Advertisement
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ವಿಕೋಪ ನಿರ್ವಹಣಾ ಪ್ರಾಧಿಕಾರ ಹಾಗೂ ಜಿಲ್ಲಾ ಅಧಿಕಾರಿಗಳ ಸಹಯೋಗದಲ್ಲಿ ಜಿಲ್ಲಾ ವಿಕೋಪ ನಿರ್ವಹಣಾ ಯೋಜನೆ ಪರಿಷ್ಕರಣೆ ಹಾಗೂ ವಿಕೋಪ ಮಿತಗೊಳಿಸುವಿಕೆ, ಪೂರ್ವಸಿದ್ಧತೆ ಹಾಗೂ ಸ್ಪಂದನಾ ಯೋಜನೆಯ ಕುರಿತು ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
Related Articles
Advertisement
ಜಿಲ್ಲೆಯಲ್ಲಿ ಭೀಮಾ ಮತ್ತು ಕೃಷ್ಣಾ ನದಿಗಳು ಹರಿಯುತ್ತಿದ್ದು, ನದಿ ದಂಡೆಯ ಗ್ರಾಮಗಳು ಮಳೆಗಾಲದಲ್ಲಿ ನೆರೆ ಹಾವಳಿಗೆ ಒಳಗಾಗುವ ಸಂಭವ ಇರುತ್ತದೆ. ಆದ್ದರಿಂದ ಅಂತಹ ಗ್ರಾಮಗಳ ಜನರಲ್ಲಿ ನದಿಗೆ ಜಾನುವಾರು ಮತ್ತು ಜನ ಇಳಿಯದಂತೆ ಅರಿವು ಮೂಡಿಸಬೇಕು. ರೈತರು, ಕುರಿ ಮತ್ತು ದನಗಾಹಿಗಳು ಹೆಚ್ಚು ಸಿಡಿಲು ಬಡಿದು ಸಾವನ್ನಪ್ಪುತ್ತಾರೆ. ಆದ್ದರಿಂದ ಅವರಿಗೆ ಗುಡುಗು ಸಹಿತ ಮಳೆ ಬರುವ ಸಂದರ್ಭದಲ್ಲಿ ಗಿಡದ ಕೆಳಗಡೆ ನಿಲ್ಲದಂತೆ ಮತ್ತು ಇನ್ನಿತರ ಸಲಹೆಗಳನ್ನು ನೀಡಬೇಕು ಎಂದು ಸೂಚಿಸಿದರು.
ಅಪರ ಜಿಲ್ಲಾಕಾರಿ ಪ್ರಕಾಶ ಜಿ.ರಜಪೂತ ಮಾತನಾಡಿ, ಕರ್ನಾಟಕ ಸರ್ಕಾರದಿಂದ ತಯಾರಿಸಿದ ಸಿಡಿಲು ಆ್ಯಪ್ ಅನ್ನು ಪ್ರತಿಯೊಬ್ಬರೂ ಡೌನ್‌ಲೋಡ್ ಮಾಡಿಕೊಳ್ಳಬೇಕು. ಇದರಿಂದ ಹವಾಮಾನ ಮುನ್ಸೂಚನೆ ಮತ್ತು ಮುಂಜಾಗ್ರತಾ ಕ್ರಮಗಳ ಮಾಹಿತಿ ಪಡೆದುಕೊಳ್ಳಬಹುದು ಎಂದು ತಿಳಿಸಿದರು.
ಮೈಸೂರು ಆಡಳಿತ ತರಬೇತಿ ಸಂಸ್ಥೆಯ ವಿಕೋಪ ನಿರ್ವಹಣಾ ಕೇಂದ್ರದ ತರಬೇತಿ ನಿರ್ದೇಶಕರಾದ ಅಲೆಕ್ ಲೋಬೋ ಅವರು ಜಿಲ್ಲಾ ಮಟ್ಟದ ವಿಕೋಪ ನಿರ್ವಹಣೆಯ ಯೋಜನೆ ತಯಾರಿಕೆ, ಪುನರ್ ಪರಿಶೀಲನೆಯಲ್ಲಿ ಜಿಲ್ಲಾಡಳಿತದ ಜವಾಬ್ದಾರಿಗಳು ಹಾಗೂ ಜಿಲ್ಲಾ ಮಟ್ಟದ ವಿಕೋಪ ನಿರ್ವಹಣಾ ಯೋಜನೆಯ ವಿವಿಧ ಹಂತಗಳು, ವಿಕೋಪ ನಿರ್ವಹಣೆಯ ವಿವಿಧ ಹಂತಗಳಲ್ಲಿ ಅಧಿಕಾರಿಗಳು, ಸರ್ಕಾರೇತರ ಸಂಸ್ಥೆಗಳು, ಸಮುದಾಯ, ಶಾಲಾ- ಕಾಲೇಜುಗಳು, ಸಂಘ-ಸಂಸ್ಥೆಗಳ ಪಾತ್ರ ಕುರಿತು ತರಬೇತಿ ನೀಡಿದರು.
ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ವಸಂತ ವಿ. ಕುಲಕರ್ಣಿ, ಡಿವೈಎಸ್‌ಪಿ ಯು. ಶರಣಪ್ಪ, ಜಿಲ್ಲಾ ತರಬೇತಿ ಸಂಸ್ಥೆಯ ಅಂಬೋಜಿ ನಾಯ್ಕೋಡಿ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಹನುಮನಗೌಡ ಪಾಟೀಲ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಆರ್.ದೇವಿಕಾ, ತಹಶೀಲ್ದಾರ್ ಶಿವರಾಜ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ಸರಕಾರದ ಎಲ್ಲಾ ಇಲಾಖೆಗಳು ಸಮನ್ವಯತೆ, ಸಹಕಾರದಿಂದ ಕಾರ್ಯನಿರ್ವಹಿಸಿದಾಗ ಜಿಲ್ಲೆಯಲ್ಲಿ ಸಂಭವಿಸುವ ನೈಸರ್ಗಿಕ ವಿಕೋಪಗಳನ್ನು ಯಶಸ್ವಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ. ಹಾಗಾಗಿ, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಇಂತಹ ತರಬೇತಿ ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕು.•ಋಷಿಕೇಶ ಭಗವಾನ ಸೋನವಣೆ,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ