿಸಲಾಗಿದ್ದರೂ ನಿಷೇಧಾಜ್ಞೆ ಸಮಯದಲ್ಲಿ ಸಾರ್ವಜನಿಕರು ವಿನಾಕಾರಣ ತಿರುಗಾಡುವುದು, ಗುಂಪುಗೂಡುವಂತಿಲ್ಲ. ಅಂಗಡಿ ಮುಂದೆ ಜನಸಂದಣಿ ಸೇರದಂತೆ ವ್ಯಕ್ತಿಯಿಂದ ವ್ಯಕ್ತಿಗೆ 1 ಮೀ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಗುರುತು ಮಾಡುವ ಬಗ್ಗೆ ಕ್ರಮ ವಹಿಸುವುದು. ಇಲ್ಲದಿದ್ದಲ್ಲಿ ಅಂತಹ
ಅಂಗಡಿ ಮಾಲೀಕರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಈ ಆದೇಶವು ಆಸ್ಪತ್ರೆ ಸೇವೆಗಳು, ಪಶು ಆಸ್ಪತ್ರೆಗಳು, ಔಷಧ ಅಂಗಡಿಗಳು, ಸಿಲಿಂಡರ್ ವಿತರಣಾ ವ್ಯವಸ್ಥೆ, ದಿನ ಪತ್ರಿಕೆಗಳ ವಿತರಣೆ, ಬ್ಯಾಂಕ್/ಎ.ಟಿ.ಎಂ. ಗಳು, ಗೃಹ ಬಳಕೆಯ ಇಂಧನದ ಟ್ಯಾಂಕರ್ ಗಳು, ಪಡಿತರ ವಿತರಣೆ ಹಾಗೂ ಶವ ಸಂಸ್ಕಾರ ಇತ್ಯಾದಿ ಸೇವೆಗಳು ಹಾಗೂ ತುರ್ತು ಸೇವೆಗಳಿಗೆ ಅನ್ವಯವಾಗಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
Related Articles
Advertisement