Advertisement

ತಂಬಾಕು ಉತ್ಪನ್ನ ಸೇವಿಸಿದರೆ ಕಾನೂನು ಕ್ರಮ

05:37 PM Jun 27, 2020 | Naveen |

ಯಾದಗಿರಿ: ತಂಬಾಕು ಹಾಗೂ ಪಾನ್‌ಮಸಾಲ, ಜರ್ದಾ, ಖೈನಿ ಉತ್ಪನ್ನಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ತಿನ್ನುವುದು ಮತ್ತು ಉಗುಳುವುದು ಮಾಡಿದಲ್ಲಿ ಅಂಥವರ ವಿರುದ್ಧ ಸಾಂಕ್ರಾಮಿಕ ರೋಗಗಳ ಕಾಯ್ದೆ-1897, ವಿಪತ್ತು ನಿರ್ವಹಣಾ ಕಾಯ್ದೆ-2005, ಐಪಿಸಿ-1960 ಮತ್ತು ಸಿಆರ್‌ಪಿಸಿ (188,268,269 ಮತ್ತು 270)ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

Advertisement

ಕೋವಿಡ್‌-19 ವಿಶ್ವದೆಲ್ಲೆಡೆ ವ್ಯಾಪಕ ಹರಡುತ್ತಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಪಾನ್‌ ಮಸಾಲ, ಜರ್ದಾ, ಖೈನಿ, ಇತ್ಯಾದಿ ಜಗಿದು ಉಗುಳುವುದರಿಂದ ಸಾಂಕ್ರಾಮಿಕ ರೋಗಗಳಾದ ಕ್ಷಯರೋಗ, ನ್ಯುಮೋನಿಯಾ ಮತ್ತು ಕೋವಿಡ್‌-19 ವೈರಸ್‌ ಒಬ್ಬರಿಂದ ಮತ್ತೂಬ್ಬರಿಗೆ ಹರಡಲು ಕಾರಣವಾಗಬಹುದು. ಬೀಡಿ, ಸಿಗರೇಟ್‌ ಸೇದುವುದರಿಂದ ವೈರಸ್‌ ಕೈಯಿಂದ ಬಾಯಿ ಮೂಲಕ ಮಾನವನ ದೇಹ ಪ್ರವೇಶಿಸುವ ಸಾಧ್ಯತೆ ಇದೆ. ಆದ್ದರಿಂದ ಈ ಬಗ್ಗೆ ಸಾರ್ವಜನಿಕರು ಹಾಗೂ ಅಂಗಡಿ ಮಾಲೀಕರು ಎಚ್ಚರಿಕೆ ವಹಿಸಬೇಕು ಎಂದು ಅವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next