ಯಾದಗಿರಿ: ಜಿಲ್ಲಾಡಳಿತ ವತಿಯಿಂದ ಮಹಾಯೋಗಿ ವೇಮನ ಜಯಂತ್ಯುತ್ಸವ ಜ. 19ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಹಾಯಕ ಆಯುಕ್ತ ಶಂಕರಗೌಡ ಎಸ್. ಸೋಮನಾಳ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಾಯೋಗಿ ವೇಮನ ಜಯಂತ್ಯುತ್ಸವ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಯಂತ್ಯುತ್ಸವ ಅಂಗವಾಗಿ ಜಿಲ್ಲಾ
ಧಿಕಾರಿ ಕಾರ್ಯಾಲಯದಲ್ಲಿ ಅಂದು ಬೆಳಗ್ಗೆ ಮಹಾಯೋಗಿ ವೇಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಅದರಂತೆ ಜಿಲ್ಲೆಯ ಎಲ್ಲಾ ಗ್ರಾಪಂ, ಸರ್ಕಾರಿ ಕಚೇರಿ ಹಾಗೂ ಸರ್ಕಾರಿ, ಅನುದಾನಿತ ಶಾಲಾ-ಕಾಲೇಜುಗಳಲ್ಲಿ ಸಹ ಶ್ರದ್ಧಾ, ಭಕ್ತಿಯೊಂದಿಗೆ ವೇಮನ ಜಯಂತಿ ಕಡ್ಡಾಯವಾಗಿ ಆಚರಿಸಬೇಕು ಎಂದು ಸೂಚಿಸಿದರು.
ಜಿಲ್ಲಾಡಳಿತ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಮಾಜದ ಮುಖಂಡರು, ವಿದ್ಯಾರ್ಥಿಗಳು, ಸಭಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ, ಜಯಂತಿಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಜಿಲ್ಲಾ ಪೊಲೀಸ್ ಇಲಾಖೆಗೆ ಸೂಚಿಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಗೌರಮ್ಮ ದೊಂತಾ ಸಭೆ ನಡಾವಳಿ ಓದಿದರು. ಡಿಡಿಪಿಯು ಚಂದ್ರಶೇಖರ ಜೆ. ಹಿಳ್ಳಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾ ಧಿಕಾರಿ ಬಿ. ರೇವಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ವಿಶ್ವನಾಥ ಕಡ್ಡಿ ಇದ್ದರು. ಸಭೆಯಲ್ಲಿ ಸಮಾಜದ ಮುಖಂಡರು ಪಾಲ್ಗೊಂಡಿದ್ದರು.